ಬೀದರ್: ಲೋಕಸಭಾ ಚುನಾವಣೆ ಹಿನ್ನೆಲೆ, ಗಡಿ ಚೆಕ್ಪೊಸ್ಟ್ಗಳಲ್ಲಿ ತೀವ್ರ ನಿಗಾವಹಿಸಲಾಗಿದ್ದು ಜಿಲ್ಲೆಯ ಗಡಿ ಚೆಕ್ಪೋಸ್ಟ್ಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ ನಡೆಸಲಾಗುತ್ತಿದೆ.ಜಿಲ್ಲೆಯಾದ್ಯಂತ ನಿರ್ಮಾಣವಾಗಿರುವ ಒಟ್ಟು 18 ಚೆಕ್ಪೋಸ್ಟ್ಗಳಲ್ಲಿ ತಪಾಸಣೆ ನಡೆಸಲಾಗುತ್ತಿದೆ. ನೆರೆ ರಾಜ್ಯದಿಂದ ಜಿಲ್ಲೆಗೆ ಆಗಮಿಸೊ ಪ್ರತಿ ವಾಹನಗಳನ್ನ ತಪಾಸಣೆ ನಡೆಸಲಾಗುತ್ತಿದೆ.
ಬೀದರ್ ತಾಲೂಕಿನ ಶಹಾಪುರ ಗೇಟ್ ಮತ್ತು ಬಳಿ ಇರುವ ಚೆಕ್ಪೋಸ್ಟ್ಗಳಲ್ಲಿ ಪ್ರತಿ ವಾಹನಗಳನ್ನು ಸಿಬ್ಭಂದಿ ತಪಾಸಣೆ ನಡೆಸುತ್ತಿದ್ದಾರೆ.ಪ್ರತಿ ಚೆಕ್ಪೋಸ್ಟ್ಗಳಲ್ಲಿ ಎರಡು ಸಿಸಿಟಿವಿ ಕ್ಯಾಮೆರಾ ಅಳವಡಿಸಿ ತೀವ್ರ ನಿಗಾ ವಹಿಸಲಾಗುತ್ತಿದೆ. ಬಸ್, ಕಾರ್ ಸೇರಿದಂತೆ ಎಲ್ಲಾ ವಾಹನಗಳನ್ನ ಪರಿಶೀಲನೆ ನಡೆಸುತ್ತಿದ್ದು.ಪ್ರತಿ ಚೆಕ್ಪೋಸ್ಟ್ಗಳಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿ, ಅಬಕಾರಿ ಪೊಲೀಸರು, ಹಾಗೂ ಚುನಾವಣಾ ಸಿಬ್ಬಂದಿಯಿಂದ ತಪಾಸಣೆ ನಡೆಸಲಾಗುತ್ತಿದೆ. ಪ್ರತಿಯೊಂದು ವಾಹನಗಳ ನಂಬರ್ಗಳನ್ನ ದಾಖಲಿಸಿ, ಪರಿಶೀಲನೆ ನಡೆಸುತ್ತಿದ್ದಾರೆ.