Categories: ಬೀದರ್

ಪ್ರಭು ಚೌಹಾಣ್ ಮುಕ್ತ ಔರಾದ: ಜೈಸಿಂಗ್ ರಾಠೋಡ್ ಹೇಳಿಕೆ

ಔರಾದ: ತಾಲೂಕಿನ ಜನತೆಗೆ ಕಳೆದ 15 ವರ್ಷಗಳಿಂದ ಪ್ರಭು ಚೌಹಾಣ್ ಅವರು ಮೋಸ ಮಾಡುತ್ತಾ ಬಂದಿದ್ದಾರೆ. ಇಲ್ಲಿಯವರೆಗೆ ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಅವರನ್ನು ತಾಲೂಕಿನ ಜನತೆ ಸೋಲಿಸಿ ಪ್ರಭು ಚೌಹಾಣ್ ಮುಕ್ತ ಔರಾದ ಮಾಡಬೇಕು ಎಂದು ಜೆಡಿಎಸ್ ಅಭ್ಯರ್ಥಿ ಜೈಸಿಂಗ್ ರಾಠೋಡ್ ಹೇಳಿದರು.

ಪಟ್ಟಣದ ಗೃಹ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಲೂಕಿನ ಯುವ ಸಮುದಾಯದವರಿಗೆ ಯಾವುದೇ ಕೆಲಸವಿಲ್ಲದೆ ಹೈರಾಣಗಿದ್ದಾರೆ. ಯಾವುದೇ ಒಂದು ಕಂಪನಿ ತರಲು ಇವರ ಕೈಲಾಗಲಿಲ್ಲ. ಬೇಸಿಗೆ ಬಂದರೆ ಸಾಕು ತಾಲೂಕಿನ ಜನ ನೀರಿಗಾಗಿ ಪರದಾಡುತ್ತಿದ್ದಾರೆ ಎಂದು ಆರೋಪ ಮಾಡಿದ್ದಾರೆ.

ಕಾಂಗ್ರೆಸ್ ಪಕ್ಷವನ್ನು ಜನ  ರಸ್ಕಾರ ಮಾಡಿದ್ದಾರೆ. ತಾಲೂಕಿನಲ್ಲಿ ಭೀಮ್ ಸೇನರಾಮ್ ಸಿಂಧೆ ಕೊಡುಗೆ ಏನಿದೆ ಎಂದು ಪ್ರಶ್ನೆ ಮಾಡಿದರು. ನಾನು ಕಳೆದ ಮೂರು ವರ್ಷಗಳಿಂದ ಸಾಮಾಜಿಕ ಸೇವೆ ಮಾಡುತ್ತಿದ್ದೇನೆ, ನೀರಿನ ಸಮಸ್ಯೆ ಇದ್ದ ಕಡೆ ಟ್ಯಾಂಕರ್ ವ್ಯವಸ್ಥೆ ಮಾಡಿಸಿದ್ದೇವೆ, ರೈತ ಪರ ಹೋರಾಟಗಳನ್ನು ಮಾಡಿದ್ದೇನೆ ಆದ್ದರಿಂದ ಕ್ಷೇತ್ರದ ಜನ ನನಗೆ ಆಶೀರ್ವಾದ ಮಾಡುತ್ತಾರೆ ಎಂಬ ವಿಶ್ವಾಸ ಇದೆ. ಚುನಾವಣೆಯಲ್ಲಿ ಸುಮಾರು 20ಸಾವಿರ ಮತಗಳ ಅಂತರದಿಂದ ಗೆಲ್ಲುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮೇ ಮೊದಲ ವಾರದಲ್ಲಿ ಎಚ್.ಡಿ.ಕುಮಾರ ಸ್ವಾಮಿ ಹಾಗೂ ಜೆಡಿಎಸ್ ನಾಯಕರುಗಳನ್ನು ಕರೆಸಿ ಸುಮಾರು 50000 ಜನರನ್ನು ಸೇರಿಸಿ ಬೃಹತ್ ಮಟ್ಟದ ಬಹಿರಂಗ ಕಾರ್ಯಕ್ರಮ ಮಾಡುತ್ತೇವೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಜೆಡಿಎಸ್ ತಾಲೂಕು ಅಧ್ಯಕ್ಷ ತಾನಾಜಿ ತೋರಣೇಕರ್, ಬಾಲಾ ಸಾಹೇಬ್ ರಾಠೋಡ್, ಕಿಶನ್ ಪಾಟೀಲ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Umesha HS

Recent Posts

ಅಧಿಕಾರಿಗಳಿಂದಲೇ ಕಾಂಗ್ರೆಸ್ ಪಕ್ಷಕ್ಕೆ ಮತದಾನದ ಆರೋಪ: ಸ್ಥಳಕ್ಕೆ ಉಮೇಶ ಜಾಧವ್ ಭೇಟಿ

ಇಲ್ಲಿನ ಕಲಬುರಗಿ ಉತ್ತರ ಮತಕ್ಷೇತ್ರದ ನ್ಯೂ ರಾಘವೇಂದ್ರ ಕಾಲೋನಿಯ ಬೂತ್ ಸಂಖ್ಯೆ 181 ರಲ್ಲಿ ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ…

5 hours ago

ಅತನೂರ ಗ್ರಾಮದಲ್ಲಿ ಸರ್ವಧರ್ಮಗಳ ಆರಾಧ್ಯದೈವ ನಂದಿ ಬಸವನ ಜಾತ್ರೆಯ ಸಡಗರ

ಅಫಜಲಪುರ ತಾಲೂಕಿನ ಅತನೂರ ಗ್ರಾಮದಲ್ಲಿ ಗ್ರಾಮದೇವ ನಂದಿ ಬಸವೇಶ್ವರ ಜಾತ್ರೆಯು ಸಡಗರದಿಂದ ನಡೆಯಲಿದೆ ಎಂದು ದೇವಸ್ಥಾನ ಮಂಡಳಿಯ ಸದಸ್ಯರು ತಿಳಿಸಿದರು.

5 hours ago

ಪ್ರೀತಿಸಿ ಮದುವೆಯಾದ ಅನ್ಯಕೋಮಿನ ಜೋಡಿ: ಹಿಂದೂ ಪರ ಸಂಘಟನೆಗಳಿಂದ ಪ್ರತಿಭಟನೆ

ಮುಸ್ಲಿಂ ಯುವತಿ ಬಾದಾಮಿ ಮೂಲದ ರುಬಿನಾ ಹಾಗೂ ಹಿಂದೂ ಯುವಕ ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ‌ ಮದುವೆಯಾಗಿ ರಕ್ಷಣೆ ಕೋರಿ ಬಾಗಲಕೋಟೆ…

5 hours ago

ಮೆಲ್ಬೋರ್ನ್‌ನಲ್ಲಿ ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಹತ್ಯೆ

ಆಸ್ಟ್ರೇಲಿಯಾದ ಮೆಲ್ಬೋರ್ನ್‌ನಲ್ಲಿ  ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿದೆ.

5 hours ago

ಮಾದಪ್ಪನ ಸನ್ನಿಧಿಯಲ್ಲಿ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಸೋಮವಾರ ಮಾದಪ್ಪನಿಗೆ ಎಣ್ಣೆ ಮಜ್ಜನ ಸೇವೆ ನಡೆಯಿತು. ಎಣ್ಣೆ ಮಜ್ಜನ ಸೇವೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮಾದಪ್ಪನ ದರ್ಶನ ಪಡೆದು…

6 hours ago

ಅಕ್ಷಯ ತೃತೀಯದಂದು ಬಾಲ್ಯವಿವಾಹ ನಡೆಯದಂತೆ ಕ್ರಮ

ಮೇ 10 ರಂದುಬಸವ ಜಯಂತಿ ಹಾಗೂ ಅಕ್ಷಯ ತೃತೀಯ ದಿನವಾದ ಕಾರಣ ಈ ಸಂದರ್ಭದಲ್ಲಿ ವೈಯಕ್ತಿಕ ವಿವಾಹಗಳು ಹಾಗೂ ಸಾಮೂಹಿಕ…

6 hours ago