Categories: ಬೀದರ್

ಫೆ.13ರಿಂದ ಸ್ವಚ್ಛತಾ ಕಾರ್ಮಿಕರಿಂದ ಕೆಲಸ ಬಹಿಷ್ಕಾರ

ಬೀದರ್‌: ‘ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರಿಗೆ ವೇತನ ನೇರ ಪಾವತಿಗೆ ಆಗ್ರಹಿಸಿ ಫೆ.13ರಿಂದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಸಲು ನಿರ್ಧರಿಸಲಾಗಿದೆ’ ಎಂದು ಕಲ್ಯಾಣ ಕರ್ನಾಟಕ ಗುತ್ತಿಗೆ, ಹೊರಗುತ್ತಿಗೆ ನೌಕರರ ಸಂಘದ ಅಧ್ಯಕ್ಷ ಮಾರುತಿ ಬಿ.ಕಂಟೆ ತಿಳಿಸಿದರು.

ಫೆ.13ರಂದು ಕೆಲಸ ಬಹಿಷ್ಕರಿಸಿ ಧರಣಿ ಆರಂಭಿಸಲಾಗುವುದು. ಸರ್ಕಾರ ಬೇಡಿಕೆ ಈಡೇರಿಸುವವರೆಗೆ ಸತ್ಯಾಗ್ರಹ ಮುಂದುವರೆಸಲಾಗುವುದು ಎಂದು ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ವಿವರಿಸಿದರು.

ಘನತ್ಯಾಜ್ಯ ನಿರ್ವಹಣೆಯ ಕೆಲಸ ಮಾಡುವ ವಾಹನ ಚಾಲಕರು, ನೈರ್ಮಲ್ಯ ಸೂಪರ್‌ವೈಸರ್‌ಗಳು, ಲೋಡರ್ಸ್‌, ಕ್ಲೀನರ್ಸ್‌, ಅಟೆಂಡರ್‌, ಆಪರೇಟರ್‌, ನೀರು ಸರಬರಾಜು ಸಹಾಯಕರು, ಬೀದಿ ದೀಪಗಳ ನಿರ್ವಹಣೆ ಮಾಡುವವರ ವೇತನ ನೇರ ಪಾವತಿಸಬೇಕೆಂದು ಹಲವು ವರ್ಷಗಳಿಂದ ಆಗ್ರಹಿಸುತ್ತ ಬರಲಾಗಿದೆ. ಆದರೆ, ಕಿವಿಗೊಟ್ಟಿಲ್ಲ. ಈಗ ಅನಿವಾರ್ಯವಾಗಿ ಧರಣಿ ನಡೆಸಬೇಕಾದ ಪರಿಸ್ಥಿತಿ ಬಂದಿದೆ ಎಂದರು.

ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಜಿಲ್ಲೆಯಲ್ಲಿ 600 ಜನ ಕೆಲಸ ನಿರ್ವಹಿಸುತ್ತಿದ್ದಾರೆ. ಬೀದರ್‌ ನಗರವೊಂದರಲ್ಲೇ 163 ಕಾರ್ಮಿಕರಿದ್ದಾರೆ. ನಸುಕಿನ ಜಾವ 4 ಗಂಟೆಗೆ ಎದ್ದು ನಗರವನ್ನು ಸ್ವಚ್ಛಗೊಳಿಸುತ್ತೇವೆ. ಊರಿನ ಹೊಲಸು ವಿಲೇವಾರಿ ಮಾಡುತ್ತೇವೆ. ಆದರೆ, ನಮ್ಮ ಸಮಸ್ಯೆಗಳಿಗೆ ಯಾರೂ ಸ್ಪಂದಿಸುತ್ತಿಲ್ಲ ಎಂದು ಗೋಳು ತೋಡಿಕೊಂಡರು.

ಮುಖಂಡ ಸಿದ್ರಾಮ ಪಾಟೀಲ ಮಾತನಾಡಿ, ಚುನಾವಣೆಗೂ ಮುನ್ನ ಕಾಂಗ್ರೆಸ್‌ ಪಕ್ಷ ಭರವಸೆ ನೀಡಿತ್ತು. ಈಗಾಗಲೇ ಕಾಯಂ ಪೌರ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲಾಗಿದೆ. ಹೊರಗುತ್ತಿಗೆ ನೌಕರರ ಬೇಡಿಕೆ ಈಡೇರಿಸಬೇಕು. ಕೊಟ್ಟ ಮಾತು ಉಳಿಸಿಕೊಳ್ಳಬೇಕು ಎಂದು ಆಗ್ರಹಿಸಿದರು.

ಮುಖಂಡರಾದ ರಮೇಶ ಪಾಸ್ವಾನ್‌, ಯೇಸುದಾಸ್‌, ರಾಜಕುಮಾರ ಹಾಜರಿದ್ದರು.

Ashika S

Recent Posts

ಚಾಮರಾಜನಗರದಲ್ಲಿ ಮುಂದುವರೆದ ಮಳೆ ಆರ್ಭಟ: ವಾಹನ ಸವಾರರ ಪರದಾಟ

ಗಡಿಜಿಲ್ಲೆ ವರುಣಾರ್ಭಟ ಮುಂದುವರೆದಿದ್ದು ಶನಿವಾರ ಮಧ್ಯಾಹ್ನದ ಜಿಲ್ಲಾಕೇಂದ್ರದಲ್ಲಿ ಒಂದೂವರೆ ತಾಸು ಜೋರು ಮಳೆಯಾಯಿತು.

7 mins ago

ನ್ಯೂಯಾರ್ಕ್​ಗೆ ತೆರಳಲಿದೆ ಟೀಮ್ ಇಂಡಿಯಾದ ಮೊದಲ ಬ್ಯಾಚ್ : ಯಾವಾಗ?

ಮುಂದಿನ ತಿಂಗಳು ಅಮೆರಿಕ ಮತ್ತು ವೆಸ್ಟ್​ ಇಂಡೀಸ್​ ಜಂಟಿ ಆತಿಥ್ಯದಲ್ಲಿ ನಡೆಯುವ ಟಿ20 ವಿಶ್ವಕಪ್​ಗಾಗಿ ಟೀಮ್​ ಇಂಡಿಯಾದ ಮೊದಲ ಬ್ಯಾಚ್​…

11 mins ago

ಖಾಸಗಿ ಕಾರ್ಯಕ್ರಮದಲ್ಲಿ ಸಖತ್ ಸ್ಟೆಪ್ ಹಾಕಿದ ಶಾಸಕ ಶರಣು ಸಲಗರ್‌

ಖಾಸಗಿ ಕಾರ್ಯಕ್ರಮದಲ್ಲಿ ಬಸವಕಲ್ಯಾಣ ಶಾಸಕ ಶರಣು ಸಲಗರ್‌ ಅವರು ಪತ್ನಿ ಹಾಗು ಮಕ್ಕಳೊಂದಿಗೆ ಹೆಜ್ಜೆ ಹಾಕಿದ್ದಾರೆ. ಶಾಸಕ ಶರಣು ಸಲಗರ್‌ರಿಂದ…

21 mins ago

ಸ್ವಾತಿ ಮೇಲಿನ ಹಲ್ಲೆ ಪ್ರಕರಣ: ನಿರೀಕ್ಷಣಾ ಜಾಮೀನು ಕೋರಿ ಬಿಭವ್ ಅರ್ಜಿ

ರಾಜ್ಯಸಭಾ ಸದಸ್ಯೆ ಸ್ವಾತಿ ಮಾಲಿವಾಲ್ ಮೇಲಿನ ಹಲ್ಲೆ ಆರೋಪಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ…

52 mins ago

ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು

ಇಲ್ಲಿನ ವೀರಾಪುರ ಓಣಿಯಲ್ಲಿ ಅಂಜಲಿ ಅಂಬಿಗೇರ ಹಂತಕ ಗಿರೀಶ ಉರುಫ್‌ ವಿಶ್ವ ಸಾವಂತ ವಿರುದ್ಧ ಬೆಂಡಿಗೇರಿ ಠಾಣೆಯಲ್ಲಿ ಮತ್ತೊಂದು ಪ್ರಕರನ…

2 hours ago

ʼರಾಹುಲ್ ಮತ್ತು ನಾನು ಒಟ್ಟಿಗೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದರೆ ಬಿಜೆಪಿಗೆ ಲಾಭವಾಗುತ್ತಿತ್ತುʼ

ದೇಶದ್ಯಾಂತ ಕಾಂಗ್ರೆಸ್‌ ಪಕ್ಷದ ಪರವಾಗಿ ಪ್ರಚಾರ ನಡೆಸಬೇಕೆಂಬ ಉದ್ದೇಶದಿಂದ ನಾನು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿಲ್ಲ, ರಾಹುಲ್ ಗಾಂಧಿ…

2 hours ago