News Karnataka Kannada
Wednesday, May 01 2024
ಬೀದರ್

ಮೋದಿ ಸಂವಿಧಾನ ಬದಲಿಸಲ್ಲ, ಅದನ್ನು ಬಲಪಡಿಸುತ್ತಾರೆ: ಕೇಂದ್ರ ಸಚಿವ ರಾಮದಾಸ ಅಠವಾಳೆ

'ಪ್ರಧಾನಿ ನರೇಂದ್ರ ಮೋದಿಯವರು ಸಂವಿಧಾನ ಬದಲಿಸಲ್ಲ, ಬದಲಾಗಿ ಅದನ್ನು ಬಲಪಡಿಸುತ್ತಾರೆ' ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆಯ ರಾಜ್ಯ ಸಚಿವ ರಾಮದಾಸ ಅಠವಾಳೆ ತಿಳಿಸಿದರು.
Photo Credit : News Kannada

ಬೀದರ್: ‘ಪ್ರಧಾನಿ ನರೇಂದ್ರ ಮೋದಿಯವರು ಸಂವಿಧಾನ ಬದಲಿಸಲ್ಲ, ಬದಲಾಗಿ ಅದನ್ನು ಬಲಪಡಿಸುತ್ತಾರೆ’ ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆಯ ರಾಜ್ಯ ಸಚಿವ ರಾಮದಾಸ ಅಠವಾಳೆ ತಿಳಿಸಿದರು.

ನಗರದಲ್ಲಿ ಸೋಮವಾರ ಸಂಜೆ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಸಂವಿಧಾನ ಬದಲಿಸುವುದು ಯಾರಿಂದಲೂ ಆಗದು.

ಆ ಅಧಿಕಾರ ಯಾರಿಗೂ ಇಲ್ಲ. ಆದರೆ, ಹೊಸ ಕಾನೂನುಗಳನ್ನು ಮಾಡಬಹುದು. ಮಹಿಳಾ ಮೀಸಲಾತಿ, ಆರ್ಥಿಕವಾಗಿ ದುರ್ಬಲವಾದವರಿಗೆ ಶೇ 10ರಷ್ಟು ಮೀಸಲಾತಿಯಂತಹ ಕಾನೂನುಗಳನ್ನು ತರಬಹುದು’ ಎಂದರು.

‘ಡಾ.ಬಿ.ಆರ್‌.ಅಂಬೇಡ್ಕರ್‌ ಅವರು ದೇಶಕ್ಕೆ ಅತ್ಯುತ್ತಮವಾದ ಸಂವಿಧಾನ ಕೊಟ್ಟಿದ್ದಾರೆ. ಅದನ್ನು ಬದಲಿಸುವ ಕೆಲಸ ನಡೆಯುತ್ತಿದೆ ಎಂದು ಕಾಂಗ್ರೆಸ್‌ನವರು ಅಪಪ್ರಚಾರ ಮಾಡುತ್ತಿದ್ದಾರೆ.ಆದರೆ, ಮೋದಿಯವರು ಡಾ.ಅಂಬೇಡ್ಕರ್‌ ಅವರ ಆಶಯಗಳನ್ನು ಜಾರಿಗೆ ತರಲು ಶ್ರಮಿಸುತ್ತಿದ್ದಾರೆ’ ಎಂದು ಹೇಳಿದರು.

‘ರಿಪಬ್ಲಿಕನ್‌ ಪಾರ್ಟಿ ಆಫ್‌ ಇಂಡಿಯಾ ಯಾವುದೇ ಜಾತಿಗೆ ಸೀಮಿತವಾಗಿಲ್ಲ. ಇದರಲ್ಲಿ ಎಲ್ಲ ಧರ್ಮೀಯರು ಇದ್ದಾರೆ. ಎಲ್ಲೆಡೆ ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ಕೊಡಲಾಗುತ್ತಿದೆ’ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು