News Karnataka Kannada
Saturday, April 27 2024
ಬೀದರ್

ದಬ್ಬಾಳಿಕೆ, ದೌರ್ಜನ್ಯ ಖಂಡಿಸಿ ಪ್ರತಿಭಟನೆ

ಜಿಲ್ಲೆಯಲ್ಲಿ ದಲಿತರ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಸಲಾಗುತ್ತಿದೆ ಎಂದು ಆರೋಪಿಸಿ ಶೋಷಿತರ ಸಂರಕ್ಷಣಾ ಸಮಿತಿ ಜಿಲ್ಲಾ ಘಟಕದ ನೇತೃತ್ವದಲ್ಲಿ ನೂರಾರು ಜನ ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.
Photo Credit : NewsKarnataka

ಬೀದರ್ : ಜಿಲ್ಲೆಯಲ್ಲಿ ದಲಿತರ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಸಲಾಗುತ್ತಿದೆ ಎಂದು ಆರೋಪಿಸಿ ಶೋಷಿತರ ಸಂರಕ್ಷಣಾ ಸಮಿತಿ ಜಿಲ್ಲಾ ಘಟಕದ ನೇತೃತ್ವದಲ್ಲಿ ನೂರಾರು ಜನ ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ನಗರದ ಡಾ.ಬಿ.ಆರ್‌. ಅಂಬೇಡ್ಕರ್‌ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ರ್‍ಯಾಲಿ ನಡೆಸಿದರು.

ಕೆಲಹೊತ್ತು ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಕುಳಿತು ಘೋಷಣೆಗಳನ್ನು ಕೂಗಿದರು. ಆನಂತರ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೆಸರಿಗೆ ಬರೆದ ಮನವಿ ಪತ್ರವನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಅವರಿಗೆ ಸಲ್ಲಿಸಿದರು.

‘ಜಿಲ್ಲೆಯಲ್ಲಿ ದಲಿತರು, ಶೋಷಿತರು, ಅಲ್ಪಸಂಖ್ಯಾತರ ಮೇಲೆ ನಿರಂತರವಾಗಿ ಅತ್ಯಾಚಾರ, ದಬ್ಬಾಳಿಕೆ, ದೌರ್ಜನ್ಯ ನಡೆಸಲಾಗುತ್ತಿದೆ. ಡಾ.ಬಿ.ಆರ್‌. ಅಂಬೇಡ್ಕರ್‌ ಅವರ ಮೂರ್ತಿಗೆ ಅಪಮಾನ ಮಾಡುವ ಕುಕೃತ್ಯಗಳು ನಡೆಯುತ್ತಿವೆ. ಬಾಬಾ ಸಾಹೇಬರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಇಲ್ಲಸಲ್ಲದನ್ನು ಬರೆದು ಪೋಸ್ಟ್‌ ಮಾಡಲಾಗುತ್ತಿದೆ. ಇನ್ನೊಂದೆಡೆ ಸಂಸದ ಅನಂತಕುಮಾರ ಹೆಗಡೆ ಪುನಃ ಪುನಃ ಸಂವಿಧಾನದ ಬಗ್ಗೆ ಹಗುರವಾಗಿ ಮಾತನಾಡುತ್ತಿದ್ಧಾರೆ. ಇಷ್ಟೆಲ್ಲ ಆಗುತ್ತಿದ್ದರೂ ಸರ್ಕಾರ ಇಂತಹವರ ವಿರುದ್ಧ ಕ್ರಮ ಕೈಗೊಳ್ಳಲು ಹಿಂದೇಟು ಹಾಕುತ್ತಿರುವುದು ವಿಷಾದಕರ’ ಎಂದರು.

ಯಾವುದೇ ಜಿಲ್ಲೆಯಲ್ಲಿ ದಲಿತರ ಮೇಲೆ ದೌರ್ಜನ್ಯಗಳು ನಡೆದರೆ ಅಲ್ಲಿನ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಲಾಗಿದೆ. ಆದರೆ, ಆದೇಶಕ್ಕಷ್ಟೇ ಸೀಮಿತವಾಗಿದೆ. ಡಿಸಿ, ಎಸ್ಪಿಯವರಿಗೆ ಜಿಲ್ಲಾ ಉಸ್ತುವಾರಿ ಸಚಿವರ ಕುಮ್ಮಕ್ಕು ಇರುವುದರಿಂದ ಇಬ್ಬರೂ ಕೈಗೊಂಬೆಗಳಾಗಿದ್ದಾರೆ’ ಎಂದು ಆರೋಪಿಸಿದರು.

ಸುಮಾರು 50ಕ್ಕೂ ಹೆಚ್ಚು ವರ್ಷಗಳಿಂದ ದಲಿತರು ಕೃಷಿ ನೆಚ್ಚಿಕೊಂಡು ಬದುಕು ನಡೆಸುತ್ತಿದ್ದರು. ಅನ್ಯಾಯವಾಗಿ ಅರಣ್ಯ ಅಧಿಕಾರಿಗಳು ಬಡವರ ಜಮೀನು ಕಸಿದುಕೊಂಡಿದ್ದಾರೆ. ರೈತರ ಹೆಸರಿನಲ್ಲಿದ್ದ ಪಹಣಿ, ಮ್ಯುಟೇಶನ್‌, ‘ಸಿ’ ಫಾರಂ ರದ್ದುಪಡಿಸಿದ್ದಾರೆ. ಇನ್ನೊಂದೆಡೆ ಬಗರ್‌ ಹುಕುಂ ಸಾಗುವಳಿ ಜಮೀನಲ್ಲಿ ಜಾತಿ ಬಲಾಢ್ಯರು ಉಳುಮೆ ಮಾಡುತ್ತಿದ್ಧಾರೆ. ಅವರ ವಿರುದ್ಧ ಅರಣ್ಯ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪ ಮಾಡಿದರು.ಅಧಿಕಾರಿಗಳು (ಬಿಡಿಒ) ದಂಪತಿಗೆ ನಿಗದಿಪಡಿಸಿದ ಪೀಠೋಪಕರಣಗಳು ಮತ್ತು ಹಣವನ್ನು ಹಿಂಪಡೆದಿದ್ದಾರೆ

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು