News Karnataka Kannada
Monday, May 06 2024
ಬೀದರ್

ಪೋಸ್ಟರ್‌ ಮೂಲಕ ಸಚಿವ ಭಗವಂತ ಖೂಬಾ ಅವಹೇಳನ : ದೂರು ದಾಖಲು

ಲೋಕಸಭೆ ಚುನಾವಣೆ ಬೀದರ್‌ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಹಾಗೂ ಕೇಂದ್ರ ಸಚಿವ ಭಗವಂತ ಖೂಬಾ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದವರ ವಿರುದ್ಧ ಕ್ರಮಕ್ಕೆ ಆಗ್ರಹಿಸಲಾಗಿದ್ದು, ಪೊಲೀಸರಿಗೆ ದೂರು ನೀಡಲಾಗಿದೆ.
Photo Credit : NewsKarnataka

ಬೀದರ್ : ಲೋಕಸಭೆ ಚುನಾವಣೆ ಬೀದರ್‌ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಹಾಗೂ ಕೇಂದ್ರ ಸಚಿವ ಭಗವಂತ ಖೂಬಾ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದವರ ವಿರುದ್ಧ ಕ್ರಮಕ್ಕೆ ಆಗ್ರಹಿಸಲಾಗಿದ್ದು, ಪೊಲೀಸರಿಗೆ ದೂರು ನೀಡಲಾಗಿದೆ.

ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ಬಿಜೆಪಿ ಕಾರ್ಯಕರ್ತರು ಆಗ್ರಹಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸೂಕ್ತ ಕಾನೂನು ಕ್ರಮಕ್ಕಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

ಇತ್ತೀಚಿಗೆ Viral Thoughts ಎನ್ನುವ ಫೇಸ್‌ಬುಕ್‌ ಪೇಜ್‌ನಲ್ಲಿ ಖೂಬಾ ಬಗ್ಗೆ ಪೋಸ್ಟ್‌ಗಳು ಹರಿದಾಡಿದ್ದವು. ಪೇಜ್‌ನಲ್ಲಿ ಕೇಂದ್ರ ಸಚಿವ ಭಗವಂತ ಖೂಬಾ ಬಗ್ಗೆ ಅವಹೇಳನಕಾರಿ ಪೋಸ್ಟ್‌ಗಳನ್ನು ಹಾಕಲಾಗಿತ್ತು. ʼವಾಂಟೆಡ್ʼ ಮತ್ತು ʼಗೂಂಡಾʼ ಎಂಬ ಅಸಭ್ಯ ಪದ ಬಳಕೆ ಮಾಡಲಾಗಿತ್ತು. ಇದರಿಂದ ಸಾಮಾಜಿಕ ಜಾಲತಾಣಗಳ ನಿಯಮ ಉಲ್ಲಂಘನೆ ಮಾಡಿದ್ದು, ಕ್ರಮ ತೆಗೆದುಕೊಳ್ಳಬೇಕು ಎಂದು ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ಕಾರ್ಯಕರ್ತರು ಆಗ್ರಹಿಸಿದ್ದಾರೆ.

ಪೋಸ್ಟರ್‌ಗಳು ಅನಾಮಿಕವಾಗಿದ್ದು, ಇವುಗಳಲ್ಲಿ “ಖೂಬಾ ಸೋಲಿಸಿ ಬೀದರ್‌ ಉಳಿಸಿ” ಎಂದು ಕರೆ ಕೊಡಲಾಗಿದೆ. ʼಅಹಂಕಾರಿ ಖೂಬಾʼ ಎಂದು ಕರೆಯಲಾಗಿದೆ. ಸಚಿವರಾಗಿ ದುರ್ವರ್ತನೆ ತೋರಿದ್ದಾರೆ ಹೊರತು ಕ್ಷೇತ್ರಕ್ಕಾಗಿ ಯಾವುದೇ ಕೆಲಸ ಮಾಡಿಲ್ಲ ಎಂದು ಬರೆಯಲಾಗಿದೆ. ಹಲವರು ಪೋಸ್ಟರ್‌ನ ಭಾಷೆಯ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು