Categories: ಬೀದರ್

ಬೀದರ್ ನ ಹುಮನಾಬಾದ್‌ ಪಟ್ಟಣದಲ್ಲಿ ನೀರಿಗಾಗಿ ಹಾಹಾಕಾರ

ಹುಮನಾಬಾದ್‌: ‘ದಿನ ಬೆಳಗಾದರೆ ನಾವು ಕೂಲಿ ಕೆಲಸಕ್ಕೆ ಹೋಗಬೇಕು. ಇಲ್ಲದಿದ್ದರೆ ಮನೆಯ ನಿರ್ವಹಣೆ ಕಷ್ಟವಾಗುತ್ತದೆ. ಇಂತಹ ಸಂದರ್ಭದಲ್ಲಿ ಮನೆಮಂದಿ ಎಲ್ಲರೂ ನೀರಿಗಾಗಿ ಕಾಯ್ದುಕೊಂಡು ಇರಬೇಕಾದ ಪರಿಸ್ಥಿತಿ ಬಂದಿದೆ’. ಇದು ಹುಮನಾಬಾದ್‌ ಪಟ್ಟಣದ ಉಪಾರ್ ಹಾಗೂ ಧನಗರ್ ಗಡ್ಡ ಬಡಾವಣೆಯ ಜನರ ಗೋಳು.

ಕಾರಂಜಾ ಜಲಾಶಯದಿಂದ ಮೂರ್ನಾಲ್ಕು ದಿನಕ್ಕೆ ಒಮ್ಮೆ ಬಿಡಲಾಗುತ್ತಿರುವ ನೀರು ಸಮಯಕ್ಕೆ ಬಾರದೆ ಇರುವುದರಿಂದ ನಮ್ಮ ಬೇರೆಲ್ಲ ಕೆಲಸ ಬಿಟ್ಟು ನೀರಿಗಾಗಿ ಕಾಯುವುದು ನಿತ್ಯದ ಕಾಯಕವಾಗಿದೆ’ ಎಂದು ಉಪಾರ್ ಬಡಾವಣೆಯ ಸಾವಿತ್ರಿಬಾಯಿ, ಶಾಂತಾಬಾಯಿ ಗೋವಿಂದ್ ಬೇಸರ ವ್ಯಕ್ತಪಡಿಸಿದರು.

‘ಪಟ್ಟಣದಲ್ಲಿ ಒಟ್ಟು 27 ವಾರ್ಡ್‌ಗಳಿದ್ದು ಬಹುತೇಕ ವಾರ್ಡ್‌ಗಳಲ್ಲಿ ನೀರಿಗಾಗಿ ನಿತ್ಯ ಪರದಾಡುವುದು ಸಹಜವಾಗಿದೆ. ಆದರೆ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಮಾತ್ರ ತಲೆ ಕೆಡಿಸಿಕೊಳ್ಳುತ್ತಿಲ್ಲ’ ಎನ್ನುವುದು ಸಾರ್ವಜನಿಕರ ದೂರುತ್ತಿದ್ದಾರೆ. ನೀರಿನ ಸಮಸ್ಯೆಯಿಂದಾಗಿ ನಾವು ಸರಿಯಾಗಿ ಊಟ ಸಹ ಮಾಡದಂತಹ ಪರಿಸ್ಥಿತಿ ಬಂದಿದೆ. ನಮ್ಮ ಈ ಕಷ್ಟವನ್ನು ಅರಿತು ಕನಿಷ್ಠ ಎರಡು ದಿನಕ್ಕೊಮ್ಮೆ ಆದರೂ ನೀರು ಸರಬರಾಜು ಮಾಡಿ ಎಂದು ಉಪಾರ್ ಬಡಾವಣೆಯ ಶೋಭಾ, ಮೀನಾಕ್ಷಿ ಆಗ್ರಹಿಸಿದರು.

Chaitra Kulal

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

3 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

4 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

4 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

4 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

5 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

6 hours ago