Categories: ಬೀದರ್

ಹೆದ್ದಾರಿ ಕಾಮಗಾರಿ ಕಳಪೆ ಆರೋಪ: ಕೇಂದ್ರ ಸಚಿವ ಖೂಬಾ ವಿರುದ್ಧ ರಾಷ್ಟ್ರಪತಿಗೆ ಪತ್ರ

ಬೀದರ್: ‘ಜಿಲ್ಲೆಯಲ್ಲಿ ನಡೆದಿರುವ ಪ್ರಮುಖ ರಾಷ್ಟ್ರೀಯ ಹೆದ್ದಾರಿಗಳ ಕಾಮಗಾರಿ ಸಂಪೂರ್ಣ ಕಳಪೆಯಾಗಿದೆ. ಈ ಬಗ್ಗೆ ಕೇಂದ್ರ ರಾಸಾಯನಿಕ, ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಅವರು ಚಕಾರ ಎತ್ತಿಲ್ಲ. ಗುತ್ತಿಗೆದಾರ ಸಂಸ್ಥೆಯೊಂದಿಗೆ ಶಾಮೀಲಾಗಿದ್ದಾರೆ ಎಂದು ಅವರ ಪಕ್ಷದವರೇ ಆರೋಪಿಸಿದ್ದಾರೆ.

ಈ ಕುರಿತು ಸಮಗ್ರ ತನಿಖೆ ನಡೆಸಬೇಕು. ಖೂಬಾ ಅವರನ್ನು ಸಂಪುಟದಿಂದ ವಜಾಗೊಳಿಸಬೇಕೆಂದು ರಾಷ್ಟ್ರಪತಿಗೆ ಪತ್ರ ಬರೆಯಲಾಗುವುದು’ ಎಂದು ಜಿಲ್ಲಾ ಕಾಂಗ್ರೆಸ್‌ ತಿಳಿಸಿದೆ.

ಬ್ರಿಮ್ಸ್‌ನಲ್ಲಿ ಹೊರಗುತ್ತಿಗೆ ನೌಕರರ ನೇಮಕಾತಿಯ ಗುತ್ತಿಗೆಯನ್ನು ಖೂಬಾ ಅವರು ಅವರ ಸಹೋದರನ ಸಂಸ್ಥೆಗೆ ಕೊಡಿಸಿ, ಮಂಜೂರಾದ ಹುದ್ದೆಗಿಂತ ಕಡಿಮೆ ಜನರನ್ನು ಕೆಲಸಕ್ಕೆ ನಿಯೋಜಿಸಿ ಹಣ ಲೂಟಿ ಮಾಡಿದ್ದಾರೆ. ಹೀಗಾಗಿ ಅವರು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ವಿರುದ್ಧ ಮಾತನಾಡುವ ಯಾವುದೇ ನೈತಿಕತೆ ಹೊಂದಿಲ್ಲ ಎಂದು ಕಾಂಗ್ರೆಸ್ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಅಮೃತರಾವ್ ಚಿಮಕೋಡ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದತ್ತು ಮೂಲಗೆ ತಿರುಗೇಟು ಕೊಟ್ಟಿದ್ದಾರೆ.

ಬ್ರಿಮ್ಸ್‌ನಲ್ಲಿ ದುಡಿದ ಬಡ ನೈರ್ಮಲ್ಯ ಕಾರ್ಯಕರ್ತರಿಗೆ, ದುರ್ಬಲ ವರ್ಗದ ಮಹಿಳೆಯರಿಗೆ ಸರಿಯಾಗಿ ಸಂಬಳವನ್ನೂ ನೀಡದೆ, ಭವಿಷ್ಯನಿಧಿ, ಇ.ಎಸ್.ಐ. ಹಣ ಕಟ್ಟದೆ ವಂಚಿಸಿ, ತಮ್ಮ ಅಧಿಕಾರ ದುರ್ಬಳಕೆ ಮಾಡಿಕೊಂಡು ಆರ್ಥಿಕ ಇಲಾಖೆಯ ಮೇಲೆ ಒತ್ತಡ ಹೇರಿ ಹಣ ಬಿಡುಗಡೆ ಮಾಡಿಸಿಕೊಂಡವರು, ಖಂಡ್ರೆ ದಬ್ಬಾಳಿಕೆ ಮಾಡುತ್ತಿದ್ದಾರೆ ಎಂದು ಹೇಳುವುದು ಭೂತದ ಬಾಯಲ್ಲಿ ಭಗವದ್ಗೀತೆ ನುಡಿದಂತೆ ಎಂದು ಶುಕ್ರವಾರ ರಾತ್ರಿ ಪ್ರಕಟಣೆ ಮೂಲಕ ತಿರುಗೇಟು ಕೊಟ್ಟಿದ್ದಾರೆ.

ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುತ್ತಿದೆ. ಎಲ್ಲ ಗ್ಯಾರಂಟಿಗಳನ್ನೂ ಹಂತ ಹಂತವಾಗಿ ಮತ್ತು ಯಶಸ್ವಿಯಾಗಿ ಜಾರಿ ಮಾಡುತ್ತಿದೆ. ಈಶ್ವರ ಖಂಡ್ರೆ ಅವರು ಜಿಲ್ಲೆಯ ಅಭಿವೃದ್ಧಿಗೆ ಹಲವು ಯೋಜನೆ ರೂಪಿಸುತ್ತಿದ್ದಾರೆ. ಅವರ ಜನಪ್ರಿಯತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸಚಿವರ ಏಳಿಗೆ ಸಹಿಸದೆ ಖೂಬಾ ಅನಗತ್ಯ ಆರೋಪ ಮಾಡುತ್ತಿದ್ದಾರೆ. ಜಿಲ್ಲೆಯ ಯಾವುದೇ ಇಲಾಖೆಯಲ್ಲಿ ಅವ್ಯವಹಾರ ನಡೆಯುತ್ತಿರುವ ಬಗ್ಗೆ ದೂರು ಬಂದರೆ ಅದನ್ನು ಪರಿಶೀಲಿಸುವ ಜವಾಬ್ದಾರಿ ಜಿಲ್ಲಾ ಉಸ್ತುವಾರಿ ಸಚಿವರಿಗೆ ಇದೆ. ಎಲ್ಲಿ ತಮ್ಮ ನಿಜ ಬಣ್ಣ ಬಯಲಾಗುತ್ತದೋ ಎಂದು ಹೆದರಿ ಖೂಬಾ ಖಂಡ್ರೆ ವಿರುದ್ಧ ಇಲ್ಲಸಲ್ಲದ ಹೇಳಿಕೆ ಕೊಡುತ್ತಿದ್ದಾರೆ ಎಂದು ಹೇಳಿದ್ದಾರೆ.

Ashika S

Recent Posts

ಬಸವ ಜಯತಿಯ ಅಂಗವಾಗಿ ಆದಿವಾಸಿ ಮಕ್ಕಳಿಗೆ ಹಣ್ಣು-ಹಂಪಲು ವಿತರಣೆ

ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…

17 mins ago

ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥ

ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ‌ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ  ನಡೆದಿದೆ.

32 mins ago

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

2 hours ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

2 hours ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

3 hours ago

ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ ದಾಳಿ

ಮನೆಯ ಹೊರಗೆ ಆಟಾವಾಡುತ್ತಿದ್ದ ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ  ಗ್ಯಾಂಗ್  ಏಕಾಏಕಿ ದಾಳಿ ಮಾಡಿದ ಘಟನೆ ಪಟ್ಟಣದ…

3 hours ago