Categories: ಬೀದರ್

ಬೀದರ್: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮಾಡುವುದಿಲ್ಲ

ಬೀದರ್: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮಾಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ನಡುವಳಿಕೆಗಳನ್ನು ಗಮನಿಸಿದರೆ ಡಿಸೆಂಬರ್ ವೇಳೆಗೆ ಸಾರ್ವತ್ರಿಕ ಚುನಾವಣೆ ನಡೆಯುವ ಸಾಧ್ಯತೆಗಳಿವೆ. ಚುನಾವಣಾ ಕಣಕ್ಕೆ ನಿಖಿಲ್ ಅವರನ್ನು ಇಳಿಸದೆ, 40 ಕ್ಷೇತ್ರಗಳಲ್ಲಿ ಪ್ರಚಾರದ ಜವಾಬ್ದಾರಿಯನ್ನು ಅವರಿಗೆ ವಹಿಸಲು ನಿರ್ಣಯಿಸಲಾಗಿದೆ ಎಂದು ಹೇಳಿದರು.

ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತಂದರೆ ರಾಜ್ಯದಲ್ಲಿನ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸುವ ವಿಶ್ವಾಸವನ್ನು ಜನರಲ್ಲಿ ಮೂಡಿಸಲಾಗುತ್ತಿದೆ. ನನ್ನ ಮಹತ್ವಕಾಂಕ್ಷಿ ಯೋಜನೆಗೆ ಮೂರ‍್ನಾಲ್ಕು ಲಕ್ಷ ಕೋಟಿ ರೂ. ಅನುದಾನದ ಅಗತ್ಯವಿದೆ. ಎರಡು ಸರ್ಕಾರಗಳು ಬಜೆಟ್‌ ನಲ್ಲಿ ಈಗ ನೀಡುತ್ತಿರುವ ಅನುದಾನದಲ್ಲಿ ನೂರು ವರ್ಷ ಕಳೆದರು ನೀರಾವರಿ ಯೋಜನೆಗಳು ಪೂರ್ಣಗೊಳಿಸಲು ಸಾಧ್ಯವಿಲ್ಲ. ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಈ ಸವಾಲನ್ನು ಗೆಲ್ಲುತ್ತೇನೆ ಎಂಬ ವಿಶ್ವಾಸ ಇದೆ ಎಂದರು.

ರಾಜ್ಯಾದ್ಯಂತ ಜೆಡಿಎಸ್ ಹಮ್ಮಿಕೊಂಡಿರುವ ‘ಪಂಚರತ್ನ’ ರಥಯಾತ್ರೆಗೆ ಮುಂದಿನ ತಿಂಗಳು ಚಾಲನೆ ನೀಡಲಾಗುತ್ತಿದ್ದು, ಈಗಾಗಲೇ ರೂಪರೇಷ ಸಿದ್ಧಗೊಳಿಸಲಾಗಿದೆ. ಎರಡು ಹಂತಗಳ ಮೂಲಕ ಒಟ್ಟು 104 ಕ್ಷೇತ್ರಗಳಲ್ಲಿ ಈ ಯಾತ್ರೆ ಸಂಚರಿಸಲಿದ್ದು, ದಿನಕ್ಕೆ ಒಂದು ಕ್ಷೇತ್ರದಲ್ಲಿ 14-15 ಸಭೆಗಳನ್ನು ಆಯೋಜನೆ ಮತ್ತು ಒಂದು ರಾತ್ರಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ ನಡೆಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ಮುಖ್ಯಮಂತ್ರಿಗಳಿದ್ದಾಗ ರೈತರ ಸಾಲ ಮನ್ನಾದಿಂದ ಆಗಿರುವ ಅನುಭವ ನನಗಿದೆ. ಸಾಲ ಮನ್ನಾ ತಾತ್ಕಾಲಿಕ ಅಷ್ಟೇ. ಹಾಗಾಗಿ ಮತ್ತೆ ಅಧಿಕಾರಕ್ಕೆ ಬಂದರೇ ರೈತರು ಕೃಷಿ ಚಟುವಟಿಕೆಗಳಿಗಗಿ ಸಾಲ ಮಾಡಿಕೊಳ್ಳದಂತೆ ಯೋಜನೆಗಳನ್ನು ರೂಪಿಸಲು ಚಿಂತನೆ ಹೊಂದಿದ್ದೆನೆ ಎಂದು ಹೇಳಿದರು.

Gayathri SG

Recent Posts

ಯುವಕನೊಬ್ಬ ಎಂಟು ಬಾರಿ ಮತ ಚಲಾಯಿಸಿದ ವೀಡಿಯೊ ವೈರಲ್

ಯುವಕನೋರ್ವ ಬಿಜೆಪಿ ಅಭ್ಯರ್ಥಿಗೆ ಎಂಟು ಬಾರಿ ಮತಹಾಕಿರುವ ಘಟನೆ ಉತ್ತರ ಪ್ರದೇಶದ ಇಟಾ ಜಿಲ್ಲೆಯ ನಯಾ ಗಾಂವ್ ಪಟ್ಟಣದಲ್ಲಿ ನಡೆದಿದೆ.…

14 mins ago

ʻಮೋದಿಗೆ ಯಾರೂ ವೋಟ್ ಹಾಕಬೇಡಿ’ ಎಂದಿದ್ದ ಶಿಕ್ಷಕ ಅರೆಸ್ಟ್‌

ಯಾರು ಮೋದಿಗೆ ವೋಟ್​ ಹಾಕಬೇಡಿ ಎಂದು ಶಾಲಾ ಮಕ್ಕಳಿಗೆ ಹೇಳಿದ್ದ ಸರ್ಕಾರಿ ಶಾಲೆಯ ಶಿಕ್ಷಕನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಈ…

28 mins ago

ರೇವ್‌ ಪಾರ್ಟಿ ಮೇಲೆ ಪೊಲೀಸ್‌ ದಾಳಿ : ತೆಲುಗು ನಟಿ, ಮಾಡೆಲ್​ ಸಿಸಿಬಿ ವಶಕ್ಕೆ

ಸಿಸಿಬಿ ಪೊಲೀಸರು ರಾಜಧಾನಿಯಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿಯೊಂದರ ಮೇಲೆ ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಆಂಧ್ರಪ್ರದೇಶದಿಂದ ತೆಲುಗು ನಟಿಯರನ್ನು ಕರೆಸಿಕೊಂಡು…

40 mins ago

ಜೂನಿಯರ್ ಎನ್​ಟಿಆರ್ ಜನ್ಮದಿನ : ಸ್ಟಾರ್ ಹೀರೋಗೆ ಕನ್ನಡದ ಬಗ್ಗೆ ವಿಶೇಷ ಪ್ರೀತಿ

ಜೂನಿಯರ್ ಎನ್​ಟಿಆರ್ ಅವರಿಗೆ ಇಂದು ಹುಟ್ಟುಹಬ್ಬ ಸಂಭ್ರಮ.ಈ ವಿಶೇಷ ದಿನದಂದು ಸೆಲೆಬ್ರಿಟಿಗಳು, ಕುಟುಂಬದವರು, ಅಭಿಮಾನಿಗಳು ನಟನಿಗೆ ಶುಭಾಶಯ ಬರುತ್ತಿದೆ. ಜೂನಿಯರ್…

58 mins ago

ಮಲ್ಲಮ್ಮ ಜಯಂತಿಗೆ ಅಗೌರವ : ರೆಡ್ಡಿ ಸಮಾಜ ಪದಾಧಿಕಾರಿಗಳ ಪ್ರತಿಭಟನೆ

ಚಿಟಗುಪ್ಪ'ತಾಲ್ಲೂಕಿನ ನಿರ್ಣಾ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಶುಕ್ರವಾರ ಹೇಮರಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಗೌರವ…

1 hour ago

ಮಳೆಯಿಂದ​ ಪಂದ್ಯ ರದ್ದು : ರಾಯಲ್ಸ್​ ವಿರುದ್ಧ ರಾಜಸ್ಥಾನ್​ ಕಣಕ್ಕೆ

17ನೇ ಆವೃತ್ತಿಯ ಐಪಿಎಲ್​ನ ಕೊನೆಯ ಲೀಗ್​ ಪಂದ್ಯ ಮಳೆಯಿಂದ ರದ್ದುಗೊಂಡಿದೆ. ರಾಜಸ್ಥಾನ್​ ರಾಯಲ್ಸ್​ ಮತ್ತು ಕೋಲ್ಕತ್ತಾ ನೈಟ್​ ರೈಡರ್ಸ್ತಂಡಗಳು ಈ…

2 hours ago