ಬೀದರ್

ನಮ್ಮ ಸರ್ಕಾರ ಎಲ್ಲಾ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ: ಅರವಿಂದಕುಮಾರ ಅರಳಿ

ಬೀದರ್: ಚುನಾವಣೆ ಪೂರ್ವದಲ್ಲಿ ನೀಡಿದ ಭರವಸೆಯಂತೆ ನಮ್ಮ ಸರ್ಕಾರ ಎಲ್ಲಾ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ ಎಂದು ವಿಧಾನ ಪರಿಷತ್ ಸದಸ್ಯರಾದ ಅರವಿಂದಕುಮಾರ ಅರಳಿ ಹೇಳಿದರು.

ಅವರು ಶುಕ್ರವಾರ ಬೀದರ ಕೇಂದ್ರ ಬಸ್ ನಿಲ್ದಾಣದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಹಮ್ಮಿಕೊಳ್ಳಲಾದ ಸರ್ಕಾರದ 5 ಗ್ಯಾರಂಟಿ ಯೋಜನೆಗಳ ಪ್ರಚಾರದ ಸಂಚಾರಿ ವಾಹನಕ್ಮೆ ಹಸಿರು ನಿಶಾನೆ ತೋರಿ ಮಾತನಾಡಿದರು.

ಗೃಹ ಜ್ಯೋತಿ. ಗೃಹ ಲಕ್ಷಿ. ಮತ್ತು ಶಕ್ತಿ ಯೋಜನೆಗಳಿಂದ ವಿಶೇಷವಾಗಿ ಮಹಿಳೆಯರಿಗೆ ತುಂಬಾ ಅನುಕೂಲವಾಗಿದೆ. ರಾಜ್ಯದಲ್ಲಿ ಯಾರು ಹಸಿವಿನಿಂದ ಬಳಲಬಾರದು ಎಂದು ಅನ್ನಭಾಗ್ಯ ಯೋಜನೆ ಜಾರಿಮಾಡಲಾಗಿದೆ ಹಾಗೂ ಪದವಿ ಮತ್ತು ಡಿಪ್ಲೋಮಾ ಮುಗಿಸಿ ಉದ್ಯೋಗ ಸಿಗದ ನಿರುದ್ಯೋಗ ಪದವಿಧರ ಯುವಕ ಮತ್ತು ಯುವತಿಯರಿಗೆ ನಿರುದ್ಯೋಗ ಭತ್ಯಯನ್ನು ನಮ್ಮ ಸರ್ಕಾರ ನೀಡುತ್ತಿದೆ ಎಂದರು.

ಸಾರ್ವಜನಿಕರು ಸರ್ಕಾರದ ಎಲ್ಲಾ ಯೋಜನೆಗಳ ಲಾಭವನ್ನು ಪಡೆದುಕೊಳ್ಳಬೇಕು ಮತ್ತು ಈ ಯೋಜನೆಗಳ ಮಾಹಿತಿಯನ್ನು ಜನರಿಗೆ ತಲುಪಿಸುವ ಸಲುವಾಗಿ ಪ್ರಚಾರ ವಾಹನ ಮತ್ತು ಕಲಾ ತಂಡಗಳ ಮೂಲಕ ಗ್ರಾಮೀಣ ಜನರಿಗೆ ಈ ಯೋಜನೆಗಳ ಮಾಹಿತಿಯನ್ನು ನೀಡಲು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಈ ಸಂಚಾರಿ ವಾಹನ ಬೀದರ ಜಿಲ್ಲೆಯಲ್ಲಿ ಸರ್ಕಾರದ 5 ಯೋಜನೆಗಳಾದ ಶಕ್ತಿ. ಗೃಹಜ್ಯೋತಿ. ಅನ್ನಭಾಗ್ಯ. ಗೃಹ ಲಕ್ಷ್ಮಿ. ಯುವ ನಿಧಿ ಯೋಜನೆಗಳ ಕುರಿತು ಪ್ರಚಾರ ನೀಡಲಿದೆ ಇದರ ಜೊತೆಗೆ ಒಂದು ಕಲಾ ತಂಡವು ಇರಲಿದ್ದು ಈ ಯೋಜನೆಗಳ ಮಾಹಿತಿಯನ್ನು ಜನರಿಗೆ ತಲುಪಿಸುವ ಕೆಲಸ ಮಾಡಲಾಗುತ್ತಿದೆ.

ಈ ಸಂದರ್ಭದಲ್ಲಿ ಬೀದರ ನಗರ ಸಭೆ ಅಧ್ಯಕ್ಷರಾದ ಮೊಹ್ಮದ ಗೌಸ್, ಮುಖಂಡರಾದ ಬಬಲು ಪಾಲ, ಮಾಹಾಲಿಂಗ, ವಾರ್ತಾ ಇಲಾಖೆಯ ವಿಜಯಕೃಷ್ಣ ಸೋಲಪುರ, ಕಲಾವಿದರಾದ ಶಂಕರ ಚೋಂಡಿ ಮತ್ತು ತಂಡ ಹಾಗೂ ಸಾರಿಗೆ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Ashika S

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

8 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

9 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

9 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

9 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

10 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

10 hours ago