News Karnataka Kannada
Monday, April 29 2024
ಬೀದರ್

ಬೀದರ್: ‘ಮೊದಲ ಸಲ ರೂಪುರೇಷೆ, ಎರಡನೇ ಸಲ ಉದ್ಘಾಟನೆ ನಿಶ್ಚಿತ’

`ಸಿದ್ದರಾಮಯ್ಯನವರು ಮೊದಲ ಸಲ ಮುಖ್ಯಮಂತ್ರಿ ಆಗಿದ್ದಾಗ ನೂತನ ಅನುಭವ ಮಂಟಪದ ರೂಪುರೇಷೆ ಸಿದ್ಧಪಡಿಸಲು ಸಮಿತಿ ರಚಿಸಿ ಅನುಮೋದನೆ ನೀಡಿದ್ದರು. ಈಗ ಎರಡನೇ ಸಲ ಆ ಸ್ಥಾನ ಪಡೆದಿರುವ ಇವರು ಶೀಘ್ರದಲ್ಲಿ ಕಟ್ಟಡ ಕಾಮಗಾರಿ ಪೂರ್ಣಗೊಳಿಸಿ ಉದ್ಘಾಟನೆ ನೆರವೆರಿಸುವುದು ನಿಶ್ಚಿತ' ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ.ಖಂಡ್ರೆ ಭರವಸೆ ವ್ಯಕ್ತಪಡಿಸಿದರು.
Photo Credit : News Kannada

ಬಸವಕಲ್ಯಾಣ: `ಸಿದ್ದರಾಮಯ್ಯನವರು ಮೊದಲ ಸಲ ಮುಖ್ಯಮಂತ್ರಿ ಆಗಿದ್ದಾಗ ನೂತನ ಅನುಭವ ಮಂಟಪದ ರೂಪುರೇಷೆ ಸಿದ್ಧಪಡಿಸಲು ಸಮಿತಿ ರಚಿಸಿ ಅನುಮೋದನೆ ನೀಡಿದ್ದರು. ಈಗ ಎರಡನೇ ಸಲ ಆ ಸ್ಥಾನ ಪಡೆದಿರುವ ಇವರು ಶೀಘ್ರದಲ್ಲಿ ಕಟ್ಟಡ ಕಾಮಗಾರಿ ಪೂರ್ಣಗೊಳಿಸಿ ಉದ್ಘಾಟನೆ ನೆರವೆರಿಸುವುದು ನಿಶ್ಚಿತ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ.ಖಂಡ್ರೆ ಭರವಸೆ ವ್ಯಕ್ತಪಡಿಸಿದರು.

ನಗರದ ಥೇರ ಮೈದಾನದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕನನ್ನಾಗಿ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಆಮಂತ್ರಣ ಪತ್ರಿಕೆಯಲ್ಲಿ ಅವರು ಅಧ್ಯಕ್ಷತೆ ವಹಿಸುವರು ಎಂದು ಮುದ್ರಿಸಲಾಗಿತ್ತು. ಆದರೆ, ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.

`ಸಾಹಿತಿ ಗೋ.ರು.ಚನ್ನಬಸಪ್ಪ ನೇತೃತ್ವದ ಸಮಿತಿ ನೀಡಿದ ವರದಿಯಂತೆ ಅನುಭವ ಮಂಟಪಕ್ಕೆ ₹620 ಕೋಟಿ ಅನುದಾನ ನೀಡಲು ಒಪ್ಪಿದ್ದರು. ಆದರೆ ಕೆಲ ದಿನಗಳಲ್ಲಿಯೇ ಚುನಾವಣೆ ಬಂದು ಬೇರೆ ಪಕ್ಷದವರು ಅಧಿಕಾರ ಹಿಡಿದರು. ಈಗ ಮತ್ತೆ ಇದಕ್ಕಾಗಿ ₹50 ಕೋಟಿ ಅನುದಾನ ಒದಗಿಸಿದ್ದು ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದ್ದಾರೆ. ಇನ್ನೂ ಎಷ್ಟೇ ಅನುದಾನ ಬೇಕಾದರೂ ಕೊಡುತ್ತೇನೆ ಎಂಬ ಭವವಸೆಯೂ ಅವರು ನೀಡಿದ್ದಾರೆ. ಮಹಿಳಾ ವಿಶ್ವವಿದ್ಯಾಲಯಕ್ಕೆ ಅಕ್ಕಮಹಾದೇವಿ ಹೆಸರು ಇಟ್ಟಿದ್ದಾರೆ. ಜಿಲ್ಲೆಯಲ್ಲಿನ ಬೀದರ್ ಸಹಕಾರ ಸಕ್ಕರೆ ಕಾರ್ಖಾನೆ ಬಿಜೆಪಿ ಆಡಳಿತದಲ್ಲಿ ಮುಚ್ಚಿದ್ದು ಪುನರಾರಂಭ ಮಾಡಬೇಕು. ಕಾರಂಜಾ ಸಂತ್ರಸ್ತರಿಗೆ ಪರಿಹಾರ ನೀಡಬೇಕು’ ಎಂದು ಆಗ್ರಹಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು