News Karnataka Kannada
Wednesday, April 24 2024
Cricket
ಬೀದರ್

ಅನುದಾನ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿಗೆ ಶಾಸಕ ಪ್ರಭು ಚವ್ಹಾಣ ಆಗ್ರಹ

ಬೀದರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿರುವ ಮಾನ್ಯ ಮುಖ್ಯಮಂತ್ರಿಯವರು ಜಿಲ್ಲೆಗೆ ಬರುವ ಮುನ್ನ ಬಸವಕಲ್ಯಾಣ ನೂತನ ಅನುಭವ ಮಂಟಪ ಕಾಮಗಾರಿಗೆ ಅನುದಾನ ಬಿಡುಗಡೆ ಮಾಡಬೇಕೆಂದು ಮಾಜಿ ಸಚಿವರು ಹಾಗೂ ಶಾಸಕರಾದ ಪ್ರಭು.ಬಿ ಚವ್ಹಾಣ ಅವರು ಆಗ್ರಹಿಸಿದ್ದಾರೆ.
Photo Credit : News Kannada

ಔರಾದ: ಬೀದರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿರುವ ಮಾನ್ಯ ಮುಖ್ಯಮಂತ್ರಿಯವರು ಜಿಲ್ಲೆಗೆ ಬರುವ ಮುನ್ನ ಬಸವಕಲ್ಯಾಣ ನೂತನ ಅನುಭವ ಮಂಟಪ ಕಾಮಗಾರಿಗೆ ಅನುದಾನ ಬಿಡುಗಡೆ ಮಾಡಬೇಕೆಂದು ಮಾಜಿ ಸಚಿವರು ಹಾಗೂ ಶಾಸಕರಾದ ಪ್ರಭು.ಬಿ ಚವ್ಹಾಣ ಅವರು ಆಗ್ರಹಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಸರ್ಕಾರ ಕಲ್ಯಾಣ ಕರ್ನಾಟಕ ಭಾಗವನ್ನು ಸಂಪೂರ್ಣ ಕಡೆಗಣಿಸಿದೆ. ಬಸವಕಲ್ಯಾಣ ಅನುಭವ ಮಂಟಪ ನಿರ್ಮಾಣಕ್ಕಾಗಿ ಹಿಂದೆ ಬಿಜೆಪಿ ನೇತೃತ್ವದ ಸರ್ಕಾರ ಸಾಕಷ್ಟು ಆಸಕ್ತಿ ವಹಿಸಿತ್ತು. ನಾನು ಸಚಿವನಾಗಿದ್ದ ಸಂದ‍ರ್ಭದಲ್ಲಿ 600 ಕೋಟಿ ಮಂಜೂರು ಮಾಡಿ 200 ಕೋಟಿ ಅನುದಾನ ಬಿಡುಗಡೆ ಮಾಡಲಾಗಿತ್ತು. ಹಿಂದಿನ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಅವರಿಂದ ಶಂಕುಸ್ಥಾಪನೆ ನೆರವೇರಿಸಿ, ಕಾಮಗಾರಿಯನ್ನು ಆರಂಭಿಸಲಾಗಿತ್ತು. ಆದರೆ ತಾವು ಅಧಿಕಾರ ವಹಿಸಿಕೊಂಡ ನಂತರ ಅನುದಾನ ಬಿಡುಗಡೆ ಆಗದಿರುವುದರಿಂದ ಕಾಮಗಾರಿ ನಿಂತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಾತೆತ್ತಿದರೆ ಬಸವಣ್ಣನವರ ಬಗ್ಗೆ ಮಾತನಾಡುವ ಮುಖ್ಯಮಂತ್ರಿಯವರು ಅಭಿವೃದ್ಧಿಯನ್ನು ಕೇವಲ ಭಾಷಣಕ್ಕೆ ಮಾತ್ರ ಸೀಮಿತಗೊಳಿಸಿದ್ದಾರೆ. ಬಸವಣ್ಣನವರ ಕಾಯಕ ತತ್ವವನ್ನೇ ಮರೆತಂತೆ ಕಾಣುತ್ತಿದೆ. ನಿಜವಾಗಿಯೂ ಬಸವಣ್ಣನವರ ಮೇಲೆ ಕಾಳಜಿ ಇದ್ದಲ್ಲಿ ಹಿಂದೆಯೇ ಅನುದಾನ ಬಿಡುಗಡೆ ಮಾಡಬೇಕಿತ್ತು. ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಖಂಡ್ರೆಯವರು ಅನುದಾನ ತರುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ. ಅನುದಾನ ತರಲಾಗಿದೆ ಎಂದು ಹೇಳಿ ಜನರನ್ನು ದಿಕ್ಕು ತಪ್ಪಿಸಲಾಗುತ್ತಿದೆ. ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಸರ್ಕಾರದಿಂದ ಜನತೆಗೆ ದಿಶಾಭೂಲ್‌ ಮಾಡಲಾಗುತ್ತಿದೆ ಎಂದಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಕೇವಲ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲು ಹೆಣಗಾಟ ನಡೆಸುತ್ತಿದೆ. ಅಧಿಕಾರಕ್ಕೆ ಬಂದ ನಂತರ ಬೇರೆ ಯೋಜನೆಗಳಿಗೆ ಅನುದಾನ ಬಿಡುಗಡೆ ಮಾಡದಿರುವುದರಿಂದ ಅಭಿವೃದ್ಧಿ ಕೆಲಸಗಳೆಲ್ಲ ಕುಂಠಿತಗೊಂಡಿವೆ. ಹಿಂದೆ ಔರಾದ(ಬಿ), ಕಮಲನಗರ ಒಳಗೊಂಡು ಇಡೀ ಜಿಲ್ಲೆಯನ್ನು ಬರ ಪೀಡಿತ ಪ್ರದೇಶವೆಂದು ಘೋಷಿಸಲಾಗಿದೆ. ಆದರೆ ಅನುದಾನ ಕೊರತೆಯಿಂದಾಗಿ ಇಂದಿಗೂ ಬರ ನಿರ್ವಹಣೆ ಕೆಲಸಗಳು ಸಮರ್ಪಕವಾಗಿ ನಡೆದಿಲ್ಲ.

ಸದ್ಯ ಎಲ್ಲ ಕಡೆಗಳಲ್ಲಿ ಬೇಸಿಗೆ ತೀವ್ರತೆ ಹೆಚ್ಚಾಗಿದ್ದು, ಅಂತರ್ಜಲ ಮಟ್ಟ ತೀವ್ರವಾಗಿ ಕುಸಿಯುತ್ತಿದೆ. ಜನತೆ ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ಎದುರಾಗಿದೆ. ಮುಂದಿನ ದಿನಗಳಲ್ಲಿ ಸಮಸ್ಯೆ ಇನ್ನಷ್ಟು ಉಲ್ಬಣವಾಗುವ ಸಾಧ್ಯತೆಯಿದ್ದು, ಬರ ನಿರ್ವಹಣೆಗಾಗಿ ಪ್ರತಿ ತಾಲ್ಲೂಕಿಗೆ ೨ ಕೋಟಿ ಅನುದಾನ ಕೂಡಲೇ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು