Categories: ಬೀದರ್

ಕ್ರೀಡೆ ಮಾನಸೀಕ ಸದೃಡತೆಗೆ ಸಹಕಾರಿ: ಭಗವಂತ ಖೂಬಾ

ಬೀದರ: ಮಕ್ಕಳಲ್ಲಿ ಓದಿನ ಜೋತೆಗೆ ಕ್ರೀಡಾ ಮನೋಭಾವ ಬೇಳೆಸುವ ಉದ್ದೇಶದಿಂದ ಸಂಸದರ ಕ್ರೀಡಾ ಮಹಾಮೇಳವನ್ನು ಆಯೋಜಿಸಲಾಗಿದೆ ಎಂದು ಕೇಂದ್ರ ನೂತನ ನವೀಕರಿಸಬಹುದಾದ ಇಂಧನ ಮೂಲ, ಹಾಗೂ ರಾಸಾಯನಿಕ ಮತ್ತು ರಸಗೊಬ್ಬರ ರಾಜ್ಯ ಖಾತೆ ಸಚಿವ ಭಗವಂತ ಖೂಬಾ ಹೇಳಿದರು.

ಅವರು ರವಿವಾರ ನಗರದ ನೆಹರು ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ 2023ನೇ ಸಾಲಿನ ಜಿಲ್ಲಾ ಮಟ್ಟದ ಸಂಸದರ ಕ್ರೀಡಾ ಮಹಾಮೇಳವನ್ನು ಉದ್ಘಾಟಿಸಿ ಮಾತನಾಡಿದರು.

ವಲಯ ಮಟ್ಟದಿಂದ ವಿಜೇತರಾದ 3600 ವಿದ್ಯಾರ್ಥಿಗಳು ಜಿಲ್ಲಾ ಮಟ್ಟದಲ್ಲಿ ಕ್ರೀಡಾ ಮಹಾಮೇಳದಲ್ಲಿ ಭಾಗವಹಿಸಿದ್ದಾರೆ ಹಾಗೂ ಒಟ್ಟಾರೆ ಸಂಸದರ ಕ್ರೀಡಾ ಮಹಾಮೇಳದಲ್ಲಿ ಸುಮಾರು 50 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೋಳ್ಳುವ ಮೂಲಕ ಸಂಸದರ ಕ್ರೀಡಾ ಮಹಾಮೇಳ ಯಶಸ್ವಿಗೋಳಿದ್ದಾರೆ ಎಂದ ಅವರು ಕ್ರೀಡೆಯಲ್ಲಿ ಸೋಲು ಗೆಲುವ ಸಹಜ ಸೋತವರು ಮತ್ತೆ ಗೆಲ್ಲುವ ಗುರಿ ಬೆನ್ನಟ್ಟಿ ಮುಂದೆ ಸಾಗಬೇಕು ಎಂದರು.

ಬೀದರ ಉತ್ತರ ಶಾಸಕ ರಹೀಮ್ ಖಾನ್ ಮಾತನಾಡಿ ಸಂಸದರಾದ ಭಗವಂತ ಖೂಬಾ ರವರ ಸಹಕಾರದಿಂದ ಇಂದು ಗ್ರಾಮ,ತಾಲೂಕು ಹಾಗೂ ಜಿಲ್ಲಾ ಮಟ್ಟದಿಂದÀ ಕ್ರೀಡಾ ಪ್ರತಿಭೆಗಳನ್ನು ಹೊರತೆಗೆಯಲು ಸಾಧ್ಯವಾಗಿದೆ. ಕ್ರೀಡಾ ಮಹಾಮೇಳದಲ್ಲಿ ಹೆಚ್ಚು ಮಕ್ಕಳು ಭಾಗವಹಿಸಿದ್ದು ಸಂತಸ ತಂದಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಬೀದರ ನಗರಾಭವೃದ್ದಿ ಪ್ರಾಧಿಕಾರದ ಅಧ್ಯಕ್ಷ ಬಾಬು ವಾಲಿ, ಬೀದರ ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಕ ಅಧಿಕಾರಿ, ಶಿಲ್ಪಾ .ಎಂ, ಜಿಲ್ಲಾ ಪೊಲೀಸ್ ವರೀಷ್ಠಾಧಿಕಾರಿ ಚೆನ್ನಬಸವಣ್ಣ ಲಂಗೋಟಿ, ಬೀದರ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶ ಚಂದ್ರಕಾAತ ಶಹಬಾದಕರ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಸಲೀಂ ಪಾಷ,ಶಿವಶರಣಪ್ಪ ವಾಲಿ, ಬಸವರಾಜ ಧನ್ನೂರ, ಮುಖಂಡರಾದ ಗುರುನಾಥ ಕೊಳ್ಳುರ,ಬಿ.ಜಿ ಶೆಟಕಾರ,ವಿಜಕುಮಾರ ಪಾಟೀಲ್ ಗಾದಗಿ,ರಮೇಶಕುಮಾರ ಗೋಯಲ್,ಎಲ್ಲಾ ತಾಲೂಕಿನ ಶಿಕ್ಷಣಾಧಿಕಾರಿಗಳು, ಜಿಲ್ಲೆಯ ಎಲ್ಲಾ ಕ್ರೀಡಾ ಸಂಸ್ಥೆಯ ಅಧ್ಯಕ್ಷರು, ಪದಾಧಿಕಾರಿಗಳು, ದೈಹಿಕ ಶಿಕ್ಷಕರು ಕ್ರೀಡಾ ಪಟುಗಳು, ವಿದ್ಯಾರ್ಥಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.

