Categories: ಬೀದರ್

ಸ್ವತಂತ್ರರಾಗಿ ಬದುಕಲು ಸ್ವತಂತ್ರ ಅಭ್ಯರ್ಥಿಯನ್ನು ಬೆಂಬಲಿಸಿ: ಕೆ. ಬುಕ್ಕಾ ಮನವಿ

ಬೀದರ್: ಜಿಲ್ಲೆಯ ಜ‌ನ ಸ್ವತಂತ್ರರಾಗಿ ಬದುಕಬೇಕಾದರೆ‌ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ನನಗೆ ಬೆಂಬಲಿಸಿ ಮತ ಹಾಕಬೇಕೆಂದು ಪಕ್ಷೇತರ ಅಭ್ಯರ್ಥಿ ಜೈರಾಜ ಕೆ. ಬುಕ್ಕಾ ಮನವಿ ಮಾಡಿದರು.

ನಗರದಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೂವತ್ತು ವರ್ಷಗಳಿಂದ ವಕೀಲನಾಗಿ, ಜನರ ನಡುವೆ ಇದ್ದೇನೆ. ಅವರ ಸಮಸ್ಯೆಗಳ ಅರಿವಿದೆ. ಎರಡೂ ರಾಷ್ಟ್ರೀಯ ಪಕ್ಷಗಳ ವಿರುದ್ಧ ಸ್ಪರ್ಧಿಸುತ್ತಿದ್ದೇನೆ. ಪಕ್ಷಗಳನ್ನು ನೋಡದೆ ಸಮರ್ಥರನ್ನು ಆಯ್ಕೆ ಮಾಡಬೇಕು ಎಂದು ಹೇಳಿದರು.

ಯಾರು ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸುತ್ತಾರೆ ಅಂತಹವರನ್ನು ಬೆಂಬಲಿಸಬೇಕು. ಸುದೀರ್ಘ ಅವಧಿಯಿಂದ ಈ ಕೆಲಸ ಮಾಡುತ್ತಿರುವೆ. ಜಿಲ್ಲೆಯನ್ನು ಭ್ರಷ್ಟಾಚಾರದಿಂದ ಮುಕ್ತಗೊಳಿಸುವುದು, ಜಿಲ್ಲೆಯ ರೈತರ ಸಾಲ ಮನ್ನಾ, ಮುಚ್ಚಿರುವ ಬೀದರ್ ಸಹಕಾರ ಸಕ್ಕರೆ ಕಾರ್ಖಾನೆ ಆರಂಭಿಸಲು ಶ್ರಮಿಸುವೆ. ಚುನಾವಣಾ ಪದ್ಧತಿಯಲ್ಲಿ‌ ಬದಲಾವಣೆಗೆ ಧ್ವನಿ ಎತ್ತುವೆ. ಕಬ್ಬು, ತೊಗರಿ, ಸೋಯಾಬೀನ್ ಗೆ ಬೆಂಬಲ ಬೆಲೆ ಕೊಡಿಸುವೆ. ಕಾರಂಜಾ ಸಂತ್ರಸ್ತರ ಮಕ್ಕಳಿಗೆ ನೌಕರಿ ಕೊಡಿಸಲು ಶ್ರಮಿಸುವೆ ಎಂದು ತಿಳಿಸಿದರು.

ಮಹಮ್ಮದ್ ವಿಕಾರುದ್ದಿನ್, ಮಹಮ್ಮದ್ ಫಾರೂಕ್, ಪೀರ್ ಬಾಬಾ ಮೈನುದ್ದಿನ್, ಸಿದ್ದಗೊಂಡ,‌ ಶನೇಶ್ವರ, ವೆಂಕಟ್ ಹಾಜರಿದ್ದರು.

Ashika S

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

4 hours ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

4 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

5 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

5 hours ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

5 hours ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

5 hours ago