News Karnataka Kannada
Wednesday, May 08 2024
ಬೀದರ್

ಗುನ್ನಳ್ಳಿಯಲ್ಲಿ ಡಾ. ಅಂಬೇಡ್ಕರ್‌ ಸಮುದಾಯ ಭವನ ನಿರ್ಮಾಣಕ್ಕೆ ಭೂಮಿ ಪೂಜೆ

Bhumipooje
Photo Credit : News Kannada

ಬೀದರ್: ಜಿಲ್ಲೆಯ ದಕ್ಷಿಣ ಕ್ಷೇತ್ರದ ಗುನ್ನಳ್ಳಿ ಗ್ರಾಮದಲ್ಲಿ ಸಮಾಜ ಕಲ್ಯಾಣ ಇಲಾಖೆ ಅನುದಾನದಡಿಯ 12 ಲಕ್ಷ ರೂ. ವೆಚ್ಚದ ಡಾ. ಬಿ.ಆರ್. ಅಂಬೇಡ್ಕರ್ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ, ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ, ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು, ಹೀಗಾಗಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಆಗಬೇಕಿರುವ ಅಭಿವೃದ್ಧಿ ಕಾರ್ಯಗಳ ಪಟ್ಟಿ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದ ಅವರು, ಮುಂದಿನ ದಿನಗಳಲ್ಲಿ ಗ್ರಾಮೀಣ ಭಾಗದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ತಿಳಿಸಿದರು.

ಗ್ರಾಮೀಣ ಪ್ರದೇಶದಲ್ಲಿ ಪಿಡಿಒ ಅಧಿಕಾರಿಗಳು ಜನರ ಸಮಸ್ಯೆಗಳಿಗೆ ಸ್ಪಂದಿಸಿ, ಅಭಿವೃದ್ಧಿ ಕೆಲಸಗಳನ್ನು ಮಾಡಲು ಮುಂದಾಗಬೇಕು, ಗ್ರಾಮೀಣ ಪ್ರದೇಶದ ಜನರಿಗೆ ಮೂಲ ಸೌಲಭ್ಯಗಳನ್ನು ಒದಗಿಸುವ ಕೆಲಸ ಮಾಡಬೇಕು ಎಂದು ತಿಳಿಸಿದ ಅವರು, ಗ್ರಾಮೀಣ ಪ್ರದೇಶದ ಅಭಿವೃದ್ಧಿಯಾದರೆ ಮಾತ್ರ ಕ್ಷೇತ್ರ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಇದೇ ಸಂದರ್ಭದಲ್ಲಿ ಗ್ರಾಮಗಳಲ್ಲಿ ನಿವಾಸಿಗಳು ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಮಾಡುವಂತೆ ಶಾಸಕರಿಗೆ ಮನವಿ ಪತ್ರಗಳನ್ನು ಸಲ್ಲಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು