ಬೀದರ್

ಜೆಜೆಎಂ ಅವ್ಯವಹಾರ ತನಿಖೆಗೆ ಆಗ್ರಹಿಸಿ ಧರಣಿ

ಬಸವಕಲ್ಯಾಣ: ‘ತಾಲ್ಲೂಕಿನ ಇಸ್ಲಾಂಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಾಗೂ ಇತರೆ ಗ್ರಾಮಗಳಲ್ಲಿ ಜೆಜೆಎಂ ಕಾಮಗಾರಿ ಕಳಪೆ ಮಟ್ಟದಲ್ಲಿ ನಡೆದಿದ್ದು, ಈ ಬಗ್ಗೆ ತನಿಖೆ ಕೈಗೊಳ್ಳಬೇಕು’ ಎಂದು ಆಗ್ರಹಿಸಿ ತಾಲ್ಲೂಕು ಬಹುಜನ ಸಮಾಜ ಪಕ್ಷದಿಂದ ತಾಲ್ಲೂಕು ಪಂಚಾಯಿತಿ ಕಚೇರಿ ಎದುರಲ್ಲಿ ಧರಣಿ ನಡೆಸಿ ಮನವಿಪತ್ರ ಸಲ್ಲಿಸಲಾಯಿತು.

ಮಂಗಳೂರು, ಶಿವರಾಮ ತಾಂಡಾ, ಹಿರೇನಾಗಾಂವ, ನಾರಾಯಣಪುರ, ಕಿಟ್ಟಾ, ಗುತ್ತಿ ಗ್ರಾಮಗಳಲ್ಲಿನ ಕಾಮಗಾರಿ ಕುಂಟುತ್ತ ಸಾಗಿದೆ. ಆದ್ದರಿಂದ ಸಂಬಂಧಿತ ಜೆಇ ಮೇಲೆ ಕ್ರಮ ತೆಗೆದುಕೊಳ್ಳಬೇಕು. ಕೆಲಸ ಪೂರ್ಣಗೊಳ್ಳದಿದ್ದರೂ ಈ ಕಾರ್ಯಕ್ಕೆ ಕೆಲ ಪಂಚಾಯಿತಿ ಅಧಿಕಾರಿಗಳು ಮತ್ತು ಸದಸ್ಯರು ಸಹಕಾರ ನೀಡಿದ್ದಾರೆ. ಅವರ ಮೇಲೆ ಕ್ರಮ ತೆಗೆದುಕೊಳ್ಳಬೇಕು’ ಎಂದು ಸಹ ಆಗ್ರಹಿಸಲಾಯಿತು.

ಬಹುಜನ ಸಮಾಜ ಪಕ್ಷದ ತಾಲ್ಲೂಕು ಘಟಕದ ಅಧ್ಯಕ್ಷ ಶಂಕರ ಫುಲೆ, ಜಿಲ್ಲಾ ಉಪಾಧ್ಯಕ್ಷ ಅಶೋಕ ಮಂಠಾಳಕರ್, ಮಹಾದೇವ ಗಾಯಕವಾಡ, ದತ್ತು ಸುಂಠಾಣೆ, ಚೇತನ ಕಾಡೆ, ವಿಷ್ಣುಕಾಂತ ಸೂರ್ಯವಂಶಿ, ಅಶೋಕ ಶಿಂಧೆ, ರೋಷನ ಜವಾಹರ, ಸಚಿನ್‌ ಕಾಂಬಳೆ, ಸಂದೀಪ ಮತ್ತಿತರರು ಉಪಸ್ಥಿತರಿದ್ದರು.

Gayathri SG

Recent Posts

ಬ್ಯಾಂಕ್ ಗಳು ಒತ್ತಾಯಪೂರ್ವಕವಾಗಿ ಸಾಲ ವಸೂಲಿ ಮಾಡಬೇಡಿ: ಡಿಸಿ

ತೀವ್ರ ಬರಗಾಲದಿಂದ ರೈತರು ಸಂಕಷ್ಟದಲ್ಲಿದ್ದು, ಬ್ಯಾಂಕುಗಳು ಒತ್ತಾಯ ಪೂರ್ವಕವಾಗಿ ರೈತರಿಂದ ಸಾಲ ವಸೂಲಿ ಮಾಡಬಾರದು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅಧಿಕಾರಿಗಳಿಗೆ…

6 hours ago

ಕೇರಳದ 9 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

ಇಂದಿನಿಂದ ಮುಂದಿನ ಮಂಗಳವಾರದವರೆಗೆ ಕೇರಳದ  ಬಹುತೇಕ ಭಾಗಗಳಲ್ಲಿ  ಗುಡುಗು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ  ಮುನ್ಸೂಚನೆ ನೀಡಿದೆ.

6 hours ago

ಕೇರಳದಲ್ಲಿ ವೆಸ್ಟ್ ನೈಲ್ ಜ್ವರ: ಬಾವಲಿ ಚೆಕ್ ಪೋಸ್ಟ್ ನಲ್ಲಿ ಕಟ್ಟೆಚ್ಚರ

ಕೇರಳದಲ್ಲಿ ವೆಸ್ಟ್ ನೈಲ್ ಜ್ವರ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಕೇರಳದೊಂದಿಗೆ ಗಡಿ ಹಂಚಿಕೊಂಡಿರುವ ಮೈಸೂರು ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ಅಲರ್ಟ್ ಆಗಿದ್ದು, ಕಟ್ಟೆಚ್ಚರ ವಹಿಸಲಾಗಿದ್ದು, ಕೇರಳದಿಂದ ಆಗಮಿಸುವವರತ್ತ ನಿಗಾವಹಿಸಲಾಗುತ್ತಿದೆ.

6 hours ago

ಬಿರುಗಾಳಿಯೊಂದಿಗೆ ಸುರಿದ ಮಳೆ: ಮಾವು, ಪಪ್ಪಾಯಿ ಬೆಳೆಗೆ ಹಾನಿ

ತಾಲ್ಲೂಕಿನ ವಿವಿಧೆಡೆ ಮಂಗಳವಾರ ಬಿರುಗಾಳಿಯೊಂದಿಗೆ ಸುರಿದ ಮಳೆಗೆ ಮಾವು ಹಾಗೂ ಪಪ್ಪಾಯಿ ಬೆಳೆಗೆ ಹಾನಿ ಉಂಟಾಗಿದೆ.

7 hours ago

ಚಾಮರಾಜನಗರ: ಕುಸಿದು ಬಿದ್ದು ಕೂಲಿ ಕಾರ್ಮಿಕ ಸಾವು

ಕೆಲಸ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ಕೂಲಿ ಕಾರ್ಮಿಕ ಸಾವನ್ನಪ್ಪಿದ ಘಟನೆ   ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿ ನಡೆದಿದೆ.

7 hours ago

ಸಾಮಾನ್ಯ ಪ್ರಯಾಣಿಕರಂತೆ ಟಿಕೆಟ್‌ ಪಡೆದು ಬಸ್‌ನಲ್ಲಿ ಸಂಚರಿಸಿದ ನ್ಯಾಯಾಧೀಶ

ನಗರದಿಂದ ಸಿದ್ಧೇಶ್ವರ ಮಾರ್ಗವಾಗಿ ಭಾಲ್ಕಿಗೆ ಬಸ್ ಓಡಿಸಬೇಕೆಂಬ ಗ್ರಾಮಸ್ಥರ ಬಹುದಿನಗಳ ಬೇಡಿಕೆ ಈಡೇರಿದೆ.

7 hours ago