News Karnataka Kannada
Thursday, May 02 2024
ಬೀದರ್

ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಭಗವಂತ ಖೂಬಾ

ನಾಮಪತ್ರ ಸಲ್ಲಿಕೆಗೆ ಕೆಲ ನಿಮಿಷಗಳು ಬಾಕಿಯಿದ್ದ ಕಾರಣ ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವ ಭಗವಂತ ಖೂಬಾ ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿಗೆ ಓಡಿ ಬಂದು ನಾಮಪತ್ರ ಸಲ್ಲಿಸಿದ ಪ್ರಸಂಗ ನಡೆಯಿತು.
Photo Credit : NewsKarnataka

ಬೀದರ್ : ನಾಮಪತ್ರ ಸಲ್ಲಿಕೆಗೆ ಕೆಲ ನಿಮಿಷಗಳು ಬಾಕಿಯಿದ್ದ ಕಾರಣ ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವ ಭಗವಂತ ಖೂಬಾ ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿಗೆ ಓಡಿ ಬಂದು ನಾಮಪತ್ರ ಸಲ್ಲಿಸಿದ ಪ್ರಸಂಗ ನಡೆಯಿತು. ಉಮೇದುವಾರಿಕೆ ಸಲ್ಲಿಕೆ ಪ್ರಯುಕ್ತ ನಗರದ ಗಣೇಶ ಮೈದಾನದಲ್ಲಿ ಬಿಜೆಪಿ ಬೃಹತ್ ಸಭೆ ಆಯೋಜಿಸಲಾಗಿತ್ತು.

ಸಭೆ ತಡವಾಗಿ ಆರಂಭವಾದ ಕಾರಣ, ನಂತರ ನಡೆದ ರೋಡ್ ಶೋ ಮುಗಿಯಲು ಸಮಯ ಹಿಡಿಯಿತು. ನಾಮಪತ್ರ ಸಲ್ಲಿಕೆಗೆ ಮಧ್ಯಾಹ್ನ 3 ಗಂಟೆಗೆ ಸಮಯ ನಿಗದಿಯಿದ್ದು, ಭಗವಂತ ಖೂಬಾ ಅವರು ಜಿಲ್ಲಾಧಿಕಾರಿ ಕಚೇರಿ ಆವರಣಕ್ಕೆ ತಲುಪಿದಾಗ ಇನ್ನೂ ಕೆಲ ನಿಮಿಷಗಳೇ ಉಳಿದಿತ್ತು. ಹಾಗಾಗಿ ಅಗತ್ಯ ದಾಖಲೆಗಳೊಂದಿಗೆ ಜಿಲ್ಲಾ ಚುನಾವಣಾಧಿಕಾರಿ ಕೊಠಡಿಗೆ ಓಡಿ ಬಂದರು, ಅವರ ಹಿಂದೆ ಸೂಚಕರು ಸಹ ಓಡೋಡಿ ಕೋಣೆಗೆ ತಲುಪಿದರು. ನಂತರ ಮತ್ತೊಂದು ಸೆಟ್ ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಕೆಗೂ ಮುನ್ನ ಭಗವಂತ ಖೂಬಾ ಅವರು ಭರ್ಜರಿ ರೋಡ್ ಶೋ ನಡೆಸಿ, ಶಕ್ತಿ ಪ್ರದರ್ಶನ ಮಾಡಿದರು. ಗಣೇಶ ಮೈದಾನದಲ್ಲಿ ಬಹಿರಂಗ ಸಭೆ ಬಳಿಕ ತೆರೆದ ವಾಹನದಲ್ಲಿ ಪ್ರಮುಖ ರಸ್ತೆಗಳ ಮೂಲಕ ಜಿಲ್ಲಾಧಿಕಾರಿ ಕಚೇರಿಯವರೆಗೆ ಮೆರವಣಿಗೆ ನಡೆಯಿತು. ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸಿದ್ದ ಬಿಜೆಪಿ ಕಾರ್ಯಕರ್ತರು, ಖೂಬಾ ಅಭಿಮಾನಿಗಳು ಕೇಸರಿ ಶಾಲು, ಪಕ್ಷದ ಧ್ವಜ ಮತ್ತು ಟೋಪಿಗಳನ್ನು ಧರಿಸಿ ಜಯ ಘೋಷಗಳ ಮಧ್ಯ ಹೆಜ್ಜೆ ಹಾಕಿದರು

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು