Categories: ಬೀದರ್

ಬೀದರ್‌ ಅಭಿವೃದ್ಧಿಗಾಗಿ ಕಾಂಗ್ರೆಸ್‌ಗೆ ಮತ ಚಲಾಯಿಸಿ : ಸಾಗರ ಖಂಡ್ರೆ

ಬೀದರ್‌:  ನಾನು ಬೀದರ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ. ನನ್ನ ಮೇಲೆ ವಿಶ್ವಾಸವಿಡಿ. ಈ ಬಾರಿ ಬೀದರ ಅಭಿವೃದ್ಧಿಗಾಗಿ ಕಾಂಗ್ರೆಸ್‌ಗೆ ಮತ ಚಲಾಯಿಸಿ ಎಂದು ಬೀದರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಾಗರ ಖಂಡ್ರೆ ಹೇಳಿದರು. ತಾಲೂಕಿನ ಬೆಳಕುಣಿ (ಚೌ), ಹೆಡಗಾಪೂರ, ಸಂತಪೂರ, ಶೆಂಬೆಳ್ಳಿ, ಲಾಧಾ, ಧೂಪತಮಾಹಾಗಾಂವ, ಕೌಠಾ (ಬಿ) ಗ್ರಾಮದಲ್ಲಿ ಮತಯಾಚನೆ ಮಾಡುವ ಮೂಲಕ ಮಾತನಾಡಿದರು. ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾ ಅವರು ಬೀದರ ಜಿಲ್ಲೆಗೆ ಯಾವುದೇ ಅಭಿವೃದ್ಧಿ ಕಾರ್ಯ ಮಾಡಿಲ್ಲ. ಅವರ ಸಾಧನೆ ಶೂನ್ಯವಾಗಿದೆ. ಅವರನ್ನು ಜನತೆ ತಿರಸ್ಕರಿಸಲು ಕಂಕಣಬದ್ಧರಾಗಿದ್ದಾರೆ ಎಂದು ಖೂಬಾ ವಿರುದ್ಧ ವಾಗ್ದಾಳಿ ನಡೆಸಿದರು.

ಎರಡು ಬಾರಿ ಸಂಸದರಾಗಿ, ಕೇಂದ್ರ ಸಚಿವರಾಗಿ ಯಾವುದೇ ಅಭಿವೃದ್ಧಿಗೊಳಿಸಿಲ್ಲ. ಶಿಕ್ಷಕರೊಬ್ಬರು ರೈತರಿಗೆ ಗೊಬ್ಬರ ಕೇಳಿದರೇ ಸಸ್ಪೆಂಡ್ ಮಾಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಯ ಗೆಲುವು ಖಚಿತವಾಗಿರುವುದರಿಂದ ಅವರಲ್ಲಿ ನಡುಕ ಹುಟ್ಟಿದೆ ಎಂದರು. ಭಗವಂತ ಖೂಬಾ ಅವರಿಗೆ ಅಧಿಕಾರದ ಮದ ಏರಿದೆ. ಆದ್ದರಿಂದ ಚುನಾವಣೆಯಲ್ಲಿ ಮತದಾರರು ತಕ್ಕ ಪಾಠಸಲಿದ್ದಾರೆ. ಖೂಬಾ ನಡೆಯಿಂದ ಸ್ವಪಕ್ಷದ ಶಾಸಕರೇ ವಿರೋಧ ಮಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

ನಮ್ಮ ಕಾಂಗ್ರೆಸ್ ಸರಕಾರದ ಪಂಚ ಗ್ಯಾರಂಟಿಗಳು ಬಡವರಿಗೆ ನೆರವಾಗುತ್ತಿವೆ. ಕಾರ್ಯಕರ್ತರು ಹುಮ್ಮಸ್ಸಿನಿಂದ ಕಾಂಗ್ರೆಸ್ ಯೋಜನೆಗಳ ಬಗ್ಗೆ ಜನಜಾಗೃತಿ ಮೂಡಿಸಬೇಕು ಎಂದರು.
ಪ್ರಮುಖರಾದ ಡಾ. ಭೀಮಸೇನರಾವ ಶಿಂಧೆ, ಗಂಗಾಧರ ಮಜಿಗೆ, ಮಲ್ಲಿಕಾರ್ಜುನ ಪಾಟೀಲ್, ಹಣಮಂತರಾವ ಚವ್ಹಾಣ, ರಾಜಕುಮಾರ ಹಲಬರ್ಗೆ, ಸುಧಾಕಾರ ಕೊಳ್ಳುರ್, ಎಂ.ಡಿ ನಯೂಮ್, ಕರಬಸು, ದೇವಿದಾಸ, ಮಹೇಶ, ರವಿ ಮಾಳಗೆ, ಖದೀರ್, ಪಾಂಡು ರಡ್ಡಿ, ಸೈಯದ್ ಶರಿಫೋದ್ಧಿನ್, ಧೋಂಡಿಬಾ, ಶೇಷರಾವ, ಭೀಮರಾವ ಶೆಟಕಾರ ಸೇರಿದಂತೆ ನೂರಾರು ಜನ ಕಾರ್ಯಕರ್ತರು ಮತಯಾಚನೆಯಲ್ಲಿ ಪಾಲ್ಗೊಂಡರು.

ಮಳೆಯಲ್ಲೂ ಬಿರುಸಿನ ಪ್ರಚಾರ
ಸುರಿಯುತ್ತಿರುವ ಮಳೆಯೂ ಲೆಕ್ಕಿಸದೇ ಕಾಂಗ್ರೆಸ್ ಅಭ್ಯರ್ಥಿ ಸಾಗರ ಖಂಡ್ರೆ ಔರಾದ್ ತಾಲೂಕಿನಲ್ಲಿ ಶನಿವಾರ ಬಿರುಸಿನ ಪ್ರಚಾರ ಮಾಡಿದರು. ಜನರ ಸಮಸ್ಯೆ ಆಲಿಸುವಲ್ಲಿ ಖೂಬಾ ವಿಫಲರಾಗಿದ್ದಾರೆ. ೨ ಸಲ ಮೋದಿ ಹೆಸರಿನ ಮೇಲೆ ಗೆಲುವು ಸಾಧಿಸಿದ ಭಗವಂತ ಖೂಬಾ ಜನರಿಗೆ ಭೇಟಿಯಾಗಿಲ್ಲ. ಈ ಬಾರಿಯೂ ಜನರಿಗೆ ಭೇಟಿ ಮಾಡುವ ಅವಶ್ಯಕತೆಯಿಲ್ಲ. ಕೆಲಸ ಮಾಡುವ ಅಗತ್ಯವೂ ಇಲ್ಲ. ಮತ್ತೆ ಪ್ರಧಾನಿ ನರೇಂದ್ರ ಮೋದಿ ಹೆಸರಿನ ಮೇಲೆ ಗೆಲುವು ಸಾಧಿಸುತ್ತೇನೆ ಎಂಬ ಕನಸು ಕಾಣುತ್ತಿದ್ದಾರೆ ಎಂದು ಕುಟುಕಿದರು.

ಬೀದರನಲ್ಲಿ ಐಟಿ ಕಂಪನಿ ತರುವೆ : ಖಂಡ್ರೆ
ನಾನು ಕಾನೂನು ಪದವಿ ಪಡೆದು ಸುಪ್ರಿಂ ಕೋರ್ಟ್ನಲ್ಲಿ ಕೆಲಸ ಮಾಡಿ ಬಂದಿದ್ದೇನೆ. ನನಗೆ ಕಾನೂನು ಜ್ಞಾನವಿದೆ. ಇಲ್ಲಿಯ ಯುವಕರಿಗೆ ಉದ್ಯೋಗವಿಲ್ಲ. ಗೆಲುವು ಸಾಧಿಸಿದ ಬಳಿಕ ಐಟಿ ಕಂಪನಿ, ಕಾರಖಾನೆಗಳು ತಂದು ನಿರುದ್ಯೋಗ ಯುವಕರಿಗೆ ಕೆಲಸ ಕೊಡುವ ಪ್ರಯತ್ನ ಮಾಡುತ್ತೇನೆ ಎಂದು ಅಭ್ಯರ್ಥಿ ಸಾಗರ ಖಂಡ್ರೆ ಹೇಳಿದರು.

ನನಗೆ ಈ ಬಾರಿ ಬೆಂಬಲಿಸಿ ದೆಹೆಲಿಗೆ ಕಳುಹಿಸಿದರೇ ದಿನದ ೨೪ ಗಂಟೆಯೂ ಜನ ಸೇವೆ ಮಾಡುತ್ತೇನೆ ಎಂದು ಭರವಸೆ ನೀಡಿದರು. ಔರಾದ್ ತಾಲೂಕಿನಲ್ಲಿ ನೀರಿನ ಸಮಸ್ಯೆ ಬಗೆಹರಿಸಲಾಗುತ್ತದೆ. ರೈತರು ವಿಮೆ ಪಾವತಿ ಮಾಡಿದರೂ ಹಣ ಬರುತ್ತಿಲ್ಲ. ಅದನ್ನು ಸಂಸತ್ತಿನಲ್ಲಿ ಧ್ವನಿ ಎತ್ತುವ ಮೂಲಕ ರೈತರಿಗೆ ವಿಮೆ ಹಣ ಸಿಗುವಂತೆ ಮಾಡುತ್ತೇನೆ ಎಂದು ವಿಶ್ವಾಸ ನೀಡಿದ

 

Nisarga K

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

5 hours ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

5 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

5 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

6 hours ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

6 hours ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

6 hours ago