Categories: ಬೀದರ್

ಬೀದರ್: ಸಚಿವ ಪ್ರಭು ಚವ್ಹಾಣರಿಂದ ಮಹಿಳಾ ಸ್ವಸಹಾಯ ಸಂಘಗಳಿಗೆ ಚೆಕ್ ವಿತರಣೆ

ಔರಾದ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಔರಾದ ಪಟ್ಟಣದ ಡಾ.ಗುರುಪಾದಪ್ಪ ನಾಗಮಾರಪಳ್ಳಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ತಾಲ್ಲೂಕು ಸ್ತ್ರೀಶಕ್ತಿ ಒಕ್ಕೂಟದ ಕಾರ್ಯಾಗಾರದಲ್ಲಿ ಪಶುಸಂಗೋಪನೆ ಸಚಿವರಾದ ಪ್ರಭು.ಬಿ ಚವ್ಹಾಣ ಅವರು ಅಮೃತ ಯೋಜನೆಗಳಡಿ 70 ಮಹಿಳಾ ಸ್ವಸಹಾಯ ಸಂಘಗಳಿಗೆ ಸಹಾಯಧನದ ಚೆಕ್ಕುಗಳನ್ನು ವಿತರಿಸಿದರು.

ಬಳಿಕ ಮಾತನಾಡಿದ ಸಚಿವರು, ಮಹಿಳೆಯರು ಕೂಡ ಆರ್ಥಿಕವಾಗಿ ಸಬಲರಾಗಿ ಸ್ವವಾಲಂಬಿ ಜೀವನ ಸಾಗಿಸಬೇಕು ಎಂಬ ಉದ್ದೇಶದಿಂದ ಸರ್ಕಾರವು ನಾನಾ ಯೋಜನೆಗಳನ್ನು ಜಾರಿಗೊಳಿಸಿದೆ. ಕಿರು ಉದ್ದಿಮೆಗಳನ್ನು ಕೈಗೊಂಡು ಆರ್ಥಿಕವಾಗಿ ಸಶಕ್ತರಾಗುವಂತೆ ಮಾಡಲು ಸರ್ಕಾರ ಸ್ತ್ರೀಶಕ್ತಿ ಸ್ವಸಹಾಯ ಸಂಘಗಳಿಗೆ 1 ಲಕ್ಷ ಆರ್ಥಿಕ ಸಹಾಯ ಮಾಡುವ ಜೊತೆಗೆ ತರಬೇತಿ ಕಾರ್ಯಕ್ರಮವನ್ನು ನಡೆಸಲಾಗುತ್ತಿದೆ. ಇದರ ಸದುಪಯೋಗ ಪಡೆಯಬೇಕು ಎಂದರು.

ಪ್ರಸ್ತುತ ದಿನಮಾನಗಳಲ್ಲಿ ಮಹಿಳೆಯರು ಹೆಚ್ಚು ಜವಾಬ್ದಾರಿಗಳನ್ನು ವಹಿಸಿಕೊಳ್ಳುತ್ತಿರುವುದು ಆಶಾದಾಯಕ ಬೆಳವಣಿಗೆಯಾಗಿದೆ. ಎಲ್ಲ ಮಹಿಳೆಯರೂ ಆರ್ಥಿಕವಾಗಿ ಸಬಲರಾಗಬೇಕಿದೆ. ಈ ದಿಶೆಯಲ್ಲಿ ಸರ್ಕಾರ ನಿರಂತರ ಪ್ರಯತ್ನಿಸುತ್ತಿದೆ. ಸರ್ಕಾರದ ಯೋಜನೆಗಳ ಕುರಿತು ಪ್ರತಿಯೊಬ್ಬರಲ್ಲಿಯೂ ಜಾಗೃತಿ ಮೂಡಿಸುವ ಮೂಲಕ ಸರ್ಕಾರದ ಯೋಜನೆಯನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಸರ್ಕಾರದ ಆಶಯವನ್ನು ಸಾಕಾರಗೊಳಿಸಲು ಮಹಿಳೆಯರು ಕೈಜೋಡಿಸಬೇಕು ಎಂದು ಮನವಿ ಮಾಡಿದರು. ಇದೇ ವೇಳೆ ಭಾಗ್ಯಲಕ್ಷ್ಮೀ ಯೋಜನೆಯ ಬಾಂಡ್‌ಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ತಹಸೀಲ್ದಾರರಾದ ಮಲ್ಲಿಕಾರ್ಜುನ, ತಾಲ್ಲೂಕು ಪಂಚಾಯತ್ ಸಹಾಯಕ ನಿರ್ದೇಶಕ ಸುರೇಶ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಭೀಮಸೇನ ಚವ್ಹಾಣ, ತಾಲ್ಲೂಕು ಸ್ತ್ರೀಶಕ್ತಿ ಒಕ್ಕೂಟದ ಅಧ್ಯಕ್ಷರಾದ ಕಾವೇರಿ, ಮುಖಂಡರಾದ ದೊಂಡಿಬಾ ನರೋಟೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಮುಖಂಡರು ಹಾಗೂ ಮಹಿಳಾ ಸ್ವಸಹಾಯ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Sneha Gowda

Recent Posts

ಸ್ವಾತಿ ಮೇಲಿನ ಹಲ್ಲೆ ಪ್ರಕರಣ: ನಿರೀಕ್ಷಣಾ ಜಾಮೀನು ಕೋರಿ ಬಿಭವ್ ಅರ್ಜಿ

ರಾಜ್ಯಸಭಾ ಸದಸ್ಯೆ ಸ್ವಾತಿ ಮಾಲಿವಾಲ್ ಮೇಲಿನ ಹಲ್ಲೆ ಆರೋಪಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ…

18 mins ago

ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು

ಇಲ್ಲಿನ ವೀರಾಪುರ ಓಣಿಯಲ್ಲಿ ಅಂಜಲಿ ಅಂಬಿಗೇರ ಹಂತಕ ಗಿರೀಶ ಉರುಫ್‌ ವಿಶ್ವ ಸಾವಂತ ವಿರುದ್ಧ ಬೆಂಡಿಗೇರಿ ಠಾಣೆಯಲ್ಲಿ ಮತ್ತೊಂದು ಪ್ರಕರನ…

1 hour ago

ʼರಾಹುಲ್ ಮತ್ತು ನಾನು ಒಟ್ಟಿಗೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದರೆ ಬಿಜೆಪಿಗೆ ಲಾಭವಾಗುತ್ತಿತ್ತುʼ

ದೇಶದ್ಯಾಂತ ಕಾಂಗ್ರೆಸ್‌ ಪಕ್ಷದ ಪರವಾಗಿ ಪ್ರಚಾರ ನಡೆಸಬೇಕೆಂಬ ಉದ್ದೇಶದಿಂದ ನಾನು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿಲ್ಲ, ರಾಹುಲ್ ಗಾಂಧಿ…

1 hour ago

ಪೊಲೀಸ್‌ ಕಸ್ಟಡಿಯಲ್ಲಿಯೇ ದಂಪತಿ ಆತ್ಮಹತ್ಯೆ: ರೊಚ್ಚಿಗೆದ್ದು ಠಾಣೆಗೆ ಬೆಂಕಿ ಹಚ್ಚಿದ ಗ್ರಾಮಸ್ಥರು

ಪೊಲೀಸ್‌ ಕಸ್ಟಡಿಯಲ್ಲಿಯೇ ಗಂಡ ಹಾಗೂ ಹೆಂಡತಿ ಮೃತಪಟ್ಟಿರುವ ಘಟನೆ ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ನಡೆದಿದೆ.

1 hour ago

ಆತ್ಮಹತ್ಯೆಗೆ ಮುನ್ನ ನಟ ಚಂದು ಲಾಸ್ಟ್​ ಮೆಸೇಜ್​ ಇದು

ಇದು ತೆಲುಗು ಕಿರುತೆರೆ ನಟ ಚಂದು ಆತ್ಮಹತ್ಯೆಗೂ ಮುನ್ನ ಬರೆದ ಸಂದೇಶ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಚಂದುವಿನ ಕೊನೆಯ ಮೆಸೇಜ್​…

2 hours ago

ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆ ಸಾಧ್ಯತೆ

ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

2 hours ago