ಬೀದರ್: ‘ನಗರದಲ್ಲಿ ಅಪ್ರಾಪ್ತ ವಯಸ್ಸಿನ ಮಕ್ಕಳು ದ್ವಿಚಕ್ರ ವಾಹನಗಳನ್ನು ಓಡಿಸುತ್ತಿರುವುದು ಕಂಡು ಬಂದಿದ್ದು, ಪೋಷಕರು ಅಥವಾ ಮಾಲೀಕರು ಅವರಿಗೆ ವಾಹನಗಳನ್ನು ಕೊಟ್ಟರೆ ₹25 ಸಾವಿರ ದಂಡ ಹಾಗೂ ಮೂರು ತಿಂಗಳು ಸಾಧಾರಣ ಜೈಲು ಶಿಕ್ಷೆಗೆ ಗುರಿಪಡಿಸಲಾಗುವುದು’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್.ತಿಳಿಸಿದ್ದಾರೆ.
ಸೆಪ್ಟೆಂಬರ್ 1ರಿಂದ ವಿಶೇಷ ಕಾರ್ಯಾಚರಣೆ ಆರಂಭಿಸಲಾಗುವುದು. ಯಾರೇ ಆಗಿರಲಿ ಬೈಕ್ಗಳನ್ನು ಅಪ್ರಾಪ್ತ ವಯಸ್ಸಿನವರಿಗೆ ಕೊಟ್ಟರೆ, ಅಂತಹವರು ಪೊಲೀಸರ ಕೈಗೆ ಸಿಕ್ಕಿಬಿದ್ದರೆ ಮೋಟಾರ್ ವಾಹನ ಕಾಯ್ದೆ ಅಡಿಯಲ್ಲಿ ಕ್ರಮ ಜರುಗಿಸಲಾಗುವುದು ಎಂದು ಬುಧವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.