ಬೀದರ್

ಬಾಕಿ ತಾಂಡಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಿ: ಶಾಸಕ ಬಂಡೆಪ್ಪ ಖಾಶೆಂಪುರ್

ಬೀದರ್: ನನ್ನ ಕ್ಷೇತ್ರದ ಕೆಲವೇ ಕೆಲವು ತಾಂಡಗಳನ್ನು ಈಗ ಕಂದಾಯ ಗ್ರಾಮಗಳೆಂದು ಸರ್ಕಾರ ಘೋಷಣೆ ಮಾಡಿದೆ. ಅದರಂತಯೇ ಇನ್ನೂ ಬಾಕಿ ಉಳಿದಿರುವ ತಾಂಡಗಳನ್ನು ಆದಷ್ಟು ಬೇಗ ಕಂದಾಯ ಗ್ರಾಮಗಳೆಂದು ಘೋಷಣೆ ಮಾಡಿ ಎಂದು ಮಾಜಿ ಸಚಿವರು, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು, ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷರು, ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರು ಸದನದ ಮೂಲಕ ಸರ್ಕಾರಕ್ಕೆ ಮನವಿ ಮಾಡಿದರು.

ಬೆಂಗಳೂರಿನ ವಿಧಾನಸೌಧದಲ್ಲಿ ಸೋಮವಾರ ನಡೆದ ಬಜೆಟ್ ಅಧಿವೇಶನದ ಏಳನೇ ದಿನದ ಕಲಾಪದಲ್ಲಿ ಪಾಲ್ಗೊಂಡು, ಕಂದಾಯ ಗ್ರಾಮಗಳಿಗೆ ಸಂಬಂಧಿಸಿದಂತೆ ಚುಕ್ಕೆ ಗುರುತಿನ ಪ್ರಶ್ನೆ ಕೇಳಿ ಮಾತನಾಡಿದ ಅವರು, ಕಂದಾಯ ಗ್ರಾಮಗಳಿಗೆ ಸಂಬಂಧಿಸಿದಂತೆ ನಾನು ಕೇಳಿದ ಪ್ರಶ್ನೆಗೆ ಸರ್ಕಾರ ನೀಡಿರುವ ಉತ್ತರ ಸರಿಯಾಗಿಲ್ಲ ಎಂದರು.

ನನ್ನ ಕ್ಷೇತ್ರದಲ್ಲಿ ಸುಮಾರು ನೂರಕ್ಕೂ ಹೆಚ್ಚು ಹಳ್ಳಿಗಳು ಬರುತ್ತವೆ. ಸರ್ಕಾರ ನೀಡಿದ ಉತ್ತರದಲ್ಲಿ 12 ತಾಂಡಗಳ ಪೈಕಿ 08 ತಾಂಡಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಿದ್ದಿವಿ. ಇನ್ನೂ 04 ಬಾಕಿ ಉಳಿದಿವೆ ಎಂದು ತಿಳಿಸಲಾಗಿದೆ.

ಬಗದಲ್ ತಾಂಡಗಳಿಗೆ ಸಂಬಂಧಿಸಿದಂತೆ ಎ ತಾಂಡವನ್ನು ಕಂದಾಯ ಗ್ರಾಮವನ್ನಾಗಿ ಮಾಡಲಾಗಿದೆ. ಆದರೇ ಬಿ ತಾಂಡ ಬಾಕಿ ಇದೆ. ಇನ್ನೂ ವಿಠಲಪೂರ ಅನ್ನು ತಾಂಡ ಎಂದು ಉತ್ತರದಲ್ಲಿ ಹೇಳಲಾಗಿದೆ. ಆದರೇ ಅದು ತಾಂಡವಲ್ಲ ಗ್ರಾಮವಾಗಿದೆ.
ಸರ್ಕಾರ ನೀಡಿದ ಪಟ್ಟಿಯಲ್ಲಿಯೇ ಚಿಟಗುಪ್ಪಾ ಮತ್ತು ಬೀದರ್ ಎರಡು ತಾಲೂಕಿನಲ್ಲಿ 23 ತಾಂಡಗಳು ಬರುತ್ತವೆ. ಈ ಪಟ್ಟಿಯ ಪ್ರಕಾರವೇ ಇನ್ನೂ 11 ತಾಂಡಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಬೇಕಾಗಿದೆ. ಹಕ್ಕು ಪತ್ರ ವಿತರಣೆ ಮಾಡಿದಂತೆ ನಿವೇಷನಗಳ ವಿಷಯಕ್ಕೂ ಮಹತ್ವ ನೀಡಬೇಕಿದೆ ಎಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಹೇಳಿದರು.

