Categories: ಬೀದರ್

ಬೀದರ್: ನಾನು ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡಲ್ಲ- ಶಾಸಕ ಲಕ್ಷ್ಮಣ ಸವದಿ

ಚಿಕ್ಕೋಡಿ: ಬೀದ‌ರ್ ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಪಕ್ಷದಿಂದ ಸ್ಪರ್ಧೆ ಮಾಡುತ್ತೇನೆ ಎಂದು ಊಹಾಪೋಹಗಳು ಕೇಳಿ ಬರುತ್ತಿವೆ. ನಾನು ಯಾವುದೇ ಕಾರಣಕ್ಕೂ ಬಿಜೆಪಿ ಪಕ್ಷಕ್ಕೆ ಹೋಗುವುದಿಲ್ಲ, ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ ಎಂದು ಅಥಣಿ ಶಾಸಕ ಲಕ್ಷ್ಮಣ್‌ ಸವದಿ ಸ್ಪಷ್ಟನೆ ನೀಡಿದ್ದಾರೆ.

ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಯಕ್ಕಂಚ್ಚಿ ಗ್ರಾಮದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿ, ನಾನು ಬೀದ‌ರ್ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೇನೆ ಎಂದು ಕೇಳಿ ಬರುತ್ತಿವೆ. ಈ ಸುದ್ದಿ ನನಗೆ ಅಚ್ಚರಿ ಮೂಡಿಸಿದೆ. ಎತ್ತನ ಮಾಮರ ಎತ್ತನ ಕೋಗಿಲೆ ಎತ್ತಿಂದ ಎತ್ತ ಸಂಬಂಧವಯ್ಯಾ, ಎಲ್ಲಿಂದ ಎಲ್ಲಿಗೆ ಸಂಬಂಧ ಆ ಸುದ್ದಿಗಳು ಎಲ್ಲವೂ ಸುಳ್ಳು ನಾನು ಯಾವುದೇ ಕಾರಣಕ್ಕೂ ಲೋಕಸಭಾ ಚುನಾವಣೆ ಸ್ವರ್ಧೆ ಮಾಡುವುದಿಲ್ಲ ಎಂದು ಹೇಳಿದರು.

ಇನ್ನು, ನಾನು ಕಾಂಗ್ರೆಸ್ ಪಕ್ಷವನ್ನು ಬಿಟ್ಟು ಹೋಗಿಲ್ಲ, ನನಗೆ ಅಥಣಿ ಕ್ಷೇತ್ರದ ಜನರು ಆಶೀರ್ವಾದ ಮಾಡಿದ್ದಾರೆ. ಅಥಣಿ ಕ್ಷೇತ್ರದ ಜನರು ಶಾಸಕರಾಗಿ ಇರುವಂತೆ ಆದೇಶವನ್ನು ಮಾಡಿದ್ದಾರೆ ನಾನು ಶಾಸಕನಾಗಿ ಇರುತ್ತೆನೆ ಎಂದು ಪ್ರತಿಕ್ರಿಯಿಸಿದರು.

Gayathri SG

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

3 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

4 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

4 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

4 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

5 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

5 hours ago