News Karnataka Kannada
Tuesday, April 30 2024
ಬೀದರ್

ಅನಾರೋಗ್ಯದಿಂದ ಮಲ್ಲಿಕಾರ್ಜುನ ಖರ್ಗೆ ಬಸವಕಲ್ಯಾಣ ಪ್ರವಾಸ ರದ್ದು

ನಗರದ ಅಕ್ಕಮಹಾದೇವಿ ಕಾಲೇಜು ಮೈದಾನದಲ್ಲಿ ಶುಕ್ರವಾರ ಸಂಜೆ ಹಮ್ಮಿಕೊಂಡಿರುವ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಭಾಗವಹಿಸಬೇಕಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪ್ರವಾಸ ಕೊನೆಯ ಗಳಿಗೆಯಲ್ಲಿ ರದ್ದಾಗಿದೆ.
Photo Credit : NewsKarnataka

ಬಸವಕಲ್ಯಾಣ: ನಗರದ ಅಕ್ಕಮಹಾದೇವಿ ಕಾಲೇಜು ಮೈದಾನದಲ್ಲಿ ಶುಕ್ರವಾರ ಸಂಜೆ ಹಮ್ಮಿಕೊಂಡಿರುವ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಭಾಗವಹಿಸಬೇಕಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪ್ರವಾಸ ಕೊನೆಯ ಗಳಿಗೆಯಲ್ಲಿ ರದ್ದಾಗಿದೆ.

ಕಲಬುರಗಿ ಪ್ರವಾಸ ಮುಗಿಸಿಕೊಂಡು ಸಂಜೆ ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಾಗರ್ ಖಂಡ್ರೆ ಪರ ಖರ್ಗೆ ಅವರು ಪ್ರಚಾರ ಮಾಡುವವರಿದ್ದರು. ಆದರೆ, ಅನಾರೋಗ್ಯದಿಂದ ಅವರ ಪ್ರವಾಸ ರದ್ದಾಗಿದೆ.

ಡಿಹೈಡ್ರೇಶನ್ ಕಾರಣದಿಂದ ಮಲ್ಲಿಕಾರ್ಜುನ ಖರ್ಗೆಯವರು ಅನಾರೋಗ್ಯಕ್ಕೆ ಒಳಗಾಗಿದ್ದರಿಂದ ಅವರು ಇಲ್ಲಿಗೆ ಬರಲು ಸಾಧ್ಯವಾಗುತ್ತಿಲ್ಲ. ಮತ್ತೊಂದು ದಿನ ಪ್ರಚಾರಕ್ಕೆ ಬರುವುದಾಗಿ ತಿಳಿಸಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಪತ್ರಕರ್ತರಿಗೆ ತಿಳಿಸಿದರು.

ಕಾಂಗ್ರೆಸ್ ಅಭ್ಯರ್ಥಿ ಸಾಗರ್ ಖಂಡ್ರೆಯವರು ಏ. 17 ರಂದು ನಾಮಪತ್ರ ಸಲ್ಲಿಸುವರು. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ, ಉಪಮುಖ್ಯಂತ್ರಿ ಡಿ.ಕೆ. ಶಿವಕುಮಾರ ಸೇರಿದಂತೆ ರಾಜ್ಯದ ಅನೇಕ ಮುಖಂಡರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು