Categories: ಬೀದರ್

ಬೀದರ್: ದೇವಸ್ಥಾನದಲ್ಲಿ ಶಾಲಾ ಮಕ್ಕಳಿಗೆ ಪಾಠ ಬೋಧನೆ

ಹುಮನಾಬಾದ್‌: ತಾಲ್ಲೂಕಿನ ಬೋತಗಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ಶಿಥಿಲಗೊಂಡಿರುವ ಕಾರಣ ಕಳೆದ ಎರಡು ವರ್ಷಗಳಿಂದ ಇಲ್ಲಿನ ಶಾಲಾ ಮಕ್ಕಳಿಗೆ ಪಾಠ ಪ್ರವಚನ ದೇವಸ್ಥಾನದಲ್ಲಿ ನಡೆಯುತ್ತಿದೆ.

ಶಾಲೆಯಲ್ಲಿ 1ನೇ ತರಗತಿಯಿಂದ 5ನೇ ತರಗತಿವರೆಗೆ ಕಲಿಕೆಗೆ ಅವಕಾಶವಿದ್ದು, 16 ಮಕ್ಕಳು ಪ್ರವೇಶಾತಿ ಪಡೆದಿದ್ದಾರೆ. ಶಾಲೆಯಲ್ಲಿ ಒಬ್ಬರು ಮುಖ್ಯಶಿಕ್ಷಕ ಹಾಗೂ ಒಬ್ಬರು ಸಹ ಶಿಕ್ಷಕ ಇದ್ದಾರೆ.

ಶಾಲೆಯ ಒಂದು ಕೊಠಡಿಯ ಸಿಮೆಂಟ್, ಕಬ್ಬಿಣದ ಸಲಾಕೆಗಳು ಕಳಚಿ ಬೀಳುತ್ತಿವೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಗ್ರಾಮಸ್ಥರು ಗ್ರಾಮದ ಲಕ್ಷ್ಮಿದೇವಿ ದೇವಸ್ಥಾನದಲ್ಲಿ ಮಕ್ಕಳಿಗೆ ಪಾಠ ಮಾಡುವ ವ್ಯವಸ್ಥೆ ಮಾಡಿದ್ದಾರೆ.

ಶಾಲೆಯಲ್ಲಿ ಎರಡು ಕೊಠಡಿಗಳಿದ್ದು, ಕಟ್ಟಡ ಶಿಥಿಲಗೊಂಡು ಹಲವು ವರ್ಷಗಳೇ ಕಳೆದಿವೆ. ಶಾಲೆಗೆ ಕೌಂಪೌಡ್‌ ಕೂಡ ಸಂಪೂರ್ಣ ಹಾಳಾಗಿದೆ. ಶಾಲೆಯಲ್ಲಿ ಶೌಚಾಲಯದ ವ್ಯವಸ್ಥೆಯೂ ಇಲ್ಲ.

ಗ್ರಾಮಸ್ಥರು ಮತ್ತು ಶಾಲಾಭಿವೃದ್ಧಿ ಸಮಿತಿಯಿಂದ ಶಿಕ್ಷಣ ಇಲಾಖೆಗೆ, ಜಿಲ್ಲಾಧಿಕಾರಿಗೆ ಶಾಲೆ ಕಟ್ಟಡ ದುರಸ್ತಿ ಮಾಡುವಂತೆ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಈಚೆಗೆ ಶಾಸಕರಿಗೂ ಈ ಬಗ್ಗೆ ಮನವಿ ಸಲ್ಲಿಸಲಾಗಿತ್ತು. ಆದರೆ ಪ್ರಯೋಜನವಾಗಿಲ್ಲ ಎಂಬುದು ಗ್ರಾಮಸ್ಥರ ದೂರು. ಮುಂಬರುವ ಶೈಕ್ಷಣಿಕ ಸಾಲಿನಲ್ಲಿ ಶಾಲೆಯನ್ನು ಸಂಪೂರ್ಣ ಕೆಡವಿ ನೂತನ ಕಟ್ಟಡ ನಿರ್ಮಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಮನೆ ಮುಂದೆಯೇ ಚರಂಡಿ ನೀರು: ಬೋತಗಿ ಗ್ರಾಮದಲ್ಲಿ ಸೂಕ್ತ ಚರಂಡಿ ವ್ಯವಸ್ಥೆಯಿಲ್ಲದೇ ರಸ್ತೆಯಲ್ಲೇ ಕೊಳಚೆ ನೀರು ಸಂಗ್ರಹವಾಗುತ್ತಿದೆ. ಸ್ವಚ್ಛತೆಯ ಸಮಸ್ಯೆಯಿಂದ ಗ್ರಾಮಸ್ಥರು ಪರದಾಡುವಂತಾಗಿದೆ.

ಗ್ರಾಮದಲ್ಲಿ ಈವರೆಗೂ ಸೂಕ್ತ ಚರಂಡಿ ನಿರ್ಮಾಣ ಆಗಿಲ್ಲ. ಚರಂಡಿ ತ್ಯಾಜ್ಯ ವಿಲೇವಾರಿಗೆ ಕ್ರಮ ಕೈಗೊಂಡಿಲ್ಲ. ಹೀಗಾಗಿ ಕೊಳಚೆ ನೀರು ರಸ್ತೆ ಮೇಲೆಯೇ ಹರಿದು, ಅಲ್ಲಲ್ಲಿ ಸಂಗ್ರಹಗೊಂಡು ಸೊಳ್ಳೆಗಳ ಉತ್ಪತ್ತಿ ತಾಣವಾಗುತ್ತಿವೆ. ಸೊಳ್ಳೆಗಳಿಂದಾಗಿ ಗ್ರಾಮಸ್ಥರಲ್ಲಿ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಎದುರಾಗಿದೆ. ಶೀಘ್ರದಲ್ಲೇ ಚರಂಡಿಗಳಲ್ಲಿ ನೀರು ಹರಿಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಗ್ರಾಮದಲ್ಲಿ ಬಹುತೇಕರು ಸ್ವಚ್ಛಗ್ರಾಮ ಯೋಜನೆ ಅಡಿ ಶೌಚಾಲಯ ನಿರ್ಮಿಸಿಕೊಂಡಿದ್ದಾರೆ. ಆದರೂ ಅವುಗಳನ್ನು ಬಳಸದೇ ಬಯಲು ಬಹಿರ್ದೆಸೆಗೆ ತೆರಳುತ್ತಾರೆ. ಹೀಗಾಗಿ ಶೌಚಾಲಯ ಬಳಕೆ ಕುರಿತು ಜಾಗೃತಿ ಹಾಗೂ ಅರಿವು ಮೂಡಿಸಬೇಕು ಎಂದು ಖಲೀಲ್ ಒತ್ತಾಯಿಸಿದ್ದಾರೆ.

ಚರಂಡಿ ಸ್ವಚ್ಛತೆ ಮಾಡಿಸಲಾಗುವುದು. ಶೌಚಾಲಯ ಬಳಕೆಯ ಕುರಿತು ಗ್ರಾಮದಲ್ಲಿ ಅರಿವು ಮೂಡಿಸಲಾಗುವುದು’ ಎಂದು ಪಿಡಿಒ ರಮೇಶ ತಿಳಿಸಿದರು.

Ashika S

Recent Posts

ಮದುವೆ ಮನೆಯ ಊಟ ಸೇವಿಸಿ ನೂರಾರು ಮಂದಿ ಅಸ್ವಸ್ಥ

ಮದುವೆ ಮನೆಯಲ್ಲಿ ಊಟ ಮಾಡಿದ ನೂರಾರು ಮಂದಿ ಏಕಾಏಕಿ ಅಸ್ವಸ್ಥಗೊಂಡ ಘಟನೆ ಚಿತ್ರದುರ್ಗ ತಾಲೂಕಿನ ಕಾಲ್ಗೆರೆ ಗ್ರಾಮದಲ್ಲಿ ನಡೆದಿದೆ.

10 mins ago

ಕಾಂಗ್ರೆಸ್ ಪರ ಮತ ಹಾಕಿಸಿದ್ದಕ್ಕೆ ಯುವಕನ ಕೊಲೆ

ಚುನಾವಣೆ ಮುಗಿದರೂ ಹಗೆತನ ಮುಗಿಯಲಿಲ್ಲ. ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಕ್ಕೆ ಯುವಕನೊಬ್ಬ ಕೊಲೆಯಾಗಿದ್ದಾನೆ. ಜಾವೀದ್ ಚಿನ್ನಮಳ್ಳಿ (25)ಹತ್ಯೆಯಾದವನು. ಕಲಬುರಗಿಯ ಅಫಜಲಪುರ…

24 mins ago

ಆನ್‌ಲೈನ್ ಟ್ರೇಡಿಂಗ್: 17.35 ಲಕ್ಷ ರೂ. ವಂಚನೆ

ಆನ್‌ಲೈನ್ ಪಾರ್ಟ್‌ಟೈಮ್ ಕೆಲಸ ಹಾಗೂ ಆನ್‌ಲೈನ್ ಟ್ರೇಡಿಂಗ್ ಮೇಸೆಜ್ ನ‌ ಬಲೆಗೆ ಬಿದ್ದ ವ್ಯಕ್ತಿಯೊಬ್ಬರು ಬರೋಬ್ಬರಿ 17.35 ಲಕ್ಷ ರೂ.…

45 mins ago

ಬಿಸಿಲಿನ ತಾಪ, ಮೇವಿನ ಕೊರತೆಯಿಂದ ಸಾವಿಗೀಡಾಗುತ್ತಿವೆ ಸಾಕುಪ್ರಾಣಿಗಳು

ಹೆಚ್ಚುತ್ತಿರುವ ಬಿಸಿಲಿನ ತಾಪ ಹಾಗೂ ಸಮರ್ಪಕ ಮೇವು ದೊರಕದೆ ಕಾಡಂಚಿನ ಗ್ರಾಮಗಳ ಜಾನುವಾರು, ಸಾಕುಪ್ರಾಣಿಗಳು ಸಾವಿಗೀಡಾಗುತ್ತಿವೆ.

1 hour ago

ದೊಡ್ಡಬಳ್ಳಾಪುರ: ಹಳೇ ದ್ವೇಷಕ್ಕೆ ಯುವಕನ ಕತ್ತು ಕುಯ್ದು ಕೊಲೆ

ಹಳೇ ದ್ವೇಷಕ್ಕೆ ನಡುರಸ್ತೆಯಲ್ಲಿ ಯುವಕನ ಕತ್ತು ಕುಯ್ದು ಕೊಲೆ ಮಾಡಿದ ಘಟನೆ ದೊಡ್ಡಬಳ್ಳಾಪುರ ಹೊರವಲಯ ನವೋದಯ ಶಾಲೆಯ ಮುಂಭಾಗದಲ್ಲಿ ನಡೆದಿದೆ.

1 hour ago

ಕೇಂದ್ರ ಸೂಚನೆ ನೀಡಿದ ಕೂಡಲೇ ರಾಜ್ಯದಲ್ಲಿ ಸಿಎಎ ಅನುಷ್ಠಾನ: ಮೋಹನ್‌ ಯಾದವ್‌

ದೇಶಾದ್ಯಂತ ಚುನಾವಣೆಗ ಅಂತ್ಯಗೊಳುವುದಕ್ಕೂ ಮುನ್ನ ವಿವಿಧ ರಾಜ್ಯಗಳಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಪ್ರಕ್ರಿಯೆ ಆರಂಭಿಸಬೇಕೆಂದು ಕೇಂದ್ರ ನಿರ್ಧರಿಸಿದೆ.

2 hours ago