Categories: ಬೀದರ್

ಸಿಸಿ ಕ್ಯಾಮೆರಾ ಕಣ್ಗಾವಲಿನಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ

ಬೀದರ್‌:  ‘ಈ ಬಾರಿ ಹುಮನಾಬಾದ್, ಚಿಟಗುಪ್ಪ ತಾಲ್ಲೂಕಿನಲ್ಲಿ ಒಟ್ಟು 6559 ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲಿದ್ದಾರೆʼ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ್ ಗುಡಾಳ್ ಹೇಳಿದರು.

ತಾಲ್ಲೂಕಿನ ನಿರ್ಣಾ ಗ್ರಾಮದ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ಸಿದ್ಧತಾ ವ್ಯವಸ್ಥೆ ಪರಿಶೀಲಿಸಿ ಮಾತನಾಡಿದರು.

ಹುಮನಾಬಾದ್ ತಾಲ್ಲೂಕಿನಲ್ಲಿ 11, ಚಿಟಗುಪ್ಪ ತಾಲ್ಲೂಕಿನಲ್ಲಿ 7 ಸೇರಿದಂತೆ ಒಟ್ಟು 18 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿವೆ.

‘ಇವುಗಳಲ್ಲಿ ಸರ್ಕಾರಿ ಪ್ರೌಢಶಾಲೆ ನಿರ್ಣಾ, ಸರ್ಕಾರಿ ಪ್ರೌಢಶಾಲೆ ಮನ್ನಾಎಖ್ಖೇಳಿ, ಸರ್ಕಾರಿ ಪ್ರೌಢಶಾಲೆ(ಬಾಲಕರ) ಹುಮನಾಬಾದ್ ಸೂಕ್ಷ್ಮ ಕೇಂದ್ರಗಳಾಗಿ, ಸರ್ಕಾರಿ ಪ್ರೌಢಶಾಲೆ ಹಳ್ಳಿಖೇಡ (ಬಿ) ಅತಿ ಸೂಕ್ಷ್ಮ ಕೇಂದ್ರವನ್ನಾಗಿ ಗುರುತಿಸಲಾಗಿದೆ’ ಎಂದು ಮಾಹಿತಿ ನೀಡಿದರು.

ಪ್ರತಿ ಕೇಂದ್ರದ ಎಲ್ಲ ಕೋಣೆಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ. ಸೂಕ್ತ ಪೊಲೀಸ್‌ ಬಂದೋಬಸ್ತ್‌ನಲ್ಲಿ ಪರೀಕ್ಷೆ ನಡೆಯಲಿವೆ. ಪ್ರತಿಶತ 90ರಷ್ಟು ಕೇಂದ್ರಗಳಲ್ಲಿ ಹೊರಗಡೆಯ ಶಿಕ್ಷಕರು ಪರೀಕ್ಷಾ ಮೇಲುಸ್ತುವಾರಿ ವಹಿಸಲಿದ್ದಾರೆ. ಯಾವುದೇ ಅವ್ಯವಹಾರಕ್ಕೆ ಅವಕಾಶ ಇರುವುದಿಲ್ಲ, ಅಚ್ಚುಕಟ್ಟಾಗಿ ಪರೀಕ್ಷೆ ನಡೆಸಲಾಗುತ್ತದೆ. ಅಭ್ಯರ್ಥಿಗಳಿಗೆ ಕೊಠಡಿಗಳಲ್ಲಿ ಕುಡಿಯುವ ನೀರು, ಗಡಿಯಾರದ ವ್ಯವಸ್ಥೆ ಮಾಡಲಾಗಿದೆ ಎಂದರು.

ನಂತರ ಮನ್ನಾಎಖ್ಖೇಳಿ, ಬೇಮಳಖೇಡಾ, ಚಿಟಗುಪ್ಪಗಳಲ್ಲಿಯ ಪರೀಕ್ಷಾ ಕೇಂದ್ರಗಳಿಗೂ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶಿಕ್ಷಣ ಸಂಯೋಜಕ ಮಹಾದೇವ್, ಮುಖ್ಯಶಿಕ್ಷಕ ವಿಷ್ಣುವರ್ಧನ್, ಶಿಕ್ಷಕರಾದ ರಾಮಕೃಷ್ಣ, ಚೇತನ್, ಕುಪೇಂದ್ರನಾಥ, ಉಲ್ಲಾಸ್, ವಿದ್ಯಾವತಿ, ಶ್ವೇತಾ ಇತರರು ಹಾಜರಿದ್ದರು.

Nisarga K

Recent Posts

ಅನೈತಿಕ ಸಂಬಂಧ ಶಂಕೆ: ಬೀದರ್​​ನಲ್ಲಿ ಯುವಕರಿಂದ ನೈತಿಕ ಪೊಲೀಸ್​ ಗಿರಿ

ಹಿಂದೂ ಯುವಕನ ಜೊತೆ ಮುಸ್ಲಿಂ ಸಮುದಾಯದ ಮಹಿಳೆ ಕುಳಿತಿದಕ್ಕೆ ಅದೇ ಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿ, ನೈತಿಕ ಪೊಲೀಸ್​​…

26 mins ago

ಸಂಗೊಳ್ಳಿರಾಯಣ್ಣ ಪ್ರತಿಮೆ ಭಗ್ನಗೊಳಿಸಿದ ಆರೋಪಿ ಸೆರೆ

ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೀಕನಹಳ್ಳಿ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ  ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿದ್ದ ಆರೋಪಿಯನ್ನು…

43 mins ago

ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಿಗೆ ಹುಸಿ ಬಾಂಬ್ ಬೆದರಿಕೆ

ಸಿಲಿಕಾನ್ ಸಿಟಿಯಲ್ಲಿ ಹುಸಿ ಬಾಂಬ್ ಬೆದರಿಕೆ ಮೇಲ್ ಮುಂದುವರೆದಿದ್ದು, ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಾದ ನಾಗವಾರದ ಸೇಂಟ್ ಫಿಲೋಮಿನಾ ಸೇರಿದಂತೆ…

54 mins ago

ಬೀದರ್‌: ಜಿಲ್ಲೆಯಾದ್ಯಂತ ತಂಪೆರೆದ ಮಳೆ, ಸಿಡಿಲಿಗೆ ವ್ಯಕ್ತಿ ಸಾವು

ಜಿಲ್ಲೆಯಾದ್ಯಂತ ಭಾನುವಾರ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ.

1 hour ago

ಆಮ್ ಆದ್ಮಿ ಪಕ್ಷವನ್ನು ಚುನಾವಣೆಯಲ್ಲಿ ಆಯ್ಕೆ ಮಾಡಿದರೆ ನಾನು ಮತ್ತೆ ಜೈಲಿಗೆ ಹೋಗಬೇಕಾಗಿಲ್ಲ

ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…

3 hours ago

ಗೌಡರ ಕುಟುಂಬಕ್ಕೆ ಮೋಸ ಮಾಡುವುದಿಲ್ಲ: ಕೆ.ಮಂಜು

ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…

3 hours ago