News Karnataka Kannada
Sunday, April 28 2024
ಬೀದರ್

ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ಪತಿ ಕುಡಿಯುವ ನೀರಿನ ಟ್ಯಾಂಕ್‌ ಗೆ ಹಾರಿ ಆತ್ಮಹತ್ಯೆ

ವ್ಯಕ್ತಿ ಕುಡಿಯುವ ನೀರಿನ ಟ್ಯಾಂಕ್‍ಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೀದರ್ ತಾಲೂಕಿನ ಅಣದೂರ್ ಗ್ರಾಮದಲ್ಲಿ ನಡೆದಿದೆ. ಮೃತನ ಪತ್ನಿ ಬೇರೊಬ್ಬನ ಜೊತೆ ಅನೈತಿಕ ಸಂಬಂಧ ಹೊಂದಿದ್ದು, ಆತನೊಂದಿಗೆ ಪರಾರಿಯಾಗಿದ್ದಕ್ಕೆ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಪೊಲೀಸರು ಶಂಕಿಸಿದ್ದಾರೆ.
Photo Credit : NewsKarnataka

ಬೀದರ್: ವ್ಯಕ್ತಿ ಕುಡಿಯುವ ನೀರಿನ ಟ್ಯಾಂಕ್‍ಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೀದರ್ ತಾಲೂಕಿನ ಅಣದೂರ್ ಗ್ರಾಮದಲ್ಲಿ ನಡೆದಿದೆ. ಮೃತನ ಪತ್ನಿ ಬೇರೊಬ್ಬನ ಜೊತೆ ಅನೈತಿಕ ಸಂಬಂಧ ಹೊಂದಿದ್ದು, ಆತನೊಂದಿಗೆ ಪರಾರಿಯಾಗಿದ್ದಕ್ಕೆ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಪೊಲೀಸರು ಶಂಕಿಸಿದ್ದಾರೆ.

ದಾಸರ್ (27) ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ. ಎರಡು ದಿನಗಳ ಹಿಂದೆಯೇ ಟ್ಯಾಂಕ್‍ಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದು ತಡವಾಗಿ ಬೆಳಕಿಗೆ ಬಂದಿದೆ. ನಲ್ಲಿಯಲ್ಲಿ ಬರುತ್ತಿದ್ದ ನೀರು ವಾಸನೆ ಬರುತ್ತಿದ್ದ ಕಾರಣ, ಟ್ಯಾಂಕ್‍ನ್ನು ಜನ ಪರಿಶೀಲಿಸಿದಾಗ ದಾಸರ್‍ನ ಮೃತದೇಹ ಪತ್ತೆಯಾಗಿದೆ. ಬಳಿಕ ಅಗ್ನಿಶಾಮಕ ದಳದ ಸಿಬ್ಬಂದಿ ಮೃತದೇಹ ಹೊರಗೆ ತೆಗೆದಿದ್ದಾರೆ.

ಕುಡಿಯುವ ನೀರಿನಲ್ಲಿ ಶವ ಪತ್ತೆಯಾದ ಹಿನ್ನೆಲೆ, ಆರೋಗ್ಯ ಇಲಾಖೆಯ ಸಿಬ್ಬಂದಿ ಗ್ರಾಮದಲ್ಲಿ ವಾಸ್ತವ್ಯ ಹೂಡಿದ್ದಾರೆ. ಟ್ಯಾಂಕ್ ನೀರು ಕುಡಿದು ಯಾರಿಗಾದರೂ ಆರೋಗ್ಯದ ಸಮಸ್ಯೆಯಾದರೆ ಅಗತ್ಯ ಚಿಕಿತ್ಸೆ ಪಡೆಯುವಂತೆ ಅಧಿಕಾರಿಗಳು ತಿಳಿಸಿದ್ದಾರೆ. ಈ ಸಂಬಂಧ ಜನವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು