News Karnataka Kannada
Friday, May 03 2024
ಬೀದರ್

ನೇಹಾ ಹತ್ಯೆ ಖಂಡಿಸಿ ಎನ್‌ಎಸ್‌ಯುಐ ಕಾಂಗ್ರೆಸ್ ವಿದ್ಯಾರ್ಥಿ ಘಟಕದಿಂದ ಪ್ರತಿಭಟನೆ

ವಿದ್ಯಾರ್ಥಿನಿ ನೇಹಾ ಹಿರೇಮಠ ಬರ್ಬರ್ ಹತ್ಯೆ ಖಂಡಿಸಿ ಬೀದರ ತಹಸೀಲ್ದಾರ್ ಕಚೇರಿ ಮುಂಭಾಗದಲ್ಲಿ ನ್ಯಾಷನಲ್ ಸ್ಟೂಡೆಂಟ್ಸ್ ಯೂನಿಯನ್ ಆಫ್ ಇಂಡಿಯಾ (NSUI) ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನ ವಿದ್ಯಾರ್ಥಿ ಘಟಕದಿಂದ ಪ್ರತಿಭಟನೆ ನಡೆದಿದೆ.
Photo Credit : NewsKarnataka

ಬೀದರ್:‌ ವಿದ್ಯಾರ್ಥಿನಿ ನೇಹಾ ಹಿರೇಮಠ ಬರ್ಬರ್ ಹತ್ಯೆ ಖಂಡಿಸಿ ಬೀದರ ತಹಸೀಲ್ದಾರ್ ಕಚೇರಿ ಮುಂಭಾಗದಲ್ಲಿ ನ್ಯಾಷನಲ್ ಸ್ಟೂಡೆಂಟ್ಸ್ ಯೂನಿಯನ್ ಆಫ್ಭಾ ಇಂಡಿಯಾ (NSUI) ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನ ವಿದ್ಯಾರ್ಥಿ ಘಟಕದಿಂದ ಪ್ರತಿಭಟನೆ ನಡೆದಿದೆ.

ಪ್ರತಿಭಟನೆಯಲ್ಲಿ ನ್ಯಾಷನಲ್ ಸ್ಟೂಡೆಂಟ್ಸ್ ಯೂನಿಯನ್ ಆಫ್ ಇಂಡಿಯಾ ವಿದ್ಯಾರ್ಥಿಗಳ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಬೀದರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಾಗರ ಖಂಡ್ರೆ ಭಾಗಿಯಾಗಿ ಮೇಣದ ಬತ್ತಿ ಹಚ್ಚಿ ಮೌನಾಚರಣೆ ಮಾಡಿದರು.

ಮೆಣದ ಬತ್ತಿ ಹಚ್ಚಿ ಮೃತ ನೇಹಾ ಅವರಿಗೆ ಕಾಂಗ್ರೆಸ್ ಅಭ್ಯರ್ಥಿ ಸಾಗರ ಖಂಡ್ರೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದರು. ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಖಂಡನೀಯ ಆರೋಪಿ ವಿರುದ್ದ ಸರಕಾರ ತಕ್ಷಣ ಕಠಿಣ ಕ್ರಮ ಕೈಗೊಳ್ಳಬೇಕು.

ಕಾಲೇಜುಗಳಲ್ಲಿ ಯುಜಿಸಿ ಮಾರ್ಗಸೂಚಿ ಅನ್ವಯ ವಿದ್ಯಾರ್ಥಿಗಳಿಗೆ ರಕ್ಷಣೆ ಒದಗಿಸಬೇಕು ಎಂದು ಒತ್ತಾಯಿಸಿ ತಹಸೀಲ್ದಾರ್ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಕೈ ಅಭ್ಯರ್ಥಿ ಸಾಗರ ಖಂಡ್ರೆ ಮನವಿ ಪತ್ರ ಸಲ್ಲಿಸಿದರು. ಇನ್ನು ನೂರಾರು ವಿದ್ಯಾರ್ಥಿ/ವಿದ್ಯಾರ್ಥಿನಿಯರು ಪ್ರತಿಭಟನೆಯಲ್ಲಿ ಭಾಗವಹಿಸಿ ಸಾಗರ ಖಂಡ್ರೆಗೆ ಸಾತ್ ನೀಡಿದರು. ಈ ಸಂದರ್ಭದಲ್ಲಿ ಎನ್ ಎಸ್ ಯು ಐ ಜಿಲ್ಲಾ ಘಟಕದ ಪದಾಧಿಕಾರಿಗಳು, ವಿದ್ಯಾರ್ಥಿಗಳ ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು