ಬೀದರ್

ಖಟಕಚಿಂಚೋಳಿ: ಆಮೆಗತಿಯಲ್ಲಿ ಸಾಗುತ್ತಿರುವ ಜೆಜೆಎಂ ಕಾಮಗಾರಿ

ಖಟಕಚಿಂಚೋಳಿ: ಸಮೀಪದ ಡಾವರಗಾಂವ್ ಗ್ರಾಮದಲ್ಲಿ ಕಳೆದ ವರ್ಷದಿಂದ ಜೆಜೆಎಂ ಕಾಮಗಾರಿ ಆಮೆಗತಿಯಲ್ಲಿ ಸಾಗಿದ್ದು ನಲ್ಲಿಗೆ ಹನಿ ನೀರು ಸಹ ಬರುತ್ತಿಲ್ಲ ಎಂದು ಸ್ಥಳೀಯರು ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಸಮರ್ಪಕವಾಗಿ ಕಾಮಗಾರಿ ನಡೆಯದಿರುವುದರಿಂದ ರಸ್ತೆಯಲ್ಲಿ ತಗ್ಗು, ಗುಂಡಿಗಳು ಬಿದ್ದು ಸಾರ್ವಜನಿಕರ ನೆಮ್ಮದಿ ಹಾಳು ಮಾಡಿದೆ.

ಮೂರು ವರ್ಷ ಕಳೆದರೂ ಕಾಮಗಾರಿ ಇನ್ನೂ ಮುಗಿಯುವ ಲಕ್ಷಣಗಳು ಕಾಣುತ್ತಿಲ್ಲ. ಯೋಜನೆಯಡಿ ಗ್ರಾಮದ ಕೆಲ ಓಣಿಗಳಲ್ಲಿ ಪೈಪ್ ಹಾಕಲಾಗಿದೆ. ಆದರೆ ಸಂಪರ್ಕ ಕೊಟ್ಟಿಲ್ಲ. ಇನ್ನು ಕೆಲವು ಕಡೆ ಸಂಪರ್ಕ ಕೊಟ್ಟರು ನೀರೆ ಬರುತ್ತಿಲ್ಲ .

ಗ್ರಾಮದಲ್ಲಿ ಕಾಮಗಾರಿ ಆರಂಭವಾದಾಗ ಅಗೆದು ಹಾಕಿದ ರಸ್ತೆಗಳನ್ನು ಪುನಃ ನಿರ್ಮಿಸಬೇಕು ಎಂಬ ನಿಯಮವಿದೆ. ಆದರೆ ಗುತ್ತಿಗೆದಾರರು ಎಲ್ಲೂ ಹೊಸ ರಸ್ತೆ ನಿರ್ಮಿಸಿಲ್ಲ. ಇದರಿಂದಾಗಿ ಪೈಪ್ ಹಾಕಲು ಕಿತ್ತ ರಸ್ತೆ ಹಾಗೆಯೇ ಉಳಿದುಕೊಂಡಿದ್ದು ರಸ್ತೆಗಳ ಮಧ್ಯೆ ನಿರಂತರವಾಗಿ ಗಲೀಜು ನೀರು ಹರಿಯುತ್ತಿದೆ.

ಗ್ರಾಮಸ್ಥರು ಬಳಕೆ ಮಾಡಿದ ಹೊಲಸು ನೀರು ರಸ್ತೆ ಮಧ್ಯದಲ್ಲಿಯೇ ಹರಿಯುತ್ತಿದೆ. ಇಷ್ಟೆಲ್ಲ ಆವಾಂತರ ಆದರೂ ಕೂಡ ಗುತ್ತಿಗೆದಾರರು ಮಾತ್ರ ಕೆಲಸ ಮುಗಿಸುವ ಗೋಜಿಗೆ ಹೋಗುತ್ತಿಲ್ಲ ಎಂಬ ಆರೋಪ ಕೇಳಿಬರುತ್ತಿದೆ.

ಜಲಜೀವನ ಮಿಷನ್ ಯೋಜನೆ ಕೇಂದ್ರ ಸರ್ಕಾರದ ಮಹತ್ವದ ಯೋಜನೆಯಾಗಿದೆ. ಆದರೆ ಗುತ್ತಿಗೆದಾರರ ನಿರ್ಲಕ್ಷ್ಯದಿಂದಾಗಿ ಕೆಲಸ ಇನ್ನೂ ಮುಗಿಯುತ್ತಿಲ್ಲ. ಹೀಗಾಗಿ ಪ್ರತಿ ದಿನ ಬೈಕ್ ಸವಾರರು, ವೃದ್ಧರು, ಮಕ್ಕಳು ಆತಂಕದಲ್ಲಿ ಓಡಾಡುವಂತಾಗಿದೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಕಾಮಗಾರಿ ಪೂರ್ಣಗೊಳಿಸಬೇಕು’ ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಗ್ರಾಮದಲ್ಲಿ ನನೆಗುದಿಗೆ ಬಿದ್ದ ಕಾಮಗಾರಿ ಸಂಬಂಧ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಜೊತೆ ಮಾತನಾಡಲು ದೂರವಾಣಿ ಕರೆ ಮಾಡಿದರು ಕರೆ ಸ್ವೀಕರಿಸಲಿಲ್ಲ.

ಚಂದ್ರಕಾಂತ ತುಗಾಂವೆ ನಿವಾಸಿಗ್ರಾಮದಲ್ಲಿ ಜೆಜೆಎಂ ಕಾಮಗಾರಿ ಅಪೂರ್ಣವಾಗಿದ್ದು ಸಾರ್ವಜನಿಕರ ಉಪಯೋಗಕ್ಕೆ ಬಾರದಂತಾಗಿದೆ. ತಕ್ಷಣ ಸರಿಪಡಿಸಬೇಕು.

Ashika S

Recent Posts

ಇಂದು ರೀ ರಿಲೀಸ್ ಆದ ಉಪ್ಪಿಯ ‘‘A’’ ಸಿನಿಮಾ; ಸ್ವಾಗತಿಸಿದ ಫ್ಯಾನ್ಸ್

ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ “A” ಸಿನಿಮಾ ಇಂದು ರೀ ರಿಲೀಸ್​ ಆಗಿದೆ. ಬೆಂಗಳೂರಿನ…

32 mins ago

ಚಾರ್ ಧಾಮ್​ ಯಾತ್ರೆ, ದೇವಸ್ಥಾನಗಳ ಬಳಿ ರೀಲ್ಸ್​ಗೆ ನಿಷೇಧ

ಚಾರ್​ ಧಾಮ್ ಯಾತ್ರೆ ಶುರುವಾಗಿದ್ದು, ಮೇ 31ರವರೆಗೆ ವಿಐಪಿ ದರ್ಶನಕ್ಕೆ ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ. ಅಷ್ಟೇ ಅಲ್ಲದೆ ದೇವಾಲಯದಗಳ…

57 mins ago

ಎವರೆಸ್ಟ್​, ಎಂಡಿಎಚ್​ ಮಸಾಲೆಗಳ ಮಾರಾಟ ನಿಷೇಧ !

ಭಾರತದ ಎಂಡಿಎಚ್​ ಹಾಗೂ ಎವರೆಸ್ಟ್​ ಮಸಾಲೆ ಉತ್ಪನ್ನಗಳಲ್ಲಿ ವಿಷಕಾರಿ ಅಂಶ ಇರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ನೇಪಾಳವು…

2 hours ago

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯ ಅಬ್ಬರ

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ,…

2 hours ago

ಮನೆಗೆ ನುಗ್ಗಿ ಅಂಜಲಿ ಕೊಲೆ ಮಾಡಿದ್ದ ಆರೋಪಿ ಅರೆಸ್ಟ್

ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಪೊಲೀಸರು ಬಂಧಿಸಿದ್ದಾರೆ.…

3 hours ago

ಚಿತ್ರದುರ್ಗ: ಮನೆಯೊಂದರಲ್ಲಿ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

ನಗರದ ಜೈಲು ರಸ್ತೆಯ ಮನೆಯೊಂದರಲ್ಲಿ ಪತ್ತೆಯಾಗಿದ್ದ ಐದು ಅಸ್ಥಿಪಂಜರಗಳಿಗೆ ಸಂಬಂಧಿಸಿದ ಎಫ್‌ಎಸ್‌ಎಲ್‌ ಅಂತಿಮ ವರದಿ ಪೊಲೀಸರ ಕೈ ಸೇರಿದ್ದು, ಸಾವಿಗೆ…

3 hours ago