News Karnataka Kannada
Monday, April 29 2024
ಬೀದರ್

ಬಿಜೆಪಿಯವರು ತಿಪ್ಪರಲಾಗ ಹಾಕಿದರೂ ಏನು ಆಗಲ್ಲ: ಈಶ್ವರ ಬಿ.ಖಂಡ್ರೆ

'ಬಿಜೆಪಿ-ಜೆಡಿಎಸ್‌ ಮೈತ್ರಿ ಅವಕಾಶವಾದಿ ರಾಜಕಾರಣ' ಎಂದು ಪರಿಸರ, ಅರಣ್ಯ ಮತ್ತು ಜೀವಿಶಾಸ್ತ್ರ ಖಾತೆ ಸಚಿವ ಈಶ್ವರ ಬಿ. ಖಂಡ್ರೆ ಹೇಳಿದರು.
Photo Credit : News Kannada

ಬೀದರ್: ‘ಬಿಜೆಪಿಯವರು ತಿಪ್ಪರಲಾಗ ಹಾಕಿದರೂ ಏನು ಆಗಲ್ಲ. ಹಿಂದೆ ಆಪರೇಷನ್‌ ಕಮಲ ಮಾಡಿದ್ದಕ್ಕೆ ಏನಾಗಿದೆ ಎಲ್ಲರಿಗೂ ಗೊತ್ತಿರುವ ಸಂಗತಿ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಹೇಳಿದರು.

ನಗರದ ಬ್ರಿಮ್ಸ್‌ನಲ್ಲಿ ಶನಿವಾರ ಸಂಜೆ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಯಾರು ಕೂಡ ಕಾಂಗ್ರೆಸ್‌ ಪಕ್ಷ ಬಿಟ್ಟು ಬಿಜೆಪಿಗೆ ಹೋಗುವುದಿಲ್ಲ. ಸ್ಥಿರವಾದ ಸರ್ಕಾರ ಇದೆ. ಎಲ್ಲಾ ಭರವಸೆಗಳನ್ನು ಈಡೇರಿಸಲಾಗುತ್ತಿದೆ. ಬಿಜೆಪಿಯವರು ತಿಪ್ಪರಲಾಗ ಹಾಕಿದರೂ ಏನು ಆಗಲ್ಲ. ಅವರ ಸಮಸ್ಯೆ ಅವರು ಬಗೆಹರಿಸಿಕೊಳ್ಳಬೇಕು ಎಂದರು.

ಜಾತಿ, ಜಾತಿಗಳ ನಡುವೆ, ಧರ್ಮ ಧರ್ಮಗಳ ನಡುವೆ ದ್ವೇಷ ಬಿತ್ತುವ ಕೆಲಸ ಬಿಜೆಪಿಯವರು ಮುಂದುವರೆಸಿಕೊಂಡು ಹೋಗುತ್ತಿದ್ದಾರೆ. ಈ ನೆಲದ ಕಾನೂನು ಎಲ್ಲರಿಗೂ ಒಂದೇ ಇದೆ. ವನ್ಯಜೀವಿ ಸಂರಕ್ಷಣಾ ಕಾಯ್ದೆ ಕುರಿತು ಹೆಚ್ಚಿನ ಅರಿವು ಮೂಡಿಸಲಾಗುವುದು. ಕಾನೂನು ತಜ್ಞರ ಜೊತೆ ಚರ್ಚಿಸಿ ಶಾಶ್ವತವಾದ ನಿಯಮಗಳನ್ನು ರೂಪಿಸಲಾಗುವುದು ಎಂದು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು