ಬೀದರ್: ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ನೆಹರೂ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಅವರು ತ್ರಿವರ್ಣ ಧ್ವಜಾರೋಹಣ ನೆರವೇರಿಸಿದರು.
ನಂತರ ವಿವಿಧ ತುಕಡಿಗಳಿಂದ ಗೌರವ ವಂದನೆ ಸ್ವೀಕರಿಸಿದರು. ಆಕರ್ಷಕ ಪಥ ಸಂಚಲನ ನಡೆಯಿತು.
ಸಚಿವ ರಹೀಂ ಖಾನ್, ಶಾಸಕರಾದ ಡಾ.ಶೈಲೇಂದ್ರ ಬೆಲ್ದಾಳೆ, ರಘುನಾಥರಾವ ಮಲ್ಕಾಪುರೆ, ಅರವಿಂದಕುಮಾರ ಅರಳಿ, ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ, ಜಿಪಂ ಸಿಇಒ ಶಿಲ್ಪಾ ಎಂ, ಎಸ್ಪಿ ಚನ್ನಬಸವಣ್ಣ ಎಸ್.ಎಲ್. ಇತರರಿದ್ದರು.
ಶಾಲಾ ಮಕ್ಕಳು, ಸಾರ್ವಜನಿಕರಿಂದ ಕ್ರೀಡಾಂಗಣ ಭರ್ತಿಯಾಗಿತ್ತು.