News Karnataka Kannada
Friday, May 03 2024
ಬೀದರ್

ಹೊರಗಿನವರ ಆಟ ಕರ್ನಾಟಕದಲ್ಲಿ ನಡೆಯುವುದಿಲ್ಲ: ಶಾಸಕ ಬಂಡೆಪ್ಪ ಖಾಶೆಂಪುರ್

Outsiders' game won't play in Karnataka: MLA Bandeppa Khashempur
Photo Credit : News Kannada

ಬೀದರ್ : ಮೋದಿ ಹವಾ ಕೇಂದ್ರದ್ದು ರಾಜ್ಯಕ್ಕೆ ಸಂಬಂಧಿಸಿದ್ದಲ್ಲ. ಇದು ದಕ್ಷಿಣ ಭಾರತ, ಇಲ್ಲಿನ ವಾತಾವರಣ, ದೂರದೃಷ್ಟಿನೇ ಬೇರೆ. ಇಲ್ಲಿನ ಜನ ಪ್ರಾದೇಶಿಕ ಪಕ್ಷಕ್ಕೆ ಬೆಂಬಲ ಕೊಡ್ತಾರೆ ಎಂದು ಮಾಜಿ ಸಚಿವರು, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು, ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷರು, ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರು ಹೇಳಿದರು.

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಖಾಶೆಂಪುರ್ ಪಿ ಗ್ರಾಮದ ಹೊರವಲಯದಲ್ಲಿರುವ ತಮ್ಮ ನಿವಾಸದಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮಲ್ಲಿ ಹೊರಗಿನವರ ಯಾರ ಆಟವು ನಡೆಯದು. ಹಿಂದಿನಿಂದಲೂ ಅವ್ರೆಲ್ಲಾ ರಾಜ್ಯಕ್ಕೆ ಬಂದು ಹೋಗಿದ್ದಾರೆ. ಆದರೆ ಇಲ್ಲಿಯವರೆಗೆ ಪೂರ್ಣ ಬಹುಮತ ಬಿಜೆಪಿಗೆ ಸಿಕ್ಕಿಲ್ಲ. ಈ ಬಾರಿ ನಮ್ಮ ಪಕ್ಷಕ್ಕೆ ರಾಜ್ಯದ ಜನ ಬಹುಮತ ನೀಡ್ತಾರೆ ಎಂದರು.

ಎರಡು ರಾಷ್ಟ್ರೀಯ ಪಕ್ಷಗಳು ನಾಡಿನ ಜನತೆಗೆ ಯಾವುದೇ ಒಳ್ಳೆಯ ಕೆಲಸ ಮಾಡಿಲ್ಲ. ಈ ಹಿಂದೆ ಐದು ವರ್ಷಗಳ ಕಾಲ ಕಾಂಗ್ರೆಸ್ ಅಧಿಕಾರ ನಡೆಸಿತ್ತು. ಈಗ ನಾಲ್ಕು ವರ್ಷ ಬಿಜೆಪಿ ಸರ್ಕಾರ ನಡೆಸಿದೆ. ನಾಡಿನ ಬಡವರು, ರೈತರು ಇಬ್ಬರ ಆಡಳಿತವನ್ನು ನೋಡಿ ಬೇಸತ್ತಿದ್ದಾರೆ. ಇವತ್ತು ನಮ್ಮ ಕ್ಷೇತ್ರದಲ್ಲಿ ಕೂಡ ಬೇರೆ ಬೇರೆ ಪಕ್ಷಗಳನ್ನು ತೊರೆದು ಬಹಳಷ್ಟು ಜನ ನಮ್ಮ ಪಕ್ಷಕ್ಕೆ ಸೇರಿ ಬೆಂಬಲ ಸೂಚಿಸುತ್ತಿದ್ದಾರೆ. ಇದು ಒಳ್ಳೆಯ ಬೆಳವಣಿಗೆಯಾಗಿದೆ.

ಹಿಂದೆ ಕುಮಾರಸ್ವಾಮಿರವರು ಮುಖ್ಯಮಂತ್ರಿ ಇದ್ದಾಗ ಹದಿನಾಲ್ಕು ತಿಂಗಳಲ್ಲಿ ಇಪ್ಪತ್ತೈದು ಸಾವಿರ ಕೋಟಿ ರೂ‌. ರೈತರ ಸಾಲ ಮನ್ನಾ ಮಾಡಿದ್ದೇವು. ಈಗ ಕೂಡ ನಮ್ಮ ಪ್ರಣಾಳಿಕೆಯಲ್ಲಿ ರೈತರಿಗೆ 24 ತಾಸು ಕರೆಂಟ್, ಸ್ವಸಹಾಯ ಗುಂಪುಗಳ ಸಾಲಮನ್ನಾ, ಪೆನ್ಸೆನ್ ಗಳನ್ನು ಹೆಚ್ಚಿಸುವುದು, ರೈತರ ಸಾಗುವಳಿಗಾಗಿ ಎಕರೆಗೆ ಹತ್ತು ಸಾವಿರ ರೂ. ಕೊಡುವುದು ಹೀಗೆ ಅನೇಕ ಯೋಜನೆಗಳನ್ನು ಘೋಷಣೆ ಮಾಡಿದ್ದೇವೆ. ಈಗ ನಮ್ಮ ಪಕ್ಷಕ್ಕೆ ಹೆಚ್ಚಿನ ಒಲವು ಕಂಡುಬರುತ್ತಿದೆ. ಕೇವಲ ನಮ್ಮ ಕ್ಷೇತ್ರ ಮಾತ್ರವಲ್ಲ ಬೀದರ್ ನಿಂದ ಚಾಮರಾಜನಗರದ ತನಕ ಒಲವು ಇದೆ ಎಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ವಿಶ್ವಾಸ ವ್ಯಕ್ತಪಡಿಸಿದರು.

ಮಲ್ಲಿಕಾರ್ಜುನ ಖೂಬಾಗೆ ಟಿಕೆಟ್ ಕೊಡುವುದು ವರಿಷ್ಠರಿಗೆ ಬಿಟ್ಟಿದ್ದು:
ನಾವು ಈಗಾಗಲೇ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಟಿಕೆಟ್ ಘೋಷಣೆ ಮಾಡಿದ್ದೇವೆ. ಮಲ್ಲಿಕಾರ್ಜುನ ಖೂಬಾರವರು ನಮ್ಮ ಪಕ್ಷದವರು ಮೊದಲಿನಿಂದಲೂ ನಮ್ಮ ಜೊತೆಗೆ ಇದ್ದರು. ಈಗ ಅವ್ರು ಕೂಡ ಮರಳಿ ಬಂದಿದ್ದಾರೆ. ಅವ್ರು ಪಕ್ಷಕ್ಕೆ ಶಕ್ತಿ ತುಂಬಲಿದ್ದಾರೆ. ಟಿಕೆಟ್ ವಿಷಯದಲ್ಲಿನ ತೀರ್ಮಾನವನ್ನು ನಮ್ಮ ಪಕ್ಷದ ವರಿಷ್ಠರು ತೆಗೆದುಕೊಳ್ಳಲಿದ್ದಾರೆ.

ಹಾಸನ ಟಿಕೆಟ್ ತೀರ್ಮಾನ ವರಿಷ್ಠರಿಗೆ ಬಿಟ್ಟಿದ್ದು:
ಹಾಸನ ಟಿಕೆಟ್ ವಿಷಯದಲ್ಲಿ ಯಾವುದೇ ಗೊಂದಲವಿಲ್ಲ. ಎಲ್ಲರೂ ಸೇರಿ ದೇವೇಗೌಡರ ವಾಣಿಯಂತೆ ಒಮ್ಮತದ ನಿರ್ಧಾರ ತೆಗೆದುಕೊಳ್ಳುತ್ತೇವೆ. ಎಲ್ಲರೂ ಅವರ ಆದೇಶವನ್ನು ಪಾಲಿಸುತ್ತೇವೆ. ಬೇರೆ ಪಕ್ಷಗಳಿಗೆ ಒಲಿಕೆ ಮಾಡಿದರೆ ನಮ್ಮಲ್ಲಿ ಕುಟುಂಬ ರಾಜಕೀಯವಿಲ್ಲ. ಬಿಜೆಪಿ, ಕಾಂಗ್ರೆಸ್ ನಲ್ಲಿ ಕುಟುಂಬ ರಾಜಕೀಯ ಇಲ್ವಾ..? ನಮ್ಮಲ್ಲಿ ಯಾವುದೇ ರೀತಿಯ ಸಮಸ್ಯೆ ಇಲ್ಲ. ಟಿಕೆಟ್ ಗೊಂದಲ ದೇವೇಗೌಡರ ಸಮ್ಮುಖದಲ್ಲಿ ಬಗೆಹರಿಯುತ್ತದೆ.

ನಮ್ಮ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಕುಮಾರಸ್ವಾಮಿರವರು ಅಂತ ನಾವು ಈಗಾಗಲೇ ಘೋಷಣೆ ಮಾಡಿದ್ದೇವೆ. ಬಿಜೆಪಿಯವ್ರು ಯಾವುದೇ ಮಹತ್ವದ ಅಭಿವೃದ್ಧಿ ಕೆಲಸ ಮಾಡಿಲ್ಲ. 2018ರಲ್ಲೂ ಕೂಡ ಪ್ರಧಾನಮಂತ್ರಿಗಳು ರಾಜ್ಯಕ್ಕೆ ಬಂದಿದ್ದರು. ಹಾಗ ಯಾಕ್ ಅವ್ರು ಹೆಚ್ಚಿನ ಸ್ಥಾನ ತೆಗೆದುಕೊಳ್ಳಲಿಲ್ಲ. ಅಮೀತ್ ಷಾ ಕೂಡ ಬಂದಿದ್ದರು. ಬಹುಮತ ಯಾಕ್ ಬರ್ಲಿಲ್ಲ. ನಾಲ್ಕು ವರ್ಷದಿಂದ ಅವರು ಭ್ರಷ್ಟಾಚಾರ ಮಾಡಿದ್ದಾರೆ. ಇದರ ಬಿಸಿ ಎಲೆಕ್ಷನ್ ಗೆ ತಟ್ಟುತ್ತದೆ ಎಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು