Categories: ಬೀದರ್

ಹುಮನಾಬಾದ್: ಬೇನಚಿಂಚೋಳಿ ಸರಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನ ಆಚರಣೆ

ಹುಮನಾಬಾದ್: ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ(ರಿ )ರಾಜ್ಯ ಘಟಕ ಧಾರವಾಡ, ಜಿಲ್ಲಾ ಘಟಕ ಬೀದರ ಹಾಗೂ ಸರಕಾರಿ ಪ್ರೌಢಶಾಲೆ ಬೇನಚಿಂಚೋಳಿ ಇವರ ಸಂಯುಕ್ತ ಆಶ್ರಯದಲ್ಲಿ ಇಂದು ಬೀದರ ಜಿಲ್ಲೆ, ಹುಮನಾಬಾದ್ ತಾಲೂಕಿನ ಸರಕಾರಿ ಪ್ರೌಢಶಾಲೆ ಬೇನಚಿಂಚೋಳಿಯಲ್ಲಿ ವಿಶ್ವ ಪರಿಸರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಪರಿಸರ ದಿನದ ಕುರಿತು ವಿಶೇಷ ಉಪನ್ಯಾಸವನ್ನು ಕರ್ನಾಟಕ ಸಾವಿತ್ರಿಬಲ್ಲಿ ಶಿಕ್ಷಕಿಯರ ಸಂಘ ಜಿಲ್ಲಾ ಘಟಕ ಬೀದರ್ ನ ಉಪಾಧ್ಯಕ್ಷರಾದ ಬಾಯಿರೆಡ್ಡಿ ನೀಡಿದರು. ಮಕ್ಕಳು ಪರಿಸರವನ್ನು ಕಾಳಜಿಯಿಂದ ನೋಡಿಕೊಂಡಾಗ ನಮಗೆ ಪರಿಸರ ಪೂರಕವಾಗಿ ಇರುತ್ತದೆ ಎಂದು ಹೇಳಿದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ವಿನೋದ ಗೌಡ ಅವರು ಪರಿಸರ ಸ್ವಚ್ಛತೆ ಹಾಗೂ ಪರಿಸರದಲ್ಲಿ ಸಮತೋಲನ ಹೇಗೆ ಕಾಪಾಡಬೇಕು ಎಂಬ ವಿಷಯ ಕುರಿತು ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷ್ಯ ಸ್ಥಾನ ವಹಿಸಿದ ಶಾಲೆಯ ಮುಖ್ಯ ಗುರುಗಳಾದ ಅರ್ಜುನ್ ಕಾಂಬಳೆ ಅವರು ಪರಿಸರ ದಿನಾಚರಣೆಯು ದಿನಾಚರಣೆ ಆಗದೆ ಅದು ಅರ್ಥಪೂರ್ಣವಾಗಬೇಕು, ವರ್ಷವಿಡಿ ಪರಿಸರದ ಬಗ್ಗೆ ಕಾಳಜಿ ತೋರಬೇಕು ಎಂದು ಹೇಳಿದರು.

ಸಂಘದ ಜಿಲ್ಲಾಧ್ಯಕ್ಷ ಸಾರಿಗೆ ಗಂಗಾ ಅವರು ಪರಿಸರದ ಕುರಿತು ಕೆಲವು ಹಾಡುಗಳನ್ನು ಹಾಡಿಸಿ ಪರಿಸರ ಸಂರಕ್ಷಣೆ ಕುರಿತು ಮಾಹಿತಿ ನೀಡಿದರು. ಈ ಕಾರ್ಯಕ್ರಮದಲ್ಲಿ ಶಾಲೆ ಸಿಬ್ಬಂದಿಗಳಾದ ಶ್ರೀ ರಾಜೇಂದ್ರ ಶ್ರೀ ರಮೇಶ್,ರಾಜೇಶ್,ಅಂಜಿ ರೆಡ್ಡಿ, ರೀಟಾಏವಲಿನ್ ಹಾಗೂ 8,9, 10ನೇ ತರಗತಿಯ ಮಕ್ಕಳು ಭಾಗವಹಿಸಿ ಅನೇಕ ವಿಧದ ಸಸಿಗಳನ್ನು ಕೂಡ ನೆಡುವುದರೊಂದಿಗೆ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಿದರು.10 ನೇ ತರಗತಿಯ ವಿದ್ಯಾರ್ಥಿನಿ ಭಾಗ್ಯಶ್ರೀ ಸ್ವಾಗತ ಕೋರಿದರು, ವಿಜಯಲಕ್ಷ್ಮಿ ಹಾಗೂ ತಂಡದವರು ಪ್ರಾರ್ಥನೆ ಹಾಡಿದರು,ಸಾರಿಕಾ ಗಂಗಾ ಕಾರ್ಯಕ್ರಮ ನಿರೂಪಣೆ ಮಾಡಿದರು.

Gayathri SG

Recent Posts

ಭೂದೇವಿ ಸಮೇತ ಶ್ರೀಲಕ್ಷ್ಮಿವರಾಹಸ್ವಾಮಿಗೆ ಅಭಿಷೇಕ

ವರಹಾ ಜಯಂತಿಯ ಅಂಗವಾಗಿ ಕೃ?ರಾಜಪೇಟೆ ತಾಲ್ಲೂಕಿನ ಕಲ್ಲಹಳ್ಳಿಯ ಭೂದೇವಿ ಸಮೇತ ಶ್ರೀಲಕ್ಷ್ಮಿ ಭೂವರಾಹಸ್ವಾಮಿಯ ಶಿಲಾಮೂರ್ತಿಗೆ ವಿಶೇ? ಅಭಿ?ಕ ನಡೆಯಿತಲ್ಲದೆ, ಸ್ವಾಮಿಯ…

30 mins ago

ನನ್ನ ವಿರುದ್ಧ ದೇವರಾಜೇಗೌಡ ಮಾಡಿರುವ ಆಪಾದನೆಗಳು ಆಧಾರ ರಹಿತ: ಡಿಕೆ ಶಿವಕುಮಾರ್

ಹಾಸನ ವಿಡಿಯೋ ಪೆನ್​ಡ್ರೈವ್​ ಸೂತ್ರಧಾರಿ ಡಿಕೆ ಶಿವಕುಮಾರ್ ಎಂದು ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಗಂಭೀರ ಆರೋಪ ಮಾಡಿ ಆಡಿಯೋವೊಂದನ್ನು…

39 mins ago

ರಾಜ್ಯದ ಹಲವೆಡೆ ಮುಂದಿನ 5 ದಿನಗಳ ಕಾಲ‌ ಗುಡುಗು ಸಹಿತ ಮಳೆ ಸಾಧ್ಯತೆ

ರಾಜ್ಯದ ಹಲವೆಡೆ ಇಂದಿನಿಂದ ಮೇ 11ರವರೆಗೆ ವರುಣ ಆಗಮನ ಆಗುವ ಮುನ್ಸೂಚನೆ. ಹಾಗೂ ಮುಂದಿನ 5 ದಿನಗಳ ಕಾಲ‌ ಗುಡುಗು…

1 hour ago

ಬೀದರ್ ಮಾರುಕಟ್ಟೆಯಲ್ಲಿ ಎಲ್ಲಿ ನೋಡಿದರು ಮಾವಿನ ಹಣ್ಣಿನ ದರ್ಬಾರ್‌

ಯುಗಾದಿ ಮುಗಿಯುತ್ತಿದ್ದಂತೆ ಎಲ್ಲೆಡೆ ಮಾವಿನ ಹಣ್ಣುಗಳ ದರ್ಬಾರ ಕಂಡುಬರುತ್ತಿದೆದೆ. ಮಾರುಕಟ್ಟೆಗೆ ಮಾವಿನಕಾಯಿ ಹೆಚ್ಚಾಗಿ ಬರುತ್ತಿದೆ. ಸಾಲಾಗಿ ಜೋಡಿಸಿಟ್ಟ ಮಾವಿನ ಹಣ್ಣು…

1 hour ago

ಬಾಲಕಿ ಮೇಲೆ 2 ರಾಟ್‌ವೀಲರ್ ನಾಯಿಗಳಿಂದ ದಾಳಿ: ಮಾಲೀಕ ಅರೆಸ್ಟ್

ಎರಡು ರಾಟ್‌ವೀಲರ್ ನಾಯಿಗಳು ಐದು ವರ್ಷದ ಬಾಲಕಿ ಮೇಲೆ ದಾಳಿ ಮಾಡಿದ ಘಟನೆ ಚೆನ್ನೈನ ಥೌಸಂಡ್ ಲೈಟ್ಸ್ ಪ್ರದೇಶದ ಸಾರ್ವಜನಿಕ…

2 hours ago

ಬೀದರ್: ಬಿಸಿಲಿನ ಝಳಕ್ಕೆ ಚುನಾವಣೆ ಸಿಬ್ಬಂದಿ ತತ್ತರ

ಮಂಗಳವಾರ ನಡೆಯಲಿರುವ ಲೋಕಸಭೆ ಚುನಾವಣೆಗೆ ಚುನಾವಣೆ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಸೋಮವಾರ ಮಧ್ಯಾಹ್ನದಿಂದಲೇ ಕರ್ತವ್ಯ ನಿರತ ಸಿಬ್ಬಂದಿ ಮತಗಟ್ಟೆಗೆ…

2 hours ago