ಇದೆ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಗೌರವ ಸಲಹೆಗಾರ ಶಿವರಾಜ ಕಣಜಿ ಅವರಿಗೆ ಸಹಕಾರ ರತ್ನ ಹಾಗೂ ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಗೌರವಾಧ್ಯಕ್ಷ ಡಾ. ಶ್ರೀನಿವಾಸರೆಡ್ಡಿ ಮುದನಾಳರಿಗೆ ಕ್ರೀಡಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

Sneha Gowda

Recent Posts

ಪ್ರವಾಹಕ್ಕೆ ತತ್ತರಿಸಿ ಹೋದ ಅಫ್ಗಾನಿಸ್ತಾನ : 200ಕ್ಕೂ ಹೆಚ್ಚು ಜನ ಬಲಿ

ಅಫ್ಘಾನಿಸ್ತಾನದಲ್ಲಿ ಭಾರೀ ಮಳೆಯಿಂದ ಪ್ರವಾಹ ಉಂಟಾಗಿದೆ. ಈ ಪ್ರವಾಹದಿಂದಾಗಿ ಸುಮಾರು 200ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ ಎಂದು ವಿಶ್ವಸಂಸ್ಥೆ ಶನಿವಾರ…

7 mins ago

ಫ್ಲೈಯಿಂಗ್ ಎಲೆಕ್ಟ್ರಿಕ್ ಟ್ಯಾಕ್ಸಿ ನಿರ್ಮಿಸಲು ಮುಂದಾದ ಮದ್ರಾಸ್ ಐಐಟಿ-ಶ್ಲಾಘಿಸಿದ ಆನಂದ್ ಮಹೀಂದ್ರಾ

ಎಲೆಕ್ಟ್ರಿಕ್ ಫ್ಲೈಯಿಂಗ್ ಟ್ಯಾಕ್ಸಿಯನ್ನು ಅಭಿವೃದ್ಧಿಪಡಿಸುತ್ತಿರುವ ಇಂಡಿಯನ್ ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮದ್ರಾಸ್‍ನ್ನು ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಅವರು…

19 mins ago

ಜಮ್ಮು –ಕಾಶ್ಮೀರ : ಪಾಕ್ ಡ್ರೋನ್ ಹೊಡೆದುರುಳಿಸಿದ ಬಿಎಸ್ಎಫ್

ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯ ಅಂತರರಾಷ್ಟ್ರೀಯ ಗಡಿ ಬಳಿ ಪಾಕಿಸ್ತಾನದ ಡ್ರೋನ್ ಅನ್ನು ಗಡಿ ಭದ್ರತಾ ಪಡೆ (ಬಿಎಸ್ಎಫ್)…

28 mins ago

ನೂಕುನುಗ್ಗಲಿನಲ್ಲೂ ಪಾದಯಾತ್ರೆ ಹೊರಟ ಭಕ್ತರು : ವಿಡಿಯೋ ವೈರಲ್‌

ಯಮುನೋತ್ರಿ, ಗಂಗೋತ್ರಿ, ಕೇದರ್‌ನಾಥ್‌ ಮತ್ತು ಬದರಿನಾಥ್‌ ಪವಿತ್ರ ಚಾರ್‌ ಧಾಮ್‌ ಯಾತ್ರೆಯ ಹಿನ್ನಲೆಯಲ್ಲಿ ಅಪಾರ ಪ್ರಮಾಣದ ಭಕ್ತರು ಜಮಾಯಿಸಿದ ಪರಿಣಾಮ…

47 mins ago

ಕೆಂಪು ಲಿಪ್​ ಸ್ಟಿಕ್ ಬಳಕೆ ಮೇಲೆ ನಿಷೇಧ ವಿಧಿಸಿದ ಉತ್ತರ ಕೊರಿಯಾ: ಹಚ್ಚಿದರೆ ಕಠಿಣ ಶಿಕ್ಷೆ!

ಮಹಿಳೆಯರು ತುಟಿಗೆ ಹಚ್ಚುವ ಕೆಂಪು ಲಿಪ್​  ಸ್ಟಿಕ್ ಬಳಕೆಯ ಮೇಲೆ ಉತ್ತರ ಕೊರಿಯಾದಲ್ಲಿ ಕಟ್ಟುನಿಟ್ಟಾದ ನಿಷೇಧ ವಿಧಿಸಿದೆ.

48 mins ago

ಬಸವೇಶ್ವರ ಜಾತ್ರೆ: ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ

ಜಿಲ್ಲೆಯ ಸೊನ್ನ ಗ್ರಾಮದ ಶಿವುಕುಮಾರ ಮಾಸ್ತಾರ ದಂಪತಿಗಳ ಸಹಾಯಾರ್ಥದೊಂದಿಗೆ ಗ್ರಾಮದ ಸುಮಾರು 200 ಮಹಿಳೆಯರಿಗೆ ಉಡಿ ತುಂಬುವ ಕಾರ್ಯಕ್ರಮ ವಿಶ್ವರಾಧ್ಯ…

1 hour ago