News Karnataka Kannada
Tuesday, April 30 2024
ಬೀದರ್

ನಾಳೆ ಬೀದರ್‌ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿ

ನಾಳೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬೀದರ್‌ಗೆ ಆಗಮಿಸುವ ಹಿನ್ನಲೆ ನಗರದಾದ್ಯಂತ ಪ್ಲೆಕ್ಸ್, ಬ್ಯಾನರ್‌ಗಳು ಮತ್ತು ಕಾಂಗ್ರೆಸ್ ಪಕ್ಷದ ಧ್ವಜಗಳು ರಾರಾಜಿಸುತ್ತಿವೆ.
Photo Credit : News Kannada

ಬೀದರ್: ನಾಳೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬೀದರ್‌ಗೆ ಆಗಮಿಸುವ ಹಿನ್ನಲೆ ನಗರದಾದ್ಯಂತ ಪ್ಲೆಕ್ಸ್, ಬ್ಯಾನರ್‌ಗಳು ಮತ್ತು ಕಾಂಗ್ರೆಸ್ ಪಕ್ಷದ ಧ್ವಜಗಳು ರಾರಾಜಿಸುತ್ತಿವೆ.

ನಾಳೆ 371(J) ದಶಮಾನೋತ್ಸವ ಹಿನ್ನೆಲೆಯಲ್ಲಿ ಮಲ್ಲಿಕಾರ್ಜುನ ಖರ್ಗೆಅವರಿಗೆ ಬೀದರ್ ಜಿಲ್ಲಾ ಕಾಂಗ್ರೆಸ್ ಹಾಗೂ ವಿವಿಧ ಸಂಘಟನೆಗಳಿಂದ ಅಭಿನಂದನಾ ಸಮಾರಂಭ ಏರ್ಪಡಿಸಲಾಗಿದ್ದು,ಈ ಕಾರ್ಯಕ್ರಮಕ್ಕೆ ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಬೀದರ್‌ಗೆ ಆಗಮಿಸಲಿದ್ದಾರೆ.

ನಾಳೆ 11 ಗಂಟೆಗೆ ಬೀದರ್ ಏರ್‌ಪೋರ್ಟ್‌ಗೆ ಬಂದಿಳಿಯಲಿದ್ದು, 12 ಗಂಟೆಗೆ ನೆಹರೂ ಮೈದಾನಕ್ಕೆ ಆಗಮಿಸಿ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಕಾರ್ಯಕ್ರಮದಲ್ಲಿ ಡಿಸಿಎಂ ಡಿಕೆಶಿವಕುಮಾರ್, ಸಚಿವರಾದ ಈಶ್ವರ ಖಂಡ್ರೆ, ರಹೀಂ ಖಾನ್, ಶರಣ ಪ್ರಕಾಶ ಪಾಟೀಲ್, ಮಾಜಿ ಸಚಿವ ರಾಜಶೇಖರ್ ಪಾಟೀಲ್, ಕಾಂಗ್ರಸ್ ಜಿಲ್ಲಾಧ್ಯಕ್ಷ ಹಾಗೂ ಸ್ಥಳೀಯ ನಾಯಕರು ಭಾಗಿಯಾಗಲಿದ್ದಾರೆ.

ಕಾರ್ಯಕ್ರಮದ ಬಳಿಕ 2-30ಕ್ಕೆ ವಿಶೇಷ ವಿಮಾನದ ಮೂಲಕ ಮಲ್ಲಿಕಾರ್ಜುನ ಖರ್ಗೆ ದೆಹಲಿಗೆ ತೆರಳಲಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು