Categories: ಬೀದರ್

ಲೋಕಸಭಾ ಚುನಾವಣೆಗೆ ಮರಾಠ ಅಭ್ಯರ್ಥಿ ಸ್ಪರ್ಧೆ: ಡಾ.ದಿನಕರ ಮೋರೆ

ಬೀದರ್ : ‘ಹೋದ ವರ್ಷ ನಡೆದ ವಿಧಾನಸಭಾ ಚುನಾವಣೆ ಹಾಗೂ ಈಗ ನಡೆಯುತ್ತಿರುವ ಲೋಕಸಭಾ ಚುನಾವಣೆಯಲ್ಲಿ ರಾಷ್ಟ್ರೀಯ ಪಕ್ಷಗಳು ಮರಾಠ ಸಮುದಾಯದವರಿಗೆ ಟಿಕೆಟ್‌ ನೀಡದಿರುವ ಕಾರಣ ಸಮುದಾಯದ ನಿರ್ಧಾರದಂತೆ ಚುನಾವಣೆಗೆ ಸ್ಪರ್ಧಿಸಲು ನಿರ್ಧರಿಸಲಾಗಿದೆ’ ಎಂದು ಪಕ್ಷೇತರ ಅಭ್ಯರ್ಥಿ ಡಾ.ದಿನಕರ ಮೋರೆ ತಿಳಿಸಿದರು.

ನಗರದಲ್ಲಿ ಸೋಮವಾರ ‘ಬೀದರ್‌ ಸ್ವಾಭಿಮಾನಿ ಆಘಾಡಿ’ ಮುಖಂಡರೊಂದಿಗೆ ಪತ್ರಿಕಾಗೋಷ್ಠಿ ನಡೆಸಿದ ಅವರು,’ಲೋಕಸಭಾ ಚುನಾವಣೆಗೆ ಮರಾಠ ಸಮಾಜದಿಂದ ಯಾರಾದರೂ ಒಬ್ಬರನ್ನು ಕಣಕ್ಕಿಳಿಸುವ ವಿಚಾರ ಮೊದಲಿನಿಂದಲೂ ಇತ್ತು. ಮರಾಠ ಸಮುದಾಯ ಹಾಗೂ ಎಲ್ಲ ಮುಖಂಡರ ಜೊತೆ ಹಲವು ಸುತ್ತಿನ ಮಾತುಕತೆ ನಡೆಸಿ, ಹಿರಿಯರ ಹಾಗೂ ಗಣ್ಯರ ಪ್ರೇರಣೆಯಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ತೀರ್ಮಾನಿಸಲಾಗಿದೆ. ಏ.19ರಂದು ನಾಮಪತ್ರ ಸಲ್ಲಿಸಲಾಗುವುದು’ ಎಂದು ಹೇಳಿದರು.

ಮರಾಠ ಸಮುದಾಯದ ಮುಖಂಡ ಪದ್ಮಾಕರ ಪಾಟೀಲ ಮಾತನಾಡಿ,’ಮರಾಠ ಸಮುದಾಯದವರೊಂದಿಗೆ ಹಲವು ಸುತ್ತಿನ ಮಾತುಕತೆ ನಡೆಸಿದ ಬಳಿಕ ಡಾ.ದಿನಕರ ಮಾಧವರಾವ ಮೋರೆ ಅವರನ್ನು ಸರ್ವಾನುಮತದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ನಿರ್ಧರಿಸಲಾಗಿದೆ’ ಎಂದರು.

ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಹಾಗೂ ಕಾಂಗ್ರೆಸ್‌ ಜನಪ್ರಿಯತೆ ಕಳೆದುಕೊಂಡಿವೆ. ಅವುಗಳ ಬಗ್ಗೆ ಜನರಿಗೆ ಉತ್ತಮ ಅಭಿಪ್ರಾಯ ಇಲ್ಲ. ಯಾವುದೇ ಕಾರಣಕ್ಕೂ ನಾಮಪತ್ರ ಹಿಂಪಡೆಯುವ ಪ್ರಶ್ನೆಯೇ ಇಲ್ಲ. ನಾವು ಯಾರೊಂದಿಗೂ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಇದೇ ವೇಳೆ ಪತ್ರಿಕಾಗೋಷ್ಠಿಯಲ್ಲಿ ಮುಖಂಡರಾದ ಡಾ.ಬಾಲಾಜಿ ಸಾವಳೆಕರ್, ಜನರ್ದನ ಬಿರಾದಾರ, ರಾಮರಾವ ರಾವಣಗಾಂವೆ, ರಾವು ಸಾಹೇಬ ಬಿರಾದಾರ, ಯುವರಾಜ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಬಿಜೆಪಿಗೆ ಮರಾಠ ಮುಖಂಡರ ರಾಜೀನಾಮೆ: ‘ಮರಾಠ ಸಮುದಾಯದಿಂದ ಚುನಾವಣೆಗೆ ಒಟ್ಟು ನಾಲ್ವರು ನಾಮಪತ್ರ ಸಲ್ಲಿಸುವರು. ಮುಖಂಡರಾದ ಪರಮೇಶ್ವರ ಕಿಶನರಾವ ಪಾಟೀಲ ರಾಮರಾವ ರಾವಣಗಾಂವೆ ನರೇಶ ಭೋಸ್ಲೆ ಹಾಗೂ ಡಾ. ದಿನಕರ ಮೋರೆ. ಈ ಪೈಕಿ ಮೂವರು ನಾಮಪತ್ರಗಳನ್ನು ವಾಪಸ್ ಪಡೆಯುವರು. ಡಾ. ದಿನಕರ ಮೋರೆ ಕಣದಲ್ಲಿ ಉಳಿದುಕೊಳ್ಳುವರು.

ನಾಮಪತ್ರ ಸಲ್ಲಿಸಿದ ಬಳಿಕವೇ ನಾನು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಲಿದ್ದೇನೆ. ನನ್ನೊಂದಿಗೆ ಸುಮಾರು 25ಕ್ಕೂ ಹೆಚ್ಚು ಮರಾಠ ಮುಖಂಡರು ರಾಜೀನಾಮೆ ಸಲ್ಲಿಸುವರು. ರಾಷ್ಟ್ರೀಯ ಪಕ್ಷಗಳ ಅಹಂಕಾರ ಮುರಿದು ಮರಾಠ ಸಮಾಜಕ್ಕೆ ನ್ಯಾಯ ಒದಗಿಸುವುದು ನಮ್ಮ ಮೂಲ ಧ್ಯೇಯವಾಗಿದೆ’ ಎಂದು ಪದ್ಮಾಕರ ಪಾಟೀಲ ತಿಳಿಸಿದರು.

Ashika S

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

4 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

5 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

5 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

5 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

6 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

6 hours ago