News Karnataka Kannada
Thursday, May 02 2024
ಬೀದರ್

ಜೆಜೆಎಂ ಅವ್ಯವಹಾರ ತನಿಖೆಗೆ ಆಗ್ರಹಿಸಿ ಧರಣಿ

'ತಾಲ್ಲೂಕಿನ ಇಸ್ಲಾಂಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಾಗೂ ಇತರೆ ಗ್ರಾಮಗಳಲ್ಲಿ ಜೆಜೆಎಂ ಕಾಮಗಾರಿ ಕಳಪೆ ಮಟ್ಟದಲ್ಲಿ ನಡೆದಿದ್ದು, ಈ ಬಗ್ಗೆ ತನಿಖೆ ಕೈಗೊಳ್ಳಬೇಕು' ಎಂದು ಆಗ್ರಹಿಸಿ ತಾಲ್ಲೂಕು ಬಹುಜನ ಸಮಾಜ ಪಕ್ಷದಿಂದ ತಾಲ್ಲೂಕು ಪಂಚಾಯಿತಿ ಕಚೇರಿ ಎದುರಲ್ಲಿ ಧರಣಿ ನಡೆಸಿ ಮನವಿಪತ್ರ ಸಲ್ಲಿಸಲಾಯಿತು.
Photo Credit : News Kannada

ಬಸವಕಲ್ಯಾಣ: ‘ತಾಲ್ಲೂಕಿನ ಇಸ್ಲಾಂಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಾಗೂ ಇತರೆ ಗ್ರಾಮಗಳಲ್ಲಿ ಜೆಜೆಎಂ ಕಾಮಗಾರಿ ಕಳಪೆ ಮಟ್ಟದಲ್ಲಿ ನಡೆದಿದ್ದು, ಈ ಬಗ್ಗೆ ತನಿಖೆ ಕೈಗೊಳ್ಳಬೇಕು’ ಎಂದು ಆಗ್ರಹಿಸಿ ತಾಲ್ಲೂಕು ಬಹುಜನ ಸಮಾಜ ಪಕ್ಷದಿಂದ ತಾಲ್ಲೂಕು ಪಂಚಾಯಿತಿ ಕಚೇರಿ ಎದುರಲ್ಲಿ ಧರಣಿ ನಡೆಸಿ ಮನವಿಪತ್ರ ಸಲ್ಲಿಸಲಾಯಿತು.

ಮಂಗಳೂರು, ಶಿವರಾಮ ತಾಂಡಾ, ಹಿರೇನಾಗಾಂವ, ನಾರಾಯಣಪುರ, ಕಿಟ್ಟಾ, ಗುತ್ತಿ ಗ್ರಾಮಗಳಲ್ಲಿನ ಕಾಮಗಾರಿ ಕುಂಟುತ್ತ ಸಾಗಿದೆ. ಆದ್ದರಿಂದ ಸಂಬಂಧಿತ ಜೆಇ ಮೇಲೆ ಕ್ರಮ ತೆಗೆದುಕೊಳ್ಳಬೇಕು. ಕೆಲಸ ಪೂರ್ಣಗೊಳ್ಳದಿದ್ದರೂ ಈ ಕಾರ್ಯಕ್ಕೆ ಕೆಲ ಪಂಚಾಯಿತಿ ಅಧಿಕಾರಿಗಳು ಮತ್ತು ಸದಸ್ಯರು ಸಹಕಾರ ನೀಡಿದ್ದಾರೆ. ಅವರ ಮೇಲೆ ಕ್ರಮ ತೆಗೆದುಕೊಳ್ಳಬೇಕು’ ಎಂದು ಸಹ ಆಗ್ರಹಿಸಲಾಯಿತು.

ಬಹುಜನ ಸಮಾಜ ಪಕ್ಷದ ತಾಲ್ಲೂಕು ಘಟಕದ ಅಧ್ಯಕ್ಷ ಶಂಕರ ಫುಲೆ, ಜಿಲ್ಲಾ ಉಪಾಧ್ಯಕ್ಷ ಅಶೋಕ ಮಂಠಾಳಕರ್, ಮಹಾದೇವ ಗಾಯಕವಾಡ, ದತ್ತು ಸುಂಠಾಣೆ, ಚೇತನ ಕಾಡೆ, ವಿಷ್ಣುಕಾಂತ ಸೂರ್ಯವಂಶಿ, ಅಶೋಕ ಶಿಂಧೆ, ರೋಷನ ಜವಾಹರ, ಸಚಿನ್‌ ಕಾಂಬಳೆ, ಸಂದೀಪ ಮತ್ತಿತರರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು