Categories: ಬೀದರ್

ಬೀದರ್‌ನ ’14 ಪರೀಕ್ಷಾ ಕೇಂದ್ರಗಳಲ್ಲಿ ‘ನೀಟ್‌’ ಪರೀಕ್ಷೆ

ಬೀದರ್ : ‘ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (ನೀಟ್‌) ಜಿಲ್ಲೆಯ 14 ಪರೀಕ್ಷಾ ಕೇಂದ್ರಗಳಲ್ಲಿ ಮೇ 5ರಂದು ನಡೆಯಲಿದೆ’ ಎಂದು ನೀಟ್‌ ಸಂಯೋಜಕ ಮಲ್ಲಿನಾಥ ಮಠಪತಿ ತಿಳಿಸಿದರು.

ಈ ಸಲ ಹೊಸದಾಗಿ ಶಾಹೀನ್‌ ಪಿಯು ಕಾಲೇಜು ಪರೀಕ್ಷಾ ಕೇಂದ್ರವಾಗಿ ಆಯ್ಕೆಯಾಗಿದೆ. ನೋಡಲ್‌ ಕೇಂದ್ರವಾಗಿಯೂ ಗುರುತಿಸಲಾಗಿದೆ.

ಬೀದರ್‌ ನಗರದ 12, ಭಾಲ್ಕಿ ತಾಲ್ಲೂಕಿನ ಕರಡ್ಯಾಳ ಹಾಗೂ ಹುಮನಾಬಾದಿನ ತಲಾ ಒಂದು ಕೇಂದ್ರ ಸೇರಿದಂತೆ ಒಟ್ಟು 14 ಕೇಂದ್ರಗಳಲ್ಲಿ ಒಟ್ಟು 8,289 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಮಾಹಿತಿ ಹಂಚಿಕೊಂಡರು.

‘ರಾಷ್ಟ್ರಮಟ್ಟದಲ್ಲಿ ಒಟ್ಟು 23 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹೆಸರು ನೋಂದಣಿ ಮಾಡಿಸಿಕೊಂಡಿದ್ದಾರೆ. ರಾಜ್ಯದಲ್ಲಿ 1.54 ಲಕ್ಷ ಮಕ್ಕಳು ಪರೀಕ್ಷೆ ಬರೆಯುವರು. ಮೇ 5ರಂದು ಮಧ್ಯಾಹ್ನ 2ರಿಂದ ಸಂಜೆ 5.20ರವರೆಗೆ ನಾಲ್ಕು ವಿಷಯಗಳ ಪರೀಕ್ಷೆಗಳು ನಡೆಯಲಿವೆ. ವಿದ್ಯಾರ್ಥಿಗಳು ಬೆಳಿಗ್ಗೆ 11ರ ನಂತರ ಪರೀಕ್ಷಾ ಕೇಂದ್ರಗಳಿಗೆ ಹೋಗಬಹುದು. ಹಿಂದಿನ ದಿನ ಪಾಲಕರು ಪರೀಕ್ಷಾ ಕೇಂದ್ರಗಳಿಗೆ ಭೇಟಿ ಕೊಟ್ಟು ಪರಿಶೀಲಿಸಿಕೊಳ್ಳುವುದು ಸೂಕ್ತ. ಪರೀಕ್ಷಾ ದಿನ ಯಾವುದೇ ರೀತಿಯ ಗೊಂದಲ ಉಂಟಾಗುವುದಿಲ್ಲ. ಸಮಯಕ್ಕೆ ಸರಿಯಾಗಿ ಹೋಗಿ ಪರೀಕ್ಷೆ ಬರೆಯಲು ಅನುಕೂಲವಾಗುತ್ತದೆ’ ಎಂದು ತಿಳಿಸಿದರು.

Nisarga K

Recent Posts

ಸಂವಿಧಾನವನ್ನು ಯಾವುದೇ ಸರ್ಕಾರ ಬದಲಾಯಿಸಲು ಸಾಧ್ಯವಿಲ್ಲ : ನಿತಿನ್‌ ಗಡ್ಕರಿ

ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಿಸಲಿದೆ ಎನ್ನುವ ಕಾಂಗ್ರೆಸ್‌ ಆರೋಪಕ್ಕೆ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿಗಳ ಖಾತೆ ಸಚಿವ…

1 min ago

ತೀರ್ಥಯಾತ್ರೆಗೆ ಬಂದ ನಾಲ್ವರು ನದಿಯಲ್ಲಿ ಮುಳುಗಿ ದಾರುಣ ಸಾವು

ತೀರ್ಥಯಾತ್ರೆಗೆಂದು ಅತಿಥಿ ಗೃಹಕ್ಕೆ ಬಂದಿದ್ದವರು ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿ ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕೊಲ್ಲಾಪುರದ ಕಾಗಲ್ ತಾಲೂಕಿನ…

20 mins ago

ಪ್ರಾಚೀನರ ಕಲಾ ಕೊಡುಗೆಗಳ ಸಂರಕ್ಷಣೆ ಅಗತ್ಯ: ನೇಮಿರಾಜ ಶೆಟ್ಟಿ

ಇತಿಹಾಸವನ್ನು ಚಿತ್ರಗಳ ಮೂಲಕ ಜೋಪಾಸನೆ ಮಾಡುವ ಕಾಯಕವೂ ಅತ್ಯಂತ ಶ್ರೇಷ್ಠ. ಮುಂದಿನ ಪೀಳಿಗೆಗೆ ಪ್ರಾಚೀನರ ಕಲಾ ಕೊಡುಗೆಯನ್ನು ಸಂರಕ್ಷಣೆ ಮಾಡುವುದು…

25 mins ago

ಮತ್ತೆ ವಿವಾದಕ್ಕೆ ಸಿಲುಕಿದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ

ಒಂದು ವರ್ಷದ ಸಾಧನೆಯ ರಿಪೋರ್ಟ್ ಕಾರ್ಡ್ ಹಿಡಿದು ಹಿರಿಯ ಬಿಜೆಪಿ ಮುಖಂಡರ ಬಳಿ ಶಾಸಕ ಅಶೋಕ್ ಕುಮಾರ್ ರೈ ತೆರಳಿದ್ದು, ಶಾಸಕ…

35 mins ago

ಚಾಮರಾಜನಗರ: ಹಾಸನೂರು ಘಾಟ್ ಬಳಿ ಕಾರು ಪಲ್ಟಿ

ಜಿಲ್ಲೆಗೆ ಹೊಂದಿಕೊಂಡಿರುವ ತಮಿಳುನಾಡಿನ ಹಾಸನೂರು ಘಾಟ್ ಬಳಿ ಕಾರೊಂದು ಪಲ್ಟಿಯಾದ ಘಟನೆ ನಡೆದಿದೆ.

55 mins ago

ಫ್ಲಾಟ್‌ಗಳನ್ನು ನಿರ್ಮಿಸಲು 8 ಮರಗಳನ್ನು ಕಡಿದ ಬಿಲ್ಡರ್ ವಿರುದ್ಧ ಎಫ್‌ಐಆರ್

ಫ್ಲಾಟ್‌ಗಳನ್ನು ನಿರ್ಮಿಸಲು ಎಂಟು ಮರಗಳನ್ನು ಕಡಿದ ಆರೋಪದ ಮೇಲೆ ಆಂಧ್ರಪ್ರದೇಶ ಮೂಲದ ಬಿಲ್ಡರ್ ವಿರುದ್ಧ ಬಿಬಿಎಂಪಿ ಅರಣ್ಯ ವಿಭಾಗವು ಎಫ್‌ಐಆರ್…

1 hour ago