News Karnataka Kannada
Sunday, May 05 2024
ಬೀದರ್

ಫೆ.13ರಿಂದ ಸ್ವಚ್ಛತಾ ಕಾರ್ಮಿಕರಿಂದ ಕೆಲಸ ಬಹಿಷ್ಕಾರ

'ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರಿಗೆ ವೇತನ ನೇರ ಪಾವತಿಗೆ ಆಗ್ರಹಿಸಿ ಫೆ.13ರಿಂದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಸಲು ನಿರ್ಧರಿಸಲಾಗಿದೆ' ಎಂದು ಕಲ್ಯಾಣ ಕರ್ನಾಟಕ ಗುತ್ತಿಗೆ, ಹೊರಗುತ್ತಿಗೆ ನೌಕರರ ಸಂಘದ ಅಧ್ಯಕ್ಷ ಮಾರುತಿ ಬಿ.ಕಂಟೆ ತಿಳಿಸಿದರು.
Photo Credit : News Kannada

ಬೀದರ್‌: ‘ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರಿಗೆ ವೇತನ ನೇರ ಪಾವತಿಗೆ ಆಗ್ರಹಿಸಿ ಫೆ.13ರಿಂದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಸಲು ನಿರ್ಧರಿಸಲಾಗಿದೆ’ ಎಂದು ಕಲ್ಯಾಣ ಕರ್ನಾಟಕ ಗುತ್ತಿಗೆ, ಹೊರಗುತ್ತಿಗೆ ನೌಕರರ ಸಂಘದ ಅಧ್ಯಕ್ಷ ಮಾರುತಿ ಬಿ.ಕಂಟೆ ತಿಳಿಸಿದರು.

ಫೆ.13ರಂದು ಕೆಲಸ ಬಹಿಷ್ಕರಿಸಿ ಧರಣಿ ಆರಂಭಿಸಲಾಗುವುದು. ಸರ್ಕಾರ ಬೇಡಿಕೆ ಈಡೇರಿಸುವವರೆಗೆ ಸತ್ಯಾಗ್ರಹ ಮುಂದುವರೆಸಲಾಗುವುದು ಎಂದು ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ವಿವರಿಸಿದರು.

ಘನತ್ಯಾಜ್ಯ ನಿರ್ವಹಣೆಯ ಕೆಲಸ ಮಾಡುವ ವಾಹನ ಚಾಲಕರು, ನೈರ್ಮಲ್ಯ ಸೂಪರ್‌ವೈಸರ್‌ಗಳು, ಲೋಡರ್ಸ್‌, ಕ್ಲೀನರ್ಸ್‌, ಅಟೆಂಡರ್‌, ಆಪರೇಟರ್‌, ನೀರು ಸರಬರಾಜು ಸಹಾಯಕರು, ಬೀದಿ ದೀಪಗಳ ನಿರ್ವಹಣೆ ಮಾಡುವವರ ವೇತನ ನೇರ ಪಾವತಿಸಬೇಕೆಂದು ಹಲವು ವರ್ಷಗಳಿಂದ ಆಗ್ರಹಿಸುತ್ತ ಬರಲಾಗಿದೆ. ಆದರೆ, ಕಿವಿಗೊಟ್ಟಿಲ್ಲ. ಈಗ ಅನಿವಾರ್ಯವಾಗಿ ಧರಣಿ ನಡೆಸಬೇಕಾದ ಪರಿಸ್ಥಿತಿ ಬಂದಿದೆ ಎಂದರು.

ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಜಿಲ್ಲೆಯಲ್ಲಿ 600 ಜನ ಕೆಲಸ ನಿರ್ವಹಿಸುತ್ತಿದ್ದಾರೆ. ಬೀದರ್‌ ನಗರವೊಂದರಲ್ಲೇ 163 ಕಾರ್ಮಿಕರಿದ್ದಾರೆ. ನಸುಕಿನ ಜಾವ 4 ಗಂಟೆಗೆ ಎದ್ದು ನಗರವನ್ನು ಸ್ವಚ್ಛಗೊಳಿಸುತ್ತೇವೆ. ಊರಿನ ಹೊಲಸು ವಿಲೇವಾರಿ ಮಾಡುತ್ತೇವೆ. ಆದರೆ, ನಮ್ಮ ಸಮಸ್ಯೆಗಳಿಗೆ ಯಾರೂ ಸ್ಪಂದಿಸುತ್ತಿಲ್ಲ ಎಂದು ಗೋಳು ತೋಡಿಕೊಂಡರು.

ಮುಖಂಡ ಸಿದ್ರಾಮ ಪಾಟೀಲ ಮಾತನಾಡಿ, ಚುನಾವಣೆಗೂ ಮುನ್ನ ಕಾಂಗ್ರೆಸ್‌ ಪಕ್ಷ ಭರವಸೆ ನೀಡಿತ್ತು. ಈಗಾಗಲೇ ಕಾಯಂ ಪೌರ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲಾಗಿದೆ. ಹೊರಗುತ್ತಿಗೆ ನೌಕರರ ಬೇಡಿಕೆ ಈಡೇರಿಸಬೇಕು. ಕೊಟ್ಟ ಮಾತು ಉಳಿಸಿಕೊಳ್ಳಬೇಕು ಎಂದು ಆಗ್ರಹಿಸಿದರು.

ಮುಖಂಡರಾದ ರಮೇಶ ಪಾಸ್ವಾನ್‌, ಯೇಸುದಾಸ್‌, ರಾಜಕುಮಾರ ಹಾಜರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು