ಬೀದರ್: ಜಿಲ್ಲೆಯ ಹುಮ್ನಾಬಾದ್ ತಾಲೂಕಿನಲ್ಲಿ ಮಂಗಳವಾರ ರಿಕ್ಟರ್ ಮಾಪಕದಲ್ಲಿ 2.6 ರಷ್ಟು ತೀವ್ರತೆಯಲ್ಲಿ ಭೂಕಂಪನ ಉಂಟಾಗಿದೆ. ಭೂಮಿ ಕಂಪಿಸಿದ ಅನುಭವ ಆಗಿದ್ದರಿಂದ ಜನರು ಮನೆಯಿಂದ ಹೊರ ಓಡಿ ಬಂದು ಭಯಭೀತಿಯಲ್ಲಿ ಕೆಲ ಕಾಲ ಸಮಯ ಕಳೆಯುವಂತೆ ಆಗಿದೆ. ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಈ ಹಿಂದೆ ಭೂ ಕಂಪನ ಉಂಟಾಗಿತ್ತು.
ಇದೀಗ ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಡಾಕುಳಗಿ ಗ್ರಾಮದಲ್ಲಿ ಮತ್ತೆ ಭೂ ಕಂಪನ ಉಂಟಾಗಿದೆ.