Categories: ಬೀದರ್

ಅನುಮತಿ ಇಲ್ಲದೆ ಪಟಾಕಿ ಮಳಿಗೆ ತೆರೆಯುವಂತಿಲ್ಲ; ಜಿಲ್ಲಾಧಿಕಾರಿ ಎಚ್ಚರಿಕೆ

ಬೀದರ್‌: ‘ಯಾರು ಕೂಡ ಅನುಮತಿ ಇಲ್ಲದೆ ಪಟಾಕಿ ಮಳಿಗೆಗಳನ್ನು ನಡೆಸುವಂತಿಲ್ಲ. ಒಂದುವೇಳೆ ನಿಯಮ ಉಲ್ಲಂಘಿಸಿ ಮಳಿಗೆ ತೆರೆದರೆ ಅಂತಹವರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಲಾಗುವುದು’ ಎಂದು ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಎಚ್ಚರಿಕೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ಪಟಾಕಿ ಮಳಿಗೆಗಳಿಗೆ ಅನುಮತಿ ಕೊಡುವ ವಿಚಾರಕ್ಕೆ ಸಂಬಂಧಿಸಿದ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ನಡೆಸಿದ ವಿಡಿಯೊ ಸಂವಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ದೀಪಾವಳಿ ಹಬ್ಬದ ಅಂಗವಾಗಿ ತಾತ್ಕಾಲಿಕವಾಗಿ ಪಟಾಕಿ ಮಳಿಗೆಗಳನ್ನು ಹಾಕುವ ಮಾಲೀಕರು ಮುಂಚಿತವಾಗಿ ಸಂಬಂಧಪಟ್ಟವರಿಂದ ಅನುಮತಿ ಪಡೆಯಬೇಕು. ಶಾಶ್ವತವಾಗಿ ಮಳಿಗೆಗಳನ್ನು ನಡೆಸುವವರು ಕಡ್ಡಾಯವಾಗಿ ಅನುಮತಿ ಹೊಂದಿರಬೇಕು. ಯಾರ ಪರವಾನಗಿ ಅವಧಿ ಮುಗಿದಿದೆಯೋ ಅಂತಹವರು ನವೀಕರಿಸಿಕೊಳ್ಳಬೇಕು ಎಂದು ಸೂಚಿಸಿದರು.

ತಾತ್ಕಾಲಿಕ ಪರವಾನಗಿಗಾಗಿ ಅರ್ಜಿ ಸಲ್ಲಿಸಿ ಮಳಿಗೆಗಳನ್ನು ತೆರೆಯುವ ಸ್ಥಳಕ್ಕೆ ಪೊಲೀಸ್ ಇಲಾಖೆ, ಕಂದಾಯ ಇಲಾಖೆ, ಅಗ್ನಿ ಶಾಮಕ ದಳ ಹಾಗೂ ನಗರಸಭೆಯ ಅಧಿಕಾರಿಗಳು ಜಂಟಿ ಭೇಟಿ ನೀಡಿ ಪರಿಶೀಲಿಸಿ ಮೂರು ದಿನಗಳ ಒಳಗೆ ಎನ್‌ಒಸಿ ನೀಡಬೇಕು. ಈ ಹಿಂದಿನಿಂದ ಜಿಲ್ಲೆಯಾದ್ಯಂತ ನಡೆಸಲಾಗುತ್ತಿರುವ ಪಟಾಕಿ ಅಂಗಡಿಗಳಿಗೆ ಅಧಿಕಾರಿಗಳು ಭೇಟಿ ನೀಡಿ ಅವರ ಪರವಾನಗಿ ಪರಿಶೀಲಿಸಬೇಕು. ಅವರು ಕೈಗೊಂಡಿ ರುವ ಸುರಕ್ಷತಾ ಕ್ರಮ ಪರಿಶೀಲಿಸಿ ದೃಢೀಕರಿಸಬೇಕು ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್ ಮಾತನಾಡಿ, ಯಾರು ಕೂಡ ಪರವಾನಗಿ ಇಲ್ಲದೆ ಪಟಾಕಿ ಮಾರಾಟ ಮಾಡುವಂತಿಲ್ಲ. ಪಟಾಕಿ ಅಂಗಡಿ ಹೊರತುಪಡಿಸಿ ಇತರೆ ಮಳಿಗೆಗಳಲ್ಲಿ ಪಟಾಕಿ ಮಾರಾಟ ಮಾಡುವುದು ಅಪರಾಧ ಎಂದು ತಿಳಿಸಿದರು.

ಪೊಲೀಸ್ ಅಧಿಕಾರಿಗಳು ಸ್ಥಳ ಪರಿಶೀಲನೆಗೆ ತೆರಳಿದ ಸಂದರ್ಭದಲ್ಲಿ ಪಟಾಕಿ ಮಾರಾಟದ ಪರವಾನಗಿ ಇಲ್ಲದೆ ಇರುವುದು ಕಂಡು ಬಂದರೆ ಅವರ ವಿರುದ್ಧ ಪ್ರಕರಣ ದಾಖಲಿಸಬೇಕು. ಯಾವುದೇ ಕಾರಣಕ್ಕೂ ಸ್ಥಳ ಪರಿಶೀಲನೆ ನಡೆಸದೆ ಎನ್‌ಒಸಿ ನೀಡಬಾರದು ಎಂದು ನಿರ್ದೇಶನ ನೀಡಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಎಂ., ಉಪವಿಭಾಗಾಧಿಕಾರಿ ಲವೀಶ್ ಒರ್ಡಿಯಾ, ಹೆಚ್ಚುವರಿ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ, ನಗರಸಭೆ ಪೌರಾಯುಕ್ತ ಶಿವರಾಜ ರಾಠೋಡ, ಅಗ್ನಿ ಶಾಮಕ ದಳದ ಅಧಿಕಾರಿ, ಜಿಲ್ಲಾ ಹಾಗೂ ತಾಲ್ಲೂಕುಮಟ್ಟದ ಅಧಿಕಾರಿಗಳು ಹಾಜರಿದ್ದರು.

Ashika S

Recent Posts

ಬೀದರ್‌ನಲ್ಲಿ ಮುಸ್ಲಿಂ ಯುವಕರಿಂದ ನೈತಿಕ ಪೊಲೀಸ್‌ಗಿರಿ

ಬೀದರ್‌ನ ಬಸವಕಲ್ಯಾಣದಲ್ಲಿ ಮತ್ತೊಂದು ನೈತಿಕ ಪೊಲೀಸ್​ಗಿರಿ ನಡೆದಿದೆ. ಬಸವಕಲ್ಯಾಣದ ಹೊರವಲಯದ ಪಾರ್ಕ್‌ನಲ್ಲಿ ಹಿಂದೂ ಧರ್ಮೀಯ ವ್ಯಕ್ತಿ ಜೊತೆ ಕುಳಿತಿದ್ದಕ್ಕೆ ಮುಸ್ಲಿಂ…

7 seconds ago

ಕೈ ತಪ್ಪಿದ ವಿಧಾನಪರಿಷತ್ ಟಿಕೆಟ್: ಮಾಜಿ ಶಾಸಕ ರಘುಪತಿ ಭಟ್ ಅಸಮಾಧಾ‌ನ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ ಬೆನ್ನಲ್ಲೇ ಉಡುಪಿ…

16 mins ago

ಇಂದು ದಾದಿಯರ ದಿನ; ದಣಿವರಿಯಿಲ್ಲದೆ ಕೆಲಸ ಮಾಡುವ ದಾದಿಯರಿಗೊಂದು ಸಲಾಂ

ಪ್ರಪಂಚದಾದ್ಯಂತ ಮೇ 12ರಂದು ಅಂತರಾಷ್ಟ್ರೀಯ ದಾದಿಯರ ದಿನ ವನ್ನಾಗಿ ಆಚರಿಸಲಾಗುತ್ತದೆ. ಫ್ಲಾರೆನ್ಸ್ ನೈಟಿಂಗೇಲ್ ಅವರ ಜನ್ಮದಿನದ ಗೌರವಾರ್ಥವಾಗಿ ವಿಶ್ವಾದ್ಯಂತ ಅಂತರರಾಷ್ಟ್ರೀಯ…

27 mins ago

ಜೈಲಿನಲ್ಲೇ ಹೃದಯಾಘಾತವಾಗಿ ಕೈದಿ ಮೃತ್ಯು

ವಿಚಾರಣಾಧೀನ ಕೈದಿಯೋರ್ವ ಜೈಲಿನಲ್ಲೇ ಹೃದಯಾಘಾತ ಸಂಭವಿಸಿ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಹಿರಿಯಡಕ ಸಬ್ ಜೈಲಿನಲ್ಲಿ ನಡೆದಿದೆ.

32 mins ago

ಎಕ್ಸಾಂನಲ್ಲಿ ಫೇಲ್‌ : ಕೆರೆಗೆ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ

ಪರೀಕ್ಷೆಯಲ್ಲಿ ಫೇಲ್‌ ಆಗಿದ್ದೇನೆ ಎಂದು ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. . ಫೇಲ್ ಆದ ವಿಚಾರ ಪೋಷಕರಿಗೆ…

57 mins ago

29ನೇ ಬಾರಿ ಮೌಂಟ್‌ ಎವರೆಸ್ಟ್‌ ಏರಿದ ಕಮಿ ರೀಟಾ ಶೆರ್ಪಾ

ಎವರೆಸ್ಟ್ ಮ್ಯಾನ್ ಎಂದೇ ಹೆಸರಾಗಿರುವ ನೇಪಾಳದ ಕಮಿ ರೀಟಾ ಶೆರ್ಪಾ 29ನೇ ಬಾರಿ ವಿಶ್ವದ ಅತಿ ಎತ್ತರದ ಪರ್ವತ ಮೌಂಟ್‌…

1 hour ago