Categories: ಬೀದರ್

ಜನ ಸೇವೆಯೇ ಜೀವನದ ಪರಮ ಗುರಿ: ಪ್ರಭು.ಬಿ ಚವ್ಹಾಣ

ಔರಾದ: ಜನ ಸೇವೆಯೇ ನನ್ನ ಜೀವನದ ಪರಮ ಗುರಿಯಾಗಿದ್ದು, ಜನರ ಸಂತೋಷದಲ್ಲಿಯೇ‌ ನನ್ನ ಸಂತೋಷವನ್ನು ಕಾಣುತ್ತೇನೆ ಎಂದು ಪಶು ಸಂಗೋಪನೆ ಸಚಿವರಾದ ಪ್ರಭು.ಬಿ ಚವ್ಹಾಣ ಅವರು‌ ತಿಳಿಸಿದರು.

ಭಾರತೀಯ ಜನತಾ ಪಕ್ಷ ಔರಾದ(ಬಾ) ಮಂಡಲ ವತಿಯಿಂದ ಔರಾದ(ಬಾ) ಪಟ್ಟಣದ‌ಲ್ಲಿ ನಡೆದ ಕಾರ್ಯಕರ್ತರ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಔರಾದ(ಬಾ) ಕ್ಷೇತ್ರದಲ್ಲಿ ಕಳೆದ ಮೂರು ಅವಧಿಗೆ ಶಾಸಕನಾಗಿ ಜನಪರ ಕೆಲಸಗಳನ್ನು ಮಾಡುತ್ತಾ ಬಂದಿದ್ದೇನೆ. 2008ಕ್ಕಿಂತ ಮುಂಚೆ ಸಾಕಷ್ಟು ಹಿಂದುಳಿದಿದ್ದ ಕ್ಷೇತ್ರ ನಾನು ಶಾಸಕನಾದ ನಂತರ ಕ್ಷೇತ್ರದೆಲ್ಲೆಡೆ ಅಭಿವೃದ್ಧಿ ಸಾಧಿಸಲಾಗುತ್ತಿದೆ. ಎಲ್ಲ ಗ್ರಾಮಗಳಿಗೆ ಸಂಚರಿಸಿ ಜನರ ಸಮಸ್ಯೆಗಳನ್ನು ಆಲಿಸಿ ಸ್ಪಂದಿಸುವ ಕೆಲವನ್ನು ಮಾಡುತ್ತಾ ಬಂದಿದ್ದೇನೆ. ಕಷ್ಟವೆಂದು ಹೇಳಿಕೊಂಡು ಬರುವ ಎಲ್ಲರಿಗೂ ನೆರವು ನೀಡುವ ಪ್ರಯತ್ನ ಮಾಡಿದ್ದೇನೆ. ಕ್ಷೇತ್ರದಲ್ಲಿ ರಸ್ತೆ, ಕುಡಿಯುವ ನೀರು, ಶಾಲಾ ಕಾಲೇಜು, ಅಂಗನವಾಡಿ ಕೇಂದ್ರ, ಸಿಸಿ ರಸ್ತೆ, ಚರಂಡಿಯಂತಹ ಮೂಲ ಸೌಕರ್ಯಗಳನ್ನು ಒದಗಿಸಲಾಗಿದೆ‌ ಎಂದರು.
ಜನತೆ ನನಗೆ ಸಾಕಷ್ಟು ಪ್ರೀತಿ ವಿಶ್ವಾಸ ನೀಡಿದ್ದಾರೆ.

ಅವರ ಆಶೀರ್ವಾದದಿಂದಾಗಿ ಶಾಸಕನಾಗಿ, ಸಚಿವನಾಗಿ ಸೇವೆ ಮಾಡಲು ಅವಕಾಶ ಸಿಕ್ಕಿದೆ. ಜನರ ನಿರೀಕ್ಷೆಗೆ ಅನುಗುಣವಾಗಿ ಕೆಲಸ ಮಾಡಿದ್ದೇನೆ. ತಮ್ಮ ಆಶೀರ್ವಾದ ಹೀಗೆಯೇ ಇರಬೇಕೆಂದು ಕೋರಿದರು.

ಸರ್ಕಾರ ನೀಡಿರುವ ಒಳ ಮೀಸಲಾತಿ ಕುರಿತಂತೆ ಕೆಲವರು ತಪ್ಪು ಮಾಹಿತಿಗಳನ್ನು ಹರಡಿಸುತ್ತಾ ಜನರಲ್ಲಿ ಗೊಂದಲ ಹುಟ್ಟಿಸುವ ಪ್ರಯತ್ನ ಮಾಡುತ್ತಿದ್ದಾರೆ. ಪರಿಶಿಷ್ಟ ಜಾತಿಯಲ್ಲಿರುವ ಎಲ್ಲ ಸಮುದಾಯಗಳಿಗೆ ನ್ಯಾಯ ಒದಗಿಸುವ ಕೆಲಸವನ್ನು ಸರ್ಕಾರ ಮಾಡಿದೆ. ಬಂಜಾರಾ, ಭೋವಿ, ಕೊರಮ, ಕೊರಚ ಸಮುದಾಯವನ್ನು ಎಸ್ಸಿ ಪಟ್ಟಿಯಿಂದ ತೆಗೆಯಲಾಗುತ್ತದೆ ಎನ್ನುವ ಸುಳ್ಳನ್ನು ಹರಡಿಸಲಾಗುತ್ತಿದೆ. ನನ್ನ ಜೀವಿತಾವಧಿಯಲ್ಲಿ ಯಾವುದೇ ಕಾರಣಕ್ಕೂ ಯಾವೊಂದು ಸಮಾಜಗಳಿಗೂ ಅನ್ಯಾಯ ಮಾಡಲು ಬಿಡುವುದಿಲ್ಲ ‌ಎಂದು ಹೇಳಿದರು.

ದೇಶ ಸ್ವಾತಂತ್ರ್ಯವಾದ ನಂತರ ಇಲ್ಲಿಯವರೆಗೂ ಬಂಜಾರಾ ಸಮಾಜದ ಹಲವು ಕುಟುಂಬಗಳು ಸ್ವಂತ ಮನೆಗಳಿಲ್ಲದೇ ಸಾಕಷ್ಟು ತಾಪತ್ರಯ ಎದುರಿಸುತ್ತಿದ್ದರು. ಪ್ರಧಾನಿ ನರೇಂದ್ರ ಮೋದಿಯವರು ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸುಮಾರು 51 ಸಾವಿರ ಕುಟುಂಬಗಳಿಗೆ ಹಕ್ಕು ಪತ್ರ ನೀಡುವ ಮೂಲಕ ಐತಿಹಾಸಿಕ ಕೆಲಸವನ್ನು ಮಾಡಿದ್ದಾರೆ.‌ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು ಹೆಚ್ಚಿಸಲಾಗಿದೆ. ಇಂತಹ ಅನೇಕ ಸಾಧನೆಗಳು ಬಿಜೆಪಿ ನೇತೃತ್ವದ ಸರ್ಕಾರದಿಂದ ಆಗಿವೆ ಎಂದರು.

ಔರಾದ(ಬಿ) ಪಟ್ಟಣದ ಯುವಜನತೆಗೆ ಉದ್ಯೋಗಗಳನ್ನು ಕಲ್ಪಿಸಲು ಹೆಚ್ಚಿನ ಆದ್ಯತೆ ನೀಡಿದ್ದು, ಕ್ಷೇತ್ರಕ್ಕೆ ಸಣ್ಣಪುಟ್ಟ ಕಾರ್ಖಾನೆಗಳನ್ನು ತರಲು ಯತ್ನಿಸುತ್ತಿದ್ದೇನೆ. ಇದಕ್ಕೆ ಬೇಕಿರುವ ಎಲ್ಲ ಮೂಲ ಸೌಕರ್ಯಗಳನ್ನು ಒದಗಿಸಲಾಗಿದೆ. ಮುಂದಿನ ದಿನಗಳಲ್ಲಿ ಕ್ಷೇತ್ರದ ಯುವಕರು ಉದ್ಯೋಗಕ್ಕಾಗಿ ಬೇರೆಡೆಗೆ ಹೋಗುವ ಅಗತ್ಯವಿರುವುದಿಲ್ಲ ಎಂದು ಸಚಿವರು ತಿಳಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಔರಾದ ಮಂಡಲ‌ ಅಧ್ಯಕ್ಷರಾದ ರಾಮಶೆಟ್ಟಿ ಪನ್ನಾಳೆ, ಮುಖಂಡರಾದ ವಸಂತ ಬಿರಾದಾರ, ಸುರೇಶ ಭೋಸ್ಲೆ, ಬನ್ಸಿ ಮಹಾರಾಜ, ಪ್ರಕಾಶ ಘೂಳೆ, ಕೇರಬಾ ಪವಾರ, ರಾಜಕುಮಾರ ಪೋಕಲವಾರ, ಶಿವಾಜಿರಾವ ಪಾಟೀಲ ಮುಂಗನಾಳ, ಕೇರಬಾ ಪವಾರ, ಶರಣಪ್ಪ ಪಂಚಾಕ್ಷರಿ,‌ ಸಚಿನ್ ರಾಠೋಡ್, ಪ್ರದೀಪ ಪವಾರ, ಪ್ರತೀಕ‌ ಚವ್ಹಾಣ, ಹಣಮಂತ ಸುರನಾರ, ಖಂಡೋಬಾ ಕಂಗಟೆ, ರಾಜು ಪೋಕಲವಾರ, ಸುಜಿತ್ ರಾಠೋಡ್, ಬಾಲಾಜಿ ಠಾವರೆ, ಎಂ.ಡಿ ಸಲಾವುದ್ದೀನ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Sneha Gowda

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

4 hours ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

4 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

4 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

4 hours ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

4 hours ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

5 hours ago