Categories: ಬೀದರ್

ಜಿಲ್ಲೆಗೆ ಬಂದ ‘ದೇಶ ಉಳಿಸಿ ಸಂಕಲ್ಪ ಯಾತ್ರೆ’

ಬೀದರ್‌:  ‘ಸಂವಿಧಾನದ ಉಳಿವಿಗಾಗಿ, ಸರ್ವಜನಾಂಗದ ಶಾಂತಿಯ ತೋಟದ ರಕ್ಷಣೆಗಾಗಿ’ ಘೋಷವಾಕ್ಯದಡಿ ರಾಜ್ಯದಾದ್ಯಂತ ಕೈಗೊಂಡಿರುವ ‘ದೇಶ ಉಳಿಸಿ ಸಂಕಲ್ಪ ಯಾತ್ರೆ’ ಶನಿವಾರ ಜಿಲ್ಲೆ ತಲುಪಿತು. ರಮೇಶ ಸಂಕ್ರಾಂತಿ, ಎಮ್‌.ಆರ್‌. ಭೇರಿ, ಭೀಮಣ್ಣ ನವಲಗೇರಿ ನೇತೃತ್ವದಲ್ಲಿ ನಗರಕ್ಕೆ ಬಂದ ಯಾತ್ರೆಗೆ ಜಿಲ್ಲೆಯ ವಿವಿಧ ಸಂಘಟನೆಗಳ ಮುಖಂಡರು ಸ್ವಾಗತಿಸಿ ಬರಮಾಡಿಕೊಂಡರು.

ನಗರದ ಪ್ರಮುಖ ರಸ್ತೆಗಳಲ್ಲಿ ಜನಜಾಗೃತಿ ಯಾತ್ರೆ ನಡೆಸಲಾಯಿತು. ಆನಂತರ ಡಾ.ಬಿ.ಆರ್‌. ಅಂಬೇಡ್ಕರ್‌ ವೃತ್ತದ ಬಳಿ ಮುಖಂಡರಾದ ರಮೇಶ ಸಂಕ್ರಾಂತಿ, ಎಮ್‌.ಆರ್‌. ಭೇರಿ, ಭೀಮಣ್ಣ ನವಲಗೇರಿ ಮಾತನಾಡಿ, ಈ ದೇಶದ ಸಂವಿಧಾನ, ಪ್ರಜಾಪ್ರಭುತ್ವ ಅಪಾಯದಲ್ಲಿದೆ. ಅದನ್ನು ರಕ್ಷಿಸುವ ಹೊಣೆ ಎಲ್ಲರ ಮೇಲಿದೆ. ಸಂವಿಧಾನ ಉಳಿದರೆ ಎಲ್ಲರೂ ಸಮಾನರಾಗಿ ಬದುಕಲು ಸಾಧ್ಯ. ಅದರ ಮಹತ್ವ ತಿಳಿಸುವುದಕ್ಕಾಗಿ ಏ. 1ರಿಂದ ಬೆಂಗಳೂರಿನಿಂದ ಮೂರು ತಂಡಗಳಲ್ಲಿ ಜನಜಾಗೃತಿ ಯಾತ್ರೆ ಆರಂಭಿಸಲಾಗಿದ್ದು, ಏ.8ರಂದು ಬೆಳಗಾವಿಯಲ್ಲಿ ಸಮಾರೋಪಗೊಳ್ಳಲಿದೆ ಎಂದು ಹೇಳಿದರು.

ಈ ಯಾತ್ರೆಗೆ ಹಿರಿಯ ಸಾಹಿತಿಗಳು, ಚಿಂತಕರು, ಪ್ರಗತಿಪರರು ಸೇರಿದಂತೆ ಎಲ್ಲ ವರ್ಗದವರು ಜೊತೆಯಾಗಿದ್ದಾರೆ. ಸಂವಿಧಾನ ರಕ್ಷಣೆ ಇದರ ಮುಖ್ಯ ಉದ್ದೇಶ ಎಂದು ಹೇಳಿದರು.

ಮುಖಂಡರಾದ ಮೊಹಮ್ಮದ್‌ ನಿಜಾಮುದ್ದೀನ್‌, ಅನಿಲಕುಮಾರ ಬೇಲ್ದಾರ್‌, ಓಂಪ್ರಕಾಶ ರೊಟ್ಟೆ, ಜಗದೀಶ್ವರ ಬಿರಾದಾರ, ಬಾಬುರಾವ್‌ ಪಾಸ್ವಾನ್‌, ವಿಠ್ಠಲದಾಸ ಪ್ಯಾಗೆ, ಎಸ್‌.ಎಮ್‌. ಜನವಾಡಕರ್‌, ಸೂರ್ಯಕಾಂತ, ಸಿಸ್ಟರ್‌ ಕ್ರಿಸ್ಟಿನಾ, ಮೊಹಮ್ಮದ್‌ ಆರಿಫುದ್ದೀನ್‌, ಸಂತೋಷ ಜೋಳದಾಬಕೆ, ಮಂಜುಳಾ ಮತ್ತಿತರರು ಪಾಲ್ಗೊಂಡಿದ್ದರು.

Nisarga K

Recent Posts

ಯುಎಇ ರಾಯಲ್‌ ಮನೆತನದ ಸದಸ್ಯನ ನಿಗೂಢ ಸಾವು

ಯುನೈಟೆಡ್ ಅರಬ್ ಎಮಿರೇಟ್ಸ್‌ನ  ರಾಯಲ್ ಮನೆತನದ ಸದಸ್ಯ ಶೇಖ್ ಹಝಾ ಬಿನ್ ಸುಲ್ತಾನ್ ಬಿನ್ ಜಾಯೆದ್ ಅಲ್ ನಹ್ಯಾನ್ ನಿಗೂಢವಾಗಿ…

1 hour ago

ಬಸವ ಜಯತಿಯ ಅಂಗವಾಗಿ ಆದಿವಾಸಿ ಮಕ್ಕಳಿಗೆ ಹಣ್ಣು-ಹಂಪಲು ವಿತರಣೆ

ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…

2 hours ago

ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥ

ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ‌ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ  ನಡೆದಿದೆ.

2 hours ago

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

3 hours ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

4 hours ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

4 hours ago