ಬಂಡೆಪ್ಪರವರು ಸರ್ಕಾರದ ಉತ್ತರ ತೃಪ್ತಿ ತಂದಿಲ್ಲ ಎಂದಿದ್ದಾರೆ. ನಮ್ಮ ಮಾನದಂಡಗಳಿಗೆ ಒಳಪಡುವ ತಾಂಡಗಳು ಬಾಕಿ ಇದ್ದರೆ ಈ ತಿಂಗಳೊಳಗೆ ಅವುಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಲು ಕ್ರಮವಹಿಸುತ್ತೇನೆ ಎಂದು ಕಂದಾಯ ಸಚಿವ ಆರ್ ಅಶೋಕ್ ರವರು ಉತ್ತರದಲ್ಲಿ ತಿಳಿಸಿದರು.

Sneha Gowda

Recent Posts

ಬಿರುಗಾಳಿ ಸಹಿತ ಮಳೆಗೆ ಕುಸಿದ ಮಹಾದ್ವಾರ

ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ…

3 mins ago

ಮತ್ತೆ ಭರ್ಜರಿ ಏರಿಕೆ ಕಂಡ ‌ಚಿನ್ನದ ಬೆಲೆ !

ಜಾಗತಿಕವಾಗಿ ಚಿನ್ನಕ್ಕೆ ಈಗ ಸಖತ್ ಬೇಡಿಕೆ ಸೃಷ್ಟಿಯಾಗಿರುವುದು ಈ ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ. ಕಳೆದ ಒಂದು ತಿಂಗಳಿನಿಂದ ಚಿನ್ನದ ಬೆಲೆ…

21 mins ago

ಮಳೆಯಿಂದಾಗಿ ಪಂದ್ಯ ರದ್ದು; ಪ್ಲೇಆಫ್​ಗೇರಿದ್ದು ಯಾರು ?

ಐಪಿಎಲ್ 2024ರ 66ನೇ ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಹೈದರಾಬಾದ್‌ನಲ್ಲಿ ಸನ್‌ರೈಸರ್ಸ್ ತಂಡ ಗುಜರಾತ್ ತಂಡವನ್ನು ಎದುರಿಸಬೇಕಿತ್ತು. ಆದರೆ, ಟಾಸ್‌ಗೂ ಮುನ್ನವೇ…

31 mins ago

ಗುಡ್‌ ನ್ಯೂಸ್:‌ ಶುಗರ್‌, ಹೃದ್ರೋಗ ಸೇರಿ 41 ಔಷಧಿಗಳ ಬೆಲೆ ಕಡಿತ

ಕೇಂದ್ರ ಸರ್ಕಾರವು 41 ಅಗತ್ಯ ಔಷಧಗಳು ಹಾಗೂ ಹೃದಯ ರಕ್ತನಾಳದ ಕಾಯಿಲೆ, ಸಕ್ಕರೆ ಕಾಯಿಲೆ ಇರುವವರು ಬಳಸುವ 6 ಫಾರ್ಮುಲೇಷನ್‌ಗಳ…

44 mins ago

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

9 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

11 hours ago