Categories: ಬೀದರ್

ಲಂಚಕ್ಕೆ ಬೇಡಿಕೆಯಿಟ್ಟರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿವೈಎಸ್ಪಿ ಎ.ಆರ್.ಕರ್ನೂಲ್

ಬೀದರ್ : ‘ಡಿ. 13ರಂದು ಜಿಲ್ಲೆಯ ಹಲವೆಡೆ ಲೋಕಾಯುಕ್ತ ಪೊಲೀಸರು ಸಾರ್ವಜನಿಕರ ಅಹವಾಲು ಸ್ವೀಕರಿಸಲಿದ್ದಾರೆ. ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ನ್ಯಾಯ ಸಮ್ಮತ ಕೆಲಸಗಳಿಗೆ ಲಂಚದ ಬೇಡಿಕೆ ಇಟ್ಟರೆ ಅಂತಹ ಸರ್ಕಾರಿ ಅಧಿಕಾರಿ ಹಾಗೂ ಸಿಬ್ಬಂದಿ ವಿರುದ್ಧ ದೂರು ಕೊಟ್ಟರೆ ಸ್ವೀಕರಿಸಿ ಕ್ರಮ ಜರುಗಿಸಲಾಗುವುದು’ ಎಂದು ಲೋಕಾಯುಕ್ತ ಕಲಬುರಗಿ ವಿಭಾಗದ ಡಿವೈಎಸ್ಪಿ ಎ.ಆರ್.ಕರ್ನೂಲ್ ತಿಳಿಸಿದ್ದಾರೆ.

‘ಸರ್ಕಾರಿ ಕಚೇರಿಗಳಲ್ಲಿ ಜಾಗೃತಿ ಮೂಡಿಸಿ, ಭ್ರಷ್ಟಾಚಾರಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ಸಾರ್ವಜನಿಕರಿಂದ ಅರ್ಜಿಗಳನ್ನು ಸ್ವೀಕರಿಸಲಾಗುವುದು. ಸಾಧ್ಯವಾದಲ್ಲಿ ಅಲ್ಲಿಯೇ ದೂರುದಾರರ ಅಹವಾಲು ಬಗೆಹರಿಸಲಾಗುವುದು. ಸಾರ್ವಜನಿಕರು ತಮ್ಮ ಅರ್ಜಿಗಳನ್ನು ಫಾರಂ ನಂ.1 ಮತ್ತು 2ರಲ್ಲಿ ಭರ್ತಿ ಮಾಡಿ ಸಲ್ಲಿಸಬಹುದು’ ಎಂದು ಸೋಮವಾರ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

ಸಾರ್ವಜನಿಕರಿಂದ ಜಿಲ್ಲೆಯ ವಿವಿಧೆಡೆ ಅಹವಾಲು ಸ್ವೀಕರಿಸುವ ಸಮಯದ ಮಾಹಿತಿ ಇಂತಿದೆ. ಡಿ.13ರಂದು ಬೀದರ್‌ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಬೆಳಿಗ್ಗೆ 11ರಿಂದ ಮಧ್ಯಾಹ್ನ 1.30ರ ವರೆಗೆ, ಹುಲಸೂರು ತಾಲ್ಲೂಕು ಪ್ರವಾಸಿ ಮಂದಿರದಲ್ಲಿ ಬೆಳಿಗ್ಗೆ 11ರಿಂದ ಮಧ್ಯಾಹ್ನ 1.30ರ ವರೆಗೆ, ಬಸವಕಲ್ಯಾಣದ ಪ್ರವಾಸಿ ಮಂದಿರದಲ್ಲಿ ಮಧ್ಯಾಹ್ನ 3ರಿಂದ ಸಂಜೆ 5.30ರ ವರೆಗೆ, ಭಾಲ್ಕಿ ಪ್ರವಾಸಿ ಮಂದಿರದಲ್ಲಿ ಬೆಳಿಗ್ಗೆ 11ರಿಂದ ಮಧ್ಯಾಹ್ನ 1.30ರ ವರೆಗೆ, ಹುಮನಾಬಾದ್‌ ತಾಲ್ಲೂಕು ಪ್ರವಾಸಿ ಮಂದಿರದಲ್ಲಿ ಮಧ್ಯಾಹ್ನ 3ರಿಂದ ಸಂಜೆ 5.30ರ ವರೆಗೆ, ಚಿಟಗುಪ್ಪ ಪ್ರವಾಸಿ ಮಂದಿರದಲ್ಲಿ ಬೆಳಿಗ್ಗೆ 11ರಿಂದ ಮಧ್ಯಾಹ್ನ 1.30ರ ವರೆಗೆ, ಔರಾದ್‌ (ಬಿ) ತಾಲ್ಲೂಕು ಪ್ರವಾಸಿ ಮಂದಿರದಲ್ಲಿ ಬೆಳಿಗ್ಗೆ 11ರಿಂದ ಮಧ್ಯಾಹ್ನ 1.30ರ ವರೆಗೆ, ಕಮಲನಗರ ತಾಲ್ಲೂಕು ಪ್ರವಾಸಿ ಮಂದಿರದಲ್ಲಿ ಮಧ್ಯಾಹ್ನ 3ರಿಂದ ಸಂಜೆ 5.30ರ ವರೆಗೆ ಅಹವಾಲು ಸ್ವೀಕರಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಲೋಕಾಯುಕ್ತ ಪೊಲೀಸ್‌ ಅಧಿಕಾರಿಗಳ ಮೊಬೈಲ್‌ ಸಂಖ್ಯೆಗಳು ಇಂತಿವೆ. ಲೋಕಾಯುಕ್ತ ಕಲಬುರಗಿ ಡಿವೈಎಸ್ಪಿ ಎ.ಆರ್‌. ಕರ್ನೂಲ್‌ -9880413329, ಬೀದರ್‌ ಡಿವೈಎಸ್ಪಿ ಎನ್.ಎಂ.ಓಲೇಕಾರ- 9364062571, ಪೊಲೀಸ್‌ ಇನ್‌ಸ್ಪೆಕ್ಟರ್‌ಗಳಾದ ಸಂತೋಷಕುಮಾರ-9364062672, ಪ್ರದೀಪ್ ಕೊಳ್ಳಾ -9364062673, ಬಾಬಾಸಾಹೇಬ ಪಾಟೀಲ-9364062674, ವಾಹೇದ ಹುಸೇನ್‌ ಕೊತ್ವಾಲ್-9364062675.

ಹೆಚ್ಚಿನ ಮಾಹಿತಿಗೆ, ನೇರ ದೂರು ಸಲ್ಲಿಕೆಗೆ ನಗರದ ಕೆಎಚ್‌ಬಿ ಕಾಲೊನಿಯ ಕರ್ನಾಟಕ ಲೋಕಾಯುಕ್ತ ಪೊಲೀಸ್ ಠಾಣೆ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

Ashika S

Recent Posts

ಪ್ರವೀಣ್ ನೆಟ್ಟಾರು ಹತ್ಯೆ ಕೇಸ್; ಪ್ರಮುಖ ಆರೋಪಿ ಬಂಧನಕ್ಕೆ ಪತ್ನಿ ನೂತನ ಸಂತಸ

ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಮುಸ್ತಫಾ ಪೈಚಾರನ್ನ ಎನ್‌ಐಎ ಅಧಿಕಾರಿಗಳು ಬಂಧಿಸಿದ್ದು, ಮುಸ್ತಫಾ…

20 seconds ago

ಮೊದಲ ಬಾರಿಗೆ ಮರಾಠಿ ಭಾಷೆಯಲ್ಲಿ ಯಕ್ಷಗಾನ ಪ್ರದರ್ಶನ

ಕನ್ನಡದ ಹೆಮ್ಮೆಯ ಕಲೆ ಯಕ್ಷಗಾನ ಇದೀಗ ಗಡಿಗಳನ್ನು ದಾಟಿ ಮಹಾರಾಷ್ಟ್ರದ ಕಡೆಗೆ ಪಯಣ ಬೆಳೆಸಿದೆ. ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ…

13 mins ago

ತೃತೀಯ ಲಿಂಗಿಯ ಹತ್ಯೆ ಪ್ರಕರಣ: ಮಹಿಳೆಯ ಬಂಧನ

ತೃತೀಯ ಲಿಂಗಿಯನ್ನು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕೊಲೆ ಆರೋಪಿಯನ್ನು ಬಂಧಿಸಿದ್ದಾರೆ.

31 mins ago

ಬಿಗ್‌ಬಾಸ್‌ 16 ಸ್ಪರ್ಧಿ ʼಅಬ್ದು ರೋಝಿಕ್‌ʼಗೆ ಮದುವೆಯಂತೆ

ಬಿಗ್‌ಬಾಸ್‌ 16ನಲ್ಲಿ ಸ್ಪರ್ಧಿಸಿದ್ದ ಅಬ್ದು ರೋಝಿಕ್‌ ವಿಡಿಯೋವೊಂದನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ತಾನೀಗ ಪ್ರೀತಿಗೆ ಬಿದ್ದಿದ್ದು, ಜುಲೈ 7ರಂದು ಮನಮೆಚ್ಚಿದ…

42 mins ago

ಕೆ.ಆರ್.ಪೇಟೆಯಲ್ಲಿ ಜೆಡಿಎಸ್ ನಿಂದ ಬೃಹತ್ ಪ್ರತಿಭಟನೆ

ಹಾಸನದ ಸಿ.ಡಿ.ಹಗರಣವನ್ನು ಸಿ.ಬಿ.ಐ ತನಿಖೆಗೆ ಒಪ್ಪಿಸುವಂತೆ ಆಗ್ರಹಿಸಿ ಪಟ್ಟಣದಲ್ಲಿಂದು ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

57 mins ago

ಸೊಳ್ಳೆ ‘ಟ್ವೀಟ್ ಕಳುಹಿಸುವ’ ಫೋಟೋ ವೈರಲ್‌

ನಾವು ಪ್ರತಿದಿನ ಸೋಶಿಯಲ್‌ ಮಿಡಿಯಾಗಳಲ್ಲಿ ಹಲವಾರು ಟ್ವೀಟ್‌ಗಳು ಮತ್ತು ಪೋಸ್ಟ್ ಗಳನ್ನು ನೋಡುತ್ತೇವೆ.ಅದರಲ್ಲೂ ಕೆಲ ಪೋಸ್ಟ್‌ ಗಳು ನಮ್ಮನ್ನು ನಗುವಂತೆ…

1 hour ago