Categories: ಬೀದರ್

ದೇಶದ ಸುರಕ್ಷತೆ ಅಭಿವೃದ್ಧಿಗೆ ಬಿಜೆಪಿ ಬೆಂಬಲಿಸಿ ಮೋದಿ ಕೈ ಬಲಪಡಿಸಿ: ಜೆ.ಪಿ ನಡ್ಡಾ

ಬೀದರ್: ಜಿಲ್ಲೆಯ ಹುಮನಾಬಾದ್ ಪಟ್ಟಣದಲ್ಲಿ ಏರ್ಪಡಿಸಿದ್ದ ಬಿಜೆಪಿ ಪ್ರಚಾರ ಸಭೆಯನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಉದ್ಘಾಟಿಸಿ ಮಾತನಾಡಿದರು.

ದೇಶದ ಸುರಕ್ಷತೆ ಮತ್ತು ಅಭಿವೃದ್ಧಿಗಾಗಿ ಲೋಕಸಭೆ ಚುನಾವಣೆಯಲ್ಲಿ ಜನ ಬಿಜೆಪಿಯನ್ನು ಬೆಂಬಲಿಸಬೇಕು. ದೇಶದಲ್ಲಿ ಈ ಹಿಂದೆ ಮತ ಬ್ಯಾಂಕ್‌ ರಾಜಕಾರಣ ಮಾಡುತ್ತಿದ್ದರು. ಈಗ ಬಿಜೆಪಿ ಅಭಿವೃದ್ಧಿ, ಸುರಕ್ಷತೆಯ ಹೆಸರಿನಲ್ಲಿ ರಾಜಕಾರಣ ಮಾಡುತ್ತಿದೆ.

ಮೋದಿ ಸರ್ಕಾರ ದೇಶದ 4 ಕೋಟಿ ಜನರಿಗೆ ಉತ್ತಮವಾದ ಮನೆಗಳನ್ನು ಕಟ್ಟಿಸಿಕೊಟ್ಟಿದೆ ಪುನಃ ಅಧಿಕಾರಕ್ಕೆ ಬಂದರೆ 3 ಕೋಟಿ ಹೊಸ ಮನೆಗಳನ್ನು ಕಟ್ಟಿಸಿಕೊಡುತ್ತೇವೆ. ಐದು ಕೆ.ಜಿ. ಅಕ್ಕಿ, 1 ಕೆ.ಜಿ ಬೇಳೆ ಕೊಡುತ್ತಿದ್ದೇವೆ. ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆಯಿಂದ ಜಿಲ್ಲೆಯ ಎರಡೂವರೆ ಲಕ್ಷ ಜನರಿಗೆ ಡಿಬಿಟಿ ಮೂಲಕ ಪ್ರತಿ ತಿಂಗಳು 2 ಸಾವಿರ ಪಾವತಿಸಲಾಗುತ್ತಿದೆ. ಇದರಿಂದ ರೈತರು ಸದೃಢರಾಗಿದ್ದಾರೆ.

3 ಲಕ್ಷ ಮಹಿಳೆಯರಿಗೆ ಲಕಪತಿ ಸಹೋದರಿ ಮಾಡುವ ಗುರಿ ಹೊಂದಲಾಗಿದೆ. ಆಯುಷ್ಮಾನ್‌ ಭಾರತ್‌ ಯೋಜನೆಯಿಂದ ಶೇ 40ರಷ್ಟು ಭಾರತೀಯರಿಗೆ ಆರೋಗ್ಯ ಸೌಲಭ್ಯ ಸಿಗುತ್ತಿದೆ. ದೇಶದ ಪ್ರತಿಯೊಬ್ಬ ವ್ಯಕ್ತಿಗೂ ವಿಸ್ತರಿಸಲಾಗುವುದು. 70 ವರ್ಷ ದಾಟಿದ ಎಲ್ಲರಿಗೂ ಯಾವುದೇ ಜಾತಿ, ಮತ, ಪಂಥ, ಧರ್ಮವಿಲ್ಲದೇ ಈ ಯೋಜನೆಯ ವ್ಯಾಪ್ತಿಗೆ ಸೇರಿಸಿ ₹5 ಲಕ್ಷದವರೆಗೆ ಆರೋಗ್ಯ ಸೌಲಭ್ಯ ಕಲ್ಪಿಸಲಾಗುವುದು.

ಜಲಜೀವನ್‌ ಮಿಷನ್‌ ಯೋಜನೆಯಡಿ ದೇಶದ 11 ಕೋಟಿ ಮನೆಗಳಿಗೆ ಶುದ್ಧ ಕುಡಿಯುವ ನೀರು ಪೂರೈಸಲಾಗುತ್ತಿದೆ. ಎನ್‌ಡಿಎ ಅಭಿವೃದ್ಧಿ ದೃಷ್ಟಿಕೋನದೊಂದಿಗೆ ಕೆಲಸ ಮಾಡುತ್ತಿದೆ. ಆದರೆ, ಇಂಡಿಯಾ ಒಕ್ಕೂಟದವರು ಅವರ ಕುಟುಂಬದವರನ್ನು ರಕ್ಷಿಸಲು ಒಂದಾಗಿದ್ದಾರೆ. ನಾವು ಭ್ರಷ್ಟರನ್ನು ಜೈಲಿಗೆ ಕಳಿಸುತ್ತಿದ್ದರೆ, ಅವರು ಭ್ರಷ್ಟರನ್ನು ರಕ್ಷಿಸಬೇಕೆನ್ನುತ್ತಾರೆ’ ಎಂದು ನಡ್ಡಾ ಆರೋಪಿಸಿದರು.

ದೇಶದಲ್ಲಿ ಕಾಂಗ್ರೆಸ್‌ ಅಧಿಕಾರದಲ್ಲಿದ್ದಾಗ ಕಲ್ಲಿದ್ದಲು ಹಗರಣ, ಆಗಸ್ಟಾ ವೆಸ್ಟ್‌ಲ್ಯಾಂಡ್‌, 2ಜಿ, 3ಜಿ ಹಗರಣ, ಕಾಮನ್‌ವೆಲ್ತ್‌ ಹಗರಣ, ಸಕ್ಕರೆ, ಅಕ್ಕಿ, ಅಂತರಿಕ್ಷ, ಸಮುದ್ರ, ಪಾತಾಳ, ಜಮೀನು ಎಲ್ಲ ಕಡೆ ಹಗರಣಗಳನ್ನು ಮಾಡಿದ್ದರು. ಕರ್ನಾಟಕದ ಡಿಸಿಎಂ ಮೇಲೆ ತನಿಖೆ ನಡೆಯುತ್ತಿದೆ. ಇಂಡಿಯಾ ಒಕ್ಕೂಟದ ಎಲ್ಲರೂ ಒಂದಿಲ್ಲೊಂದು ಪ್ರಕರಣದಲ್ಲಿ ಸಿಲುಕಿದ್ದಾರೆ. ಅಖಿಲೇಶ್‌ ಯಾದವ್‌ ಅವರು ಲ್ಯಾಪ್‌ಟಾಪ್‌ ಹಗರಣ, ಕೆ. ಕವಿತಾ, ಅರವಿಂದ ಕೇಜ್ರಿವಾಲ್‌ ಅವರು ಅಬಕಾರಿ ಹಗರಣದಲ್ಲಿ ಶಾಮಿಲಾಗಿದ್ದಾರೆ. ಇಂತಹವರು ಮುಂದೆ ಬರಬೇಕಾ?’ ಎಂದು ಪ್ರಶ್ನಿಸಿದರು.

ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ, ಪಿ.ಚಿದಂಬರಂ, ಕಾರ್ತಿ ಚಿದಂಬರಂ, ಸಂಜಯ್‌ ಸಿಂಗ್‌, ಲಾಲು ಪ್ರಸಾದ್‌ ಯಾದವ್‌ ಸೇರಿದಂತೆ ಹಲವರು ಜಾಮೀನಿನ ಮೇಲೆ ಹೊರಗಿದ್ದಾರೆ. ಇವರು ಜೈಲಿನಲ್ಲಿದ್ದಾರೆ ಅಥವಾ ಬೇಲ್‌ ಮೇಲೆ ಹೊರಗಿದ್ದಾರೆ. ಇಂತಹ ಹಗರಣ ಮಾಡಿದವರು ಹೊರಗೆ ಇರಬೇಕಾ? ಇವರು ಜನರ ಉದ್ಧಾರ ಮಾಡುತ್ತಾರೆಯೇ? ಅಹಂಕಾರದ ಇಂಡಿಯಾ ಒಕ್ಕೂಟ, ಇನ್ನೊಂದೆಡೆ ಎನ್‌ಡಿಎ ಒಕ್ಕೂಟ ಜನರ ಸೇವೆಯಲ್ಲಿದೆ. ಯಾರಿಗೆ ಅವಕಾಶ ಕೊಡಬೇಕೆಂದು ನೀವೇ ನಿರ್ಧರಿಸಿ ಎಂದರು.

ಕೇಂದ್ರ ಸಚಿವ ಭಗವಂತ ಖೂಬಾ,ಬೀದರ ಜಿಲ್ಲೆಗೆ ಹಲವಾರು ಅಭಿವೃದ್ಧಿ ಕಾರ್ಯ ಮಾಡಿದ್ದಾರೆ. ಬೀದರ್ ವಿಮಾನ ನಿಲ್ದಾಣ ಅಭಿವೃದ್ಧಿ ಕೇಂದ್ರ ಸರ್ಕಾರದ ಉಡಾನ್‌ ಯೋಜನೆಯಡಿ ಬೀದರ್‌ ವಿಮಾನ ನಿಲ್ದಾಣ ಅಭಿವೃದ್ಧಿ ಪಡಿಸಿದೆ. ರಾಜ್ಯದಲ್ಲಿ ಹಿಂದೆ ಇದ್ದ ಬಿಜೆಪಿ ಸರ್ಕಾರವು ಬಸವಕಲ್ಯಾಣದ ಅನುಭವ ಮಂಟಪಕ್ಕೆ ₹600 ಕೋಟಿ ಅನುದಾನ ಮಂಜೂರು ಮಾಡಿದೆ. ರಾಷ್ಟ್ರೀಯ ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲಾಗಿದೆ. ಹೊಸ ರೈಲು, ಮಾರ್ಗಗಳು ಪ್ರಾರಂಭಿಸಲಾಗಿದೆ. ಎಲ್ಲ ದೃಷ್ಟಿಯಿಂದಲೂ ಅಭಿವೃದ್ಧಿ ಕೆಲಸಗಳಾಗುತ್ತಿವೆ’ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹೇಳಿದರು.

Ashitha S

Recent Posts

ಬೂತ್​ನಲ್ಲಿ ಲಕ್ಕಿ ಡ್ರಾ : ಮತ ಚಲಾಯಿಸಿದ ಮತದಾರನಿಗೆ ಸಿಕ್ತು ವಜ್ರದ ಉಂಗುರ

ಭೋಪಾಲ್​ನ ಪ್ರತಿ ಬೂತ್​ನಲ್ಲಿ ಲಕ್ಕಿ ಡ್ರಾ ನಡೆಸಲಾಗಿದೆ. ಅದರಲ್ಲಿ ಅದೃಷ್ಟಶಾಲಿ ಮತದಾರರಿಗೆ ಉಡುಗೊರೆ ಸಿಗಲಿದೆ ಎಂದು ಘೋಷಣೆ ಮಾಡಲಾಗಿತ್ತು. ಹೀಗೇ…

13 mins ago

ಹೊಸ ಕೋವಿಡ್-19 ರೂಪಾಂತರ ಯುಎಸ್‌ನಲ್ಲಿ ಪತ್ತೆ!

ಯುನೈಟೆಡ್ ಸ್ಟೇಟ್ಸ್‌ನಲ್ಲಿ ಪತ್ತೆಯಾದ ಈ ಭಿನ್ನ ಗುಂಪನ್ನು ತೀವ್ರ ತೀವ್ರ ಉಸಿರಾಟದ ಸಿಂಡ್ರೋಮ್ ಕೊರೊನಾ ವೈರಸ್ 2 (SARS-CoV-2) ಫ್ಲರ್ಟ್…

29 mins ago

ಇವಿಎಂ,ಚುನಾವಣಾ ಸಿಬ್ಬಂದಿ ಇದ್ದ ಬಸ್‌ಗೆ ಬೆಂಕಿ : ಯಂತ್ರಗಳು ಡ್ಯಾಮೇಜ್‌

ಚುನಾವಣೆ ಬಳಿಕ ಇವಿಎಂ ಯಂತ್ರಗಳು ಹಾಗೂ ಮತಗಟ್ಟೆ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಬಸ್​ಗೆ ಬೆಂಕಿ ತಗುಲಿರುವ ಘಟನೆ ಮಧ್ಯಪ್ರದೇಶದ ಬೇತುಲ್​ನಲ್ಲಿ ನಡೆದಿದೆ.…

45 mins ago

ಮತ್ತಷ್ಟು ಮೇಲಕ್ಕೆ ಎರುತ್ತೀರಿ : ಶ್ರೀನಿಧಿ ಶೆಟ್ಟಿಗೆ ದೈವದ ಅಭಯ

ಕೆಜಿಎಪ್ ಸಿನಿಮಾದ ನಾಯಕಿ ಶ್ರೀನಿಧಿ ಶೆಟ್ಟಿಯವರು ತನ್ನ ಕುಟುಂಬದ ದೈವಗಳಿಗೆ ಹೇಳಿದ್ದ ಹರಕೆಯ ನೇಮೋತ್ಸವವನ್ನು ನೆರವೇರಿಸಿದರು. ಮಂಗಳೂರಿನ ಹೊರವಲಯದ ಕಿನ್ನಿಗೋಳಿ…

1 hour ago

ಸಾಹಿತಿ, ಶಿಕ್ಷಕ ಡಾ.ಪಾಲ್ತಾಡಿ ರಾಮಕೃಷ್ಣ ಆಚಾರ್ ನಿಧನ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ, ಜಾನಪದ ವಿದ್ವಾಂಸ, ಸಾಹಿತಿ, ಶಿಕ್ಷಕ ಡಾ.ಪಾಲ್ತಾಡಿ ರಾಮಕೃಷ್ಣ ಆಚಾರ್ (79) ಮಂಗಳವಾರ…

1 hour ago

ಆಟವಾಡ್ತಿದ್ದ ಮಗು ಅಪಹರಣ : ಮೂರೇ ದಿನದಲ್ಲಿ ಪತ್ತೆ ಹಚ್ಚಿದ ಬೀದರ್​ ಪೊಲೀಸ್

ಅಪಹರಣಕ್ಕೊಳಗಾದ ಮಗವನ್ನ ಮೂರು ದಿನದಲ್ಲಿಯೇ ಬಬೀದರ ನಗರ ಪೊಲೀಸರು ಪತ್ತೆ ಹಚ್ಚಿದ್ದಾರೆ. ಮೇ 4 ರಂದು ಬೀದರ್​ನ ಓಲ್ಡ್ ಸಿಟಿಯ…

2 hours ago