News Karnataka Kannada
Sunday, April 28 2024
ಬೀದರ್

ಮಹಿಳೆಯ ಆರ್ಥಿಕ ಅಭಿವೃದ್ಧಿಗೆ ಕೇಂದ್ರ ಸರ್ಕಾರದ ಹಲವಾರು ಯೋಜನೆಗಳಿವೆ: ಕೇಂದ್ರ ಸಚಿವ ಭಗವಂತ ಖೂಬಾ

Several schemes of the central government for the economic development of women
Photo Credit : News Kannada

ಬೀದರ್: ಮಾರ್ಚ್. 27 ‘ಕೇಂದ್ರ ಸರ್ಕಾರ ಮಹಿಳೆಯರ ಆರ್ಥಿಕ ಪ್ರಗತಿಗೆ ಹಲವಾರು ಯೋಜನೆಗಳನ್ನು ರೂಪಿಸಿದ್ದು. ಮಹಿಳೆಯರು ಅವುಗಳ ಲಾಭ ಪಡೆದುಕೊಂಡು ಆರ್ಥಿಕವಾಗಿ ಸಬಲರಾಗಬೇಕು’ ಎಂದು ಕೇಂದ್ರ ನೂತನ ನವೀಕರಿಸಬಹುದಾದ ಇಂಧನ ಮೂಲ ಹಾಗೂ ರಾಸಾಯನಿಕ ಮತ್ತು ರಸಗೊಬ್ಬರ ರಾಜ್ಯ ಖಾತೆ ಸಚಿವ ಭಗವಂತ ಖೂಬಾ ಹೇಳಿದರು.

ಅವರು ಸೋಮವಾರ ನಗರದ ಚನ್ನಬಸವ ಪಟ್ಟದೇವರು ರಂಗಮAದಿರದಲ್ಲಿ ಕೌಶಲ್ಯಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ,ಜಿಲ್ಲಾಡಳಿತ, ಹಾಗೂ ನಗರಸಭೆ ಬೀದರ ಇವರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ದೀನ್ ದಯಾಳ್ ಅಂತ್ಯೋದಯ ಯೋಜನೆ ರಾಷ್ಟಿçÃಯ ನಗರ ಜಿವನೋಪಾಯ ಅಭಿಯಾನ(ಡೇ ನಲ್ಮ್) ಸ್ವ-ಸಹಾಯ ಗುಂಪುಗಳಿಗೆ ದಶಸೂತ್ರ ಹಾಗೂ ಪ್ರದೇಶ ಮಟ್ಟದ ಒಕ್ಕೂಟಗಳಿಗೆ ಸಮಾರ್ಥ್ಯ ಅಭಿವೃದ್ಧಿ ತರಬೇತಿ ಹಾಗೂ ಸ್ವ-ಸಹಾಯ ಗುಂಪು, ಪ್ರದೇಶ ಮಟ್ಟದ ಒಕ್ಕೂಟದ ಸದಸ್ಯರು ಮತ್ತು ಬೀದಿ ಬದಿ ವ್ಯಾಪಾರಿಗಳೊಂದಿಗೆ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕೇಂದ್ರ ಸರ್ಕಾರವು ಪ್ರತಿ ಯೋಜನೆಯನ್ನು ಮಹಿಳೆಯರನ್ನು ಗಮನದಲ್ಲಿಟ್ಟುಕೊಂಡು ರೂಪಿಸುತ್ತಿದೆ ಮಹಿಳೆಯರು ಅವುಗಳ ಲಾಭ ಪಡೆಯಬೇಕು. ಪ್ರಸ್ತುತ ದೇಶದ ಆರ್ಧಿಕ ಕ್ಷೇತ್ರದಲ್ಲಿ ಮಹಿಳೆಯ ಪಾಲು ಕೇವಲ ಶೇ.20-25 ಮಾತ್ರ ಇದೆ. ಮುಂಬರುವ ದಿನಗಳಲ್ಲಿ ಅವರ ಪಾಲು ಶೇ.70ಕ್ಕೆ ತಲುಪಬೇಕು.

ಕೇಂದ್ರ ಸರ್ಕಾರ ಜಾರಿಗೆ ತಂದ ಜನಧನ್ ಖಾತೆ ಯೋಜನೆಯಡಿ ಒಟ್ಟು 43 ಕೋಟಿ ಖಾತೆ ತೆರೆಯಲಾಗಿದ್ದು ಅವುಗಳಲ್ಲಿ 32 ಕೋಟಿ ಖಾತೆಯನ್ನು ಮಹಿಳೆಯರು ಹೊಂದಿದ್ದಾರೆ ಹಾಗೂ ಮುದ್ರಾ ಯೋಜನೆಯಲ್ಲಿಯೂ ಸಹ ಮಹಿಳೆಯರು ಹೆಚ್ಚಿನ ಲಾಭ ಪಡೆದಿದ್ದಾರೆ .ಎಂದು ಹೇಳಿದರು.

ಜನಸಂಖ್ಯೆಗಳಿಗೆ ಅನುಗುಣವಾಗಿ ಸ್ವ ಸಹಾಯ ಗುಂಪುಗಳನ್ನು ಸ್ಥಾಪಿಸಿ ಅವರಿಗೆ ಸಾಲ ಸೌಲಭ್ಯ ಒದಗಿಸಿ ಅವರ ಆರ್ಥಿಕ ಪ್ರಗತಿಗೆ ಶ್ರಮಿಸುವ ಜವಾಬ್ದಾರಿಯನ್ನು ಅಧಿಕಾರಿಗಳಿಗೆ ವಹಿಸಲಾಗಿತ್ತು ಅವರು ಅವರ ಕೇಲಸವನ್ನು ಅಚ್ಚುಕಟ್ಟಾಗಿ ನಿರ್ವಹಿಸುತ್ತಿದ್ದಾರೇ? ಅವರಿಂದ ಮಹಿಳೆಯರಿಗೆ ಲಾಭವಾಗಿದೆಯೇ ಎಂಬ ಪ್ರಶ್ನೆಗಳಿಗೆ ಉತ್ತರ ಹುಡುಕುವ ನಿಟ್ಟಿನಲ್ಲಿ ಇವತ್ತು ಈ ಸಂವಾದ ಕಾರ್ಯಕ್ರಮ ಆಯೋಜಿಸಲಾಗಿದೆ ನಿಮ್ಮೆಲ್ಲರೊಂದಿಗೆ ಸಂವಾದದಲ್ಲಿ ಪಾಲ್ಗೋಂಡಿದ್ದು ಸಂತಸ ತಂದಿದೆ ಮುಂದೆಯು ನಿವು ಸರ್ಕಾರದ ವಿವಿಧ ಯೋಜನೆಗಳ ಹೆಚ್ಚಿನ ಲಾಭ ಪಡೆಯಬೇಕು ಎಂದರು.

ಕಾರ್ಯಕ್ರಮದಲ್ಲಿ ವಿವಿಧ ಸ್ವ ಸಹಾಯ ಗುಂಪಿನ ಮಹಿಳೆಯರು ಹಾಗೂ ಬೀದಿ ಬದಿ ವ್ಯಾಪಾರಿಗಳು ತಾವು ಸರ್ಕಾರದ ವಿವಿಧ ಯೋಜನೆಗಳಿಂದ ಲಾಭ ಪಡೆದು ಆರ್ಥಿಕವಾಗಿ ಸ್ವಾವಲಂಬಿಯಾದ ಅನುಭವವನ್ನು ಹಚ್ಚಿಕೊಂಡರು ಇದೆ ಸಂದರ್ಭದಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ ಪುಡ್ ಸೆಫ್ಟಿ ಸುಪರ್‌ವೈಸರ ಸರ್ಟಿಫಿಕೆಟ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಬೀದರ ನಗರ ಸಭೆ ಪೌರಾಯುಕ್ತ ಶಿವರಾಜ ರಾಠೋಡ್, ಜಿಲ್ಲಾ ನಗಾಭಿವೃದ್ಧಿ ಕೇಂದ್ರದ ಯೋಜನಾ ನಿರ್ದೇಶಕ ಮೋತಿಲಾಲ ಲಮಾಣಿ, ಚಂದ್ರಶೇಖರ ದೇಶಮುಖ, ಅಣೆಪ್ಪಾ ಖಾನಾಪುರೆ, ಪ್ರಕಾಶ, ನಾಗೇಂದ್ರ, ಸಂಜೀವ ಸೇರಿದಂತೆ ಜಿಲ್ಲೆಯ ವಿವಿಧ ಸ್ವಸಹಾಯ ಗುಂಪುಗಳ ಸದಸ್ಯರು ಹಾಗೂ ಬೀದಿ ಬದಿ ವ್ಯಾಪಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು