News Karnataka Kannada
Tuesday, May 07 2024
ಬೀದರ್

ಬೀದರ್: ಅಂತರಾಜ್ಯ ಖದೀಮರ ಹೆಡೆಮುರಿ ಕಟ್ಟಿದ ಪೊಲೀಸರು

ರಾಜ್ಯದ 8 ಕಡೆ ಹಾಗೂ ನೆರೆರಾಜ್ಯದ 4 ಕಡೆ ಎಟಿಎಮ್ ದೋಚಿ ಪರಾರಿಯಾಗಿದ್ದ ಖತರ್ನಾಕ್ ಖದೀಮರ ಗ್ಯಾಂಗ್ ಅನ್ನು ಬೀದರ್ ಪೊಲೀಸರು ಹೆಡೆಮುರಿ ಕಟ್ಟಿದ್ದು, ಹರಿಯಾಣ ಮೂಲದ ಮೂವರನ್ನ ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
Photo Credit : News Kannada

ಬೀದರ್: ರಾಜ್ಯದ 8 ಕಡೆ ಹಾಗೂ ನೆರೆರಾಜ್ಯದ 4 ಕಡೆ ಎಟಿಎಮ್ ದೋಚಿ ಪರಾರಿಯಾಗಿದ್ದ ಖತರ್ನಾಕ್ ಖದೀಮರ ಗ್ಯಾಂಗ್ ಅನ್ನು ಬೀದರ್ ಪೊಲೀಸರು ಹೆಡೆಮುರಿ ಕಟ್ಟಿದ್ದು, ಹರಿಯಾಣ ಮೂಲದ ಮೂವರನ್ನ ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಕರ್ನಾಟಕದ ಬೀದರ್ ಜಿಲ್ಲೆಯ ಹಳ್ಳಿಖೆಡ್(ಬಿ), ಬಸವಕಲ್ಯಾಣ, ಚಿಟಗುಪ್ಪ, ವಿಜಯಪುರ ಜಿಲ್ಲೆಯ 2 ಕಡೆ ಮತ್ತು ಬೆಳಗಾವಿಯ ಯಮಕನಮರಡಿ, ಅಂಕಲಿ ಚಿಕ್ಕೋಡಿ ಸೇರಿದಂತೆ ಒಟ್ಟು 8 ಕಡೆ ಮತ್ತು ನೆರೆಯ ತೆಲಂಗಾಣದ ಸದಾಶಿವಪೇಟ ಹಾಗೂ ಮಹಾರಾಷ್ಟ್ರದ ಉಮ್ಮರ್ಗಾ ಮತ್ತು ಮುರುಮ ಸೇರಿದಂತೆ 4 ಕಡೆ ಕಳ್ಳತನ ಕೃತ್ಯ ಎಸಗಿ ಪರಾರಿಯಾಗಿದ್ದರು. ಒಟ್ಟು 12 ಎಟಿಎಮ್‌ಗಳನ್ನ ಲೂಟಿ ಮಾಡಿ 1,58, 26,700 ಹಣ ಲೂಟಿ ಮಾಡಿ ಪರಾರಿಯಾಗಿದ್ದರು.

ಪ್ರಕರಣ ಬೆನ್ನತ್ತಿದ ಪೊಲೀಸರು, ಹುಮನಾಬಾದ್ ಆರ್‌ಟಿಓ ಬಳಿ ಖದೀಮರರನ್ನ ಬಂಧಿಸಿ ವಿಚಾರಣೆ ನಡೆಸಿದಾಗ 12 ಎಟಿಎಮ್ ಕಳ್ಳತನ ಬಯಲಿಗೆ ಬಂದಿದೆ. ಪ್ರಕರಣದಲ್ಲಿ ಭಾಗಿಯಾಗಿದ್ದ 7 ಆರೋಪಿಗಳ ಪೈಕಿ ಹರಿಯಾಣ ರಾಜ್ಯದ ಶಾಹಿದ್ ಕಮಲ್ ಖಾನ್ , ರಿಹನ್ ಅಕ್ಬರ್ ಖಾನ್,ಇಲಿಯಾಸ್ ಅಬ್ದುಲ್ ರೆಹಮಾನ್‌ರನ್ನು ಬಂಧಿಸಲಾಗಿದ್ದು, ಬಂಧಿತರಿಂದ 9,50,000 ರೂಪಾಯಿ ನಗದು, ಬಿಳಿ ಬಣ್ಣದ ಕ್ರಿಟಾ ಕಾರ್ ಜಪ್ತಿ ಮಾಡಲಾಗಿದೆ. ಆರೋಪಿತರು ಗೂಗಲ್ ಮ್ಯಾಪ್ ಸಹಾಯದೊಂದಿಗೆ ಟೋಲ್ ಗೇಟ್ ಇಲ್ಲದ ರಸ್ತೆಯಲ್ಲಿ ನಕಲಿ ನಂಬರ್ ಪ್ಲೇಟ್‌ಗಳನ್ನ ಬಳಸಿ ಗ್ಯಾಸ್ ವೆಲ್ಡಿಂಗ್ ಮೂಲಕ ATM ದರೋಡೆ ನಡೆಸುತ್ತಿದ್ರು ಎಂದು ಎಸ್‌ಪಿ ಚೆನ್ನಬಸವಣ್ಣ ಲಂಗೋಟಿ ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು