News Karnataka Kannada
Tuesday, April 23 2024
Cricket
ಬೀದರ್

ವೈನ್ ಶಾಪ್ ಒಡೆದು ಮದ್ಯ ಕಳ್ಳತನ: 5 ಜನ ಕಳ್ಳರ ಬಂಧನ

ರಾತ್ರಿ ವೇಳೆ ವೈನ್ ಶಾಪ್'ಗಳಿಗೆ ಕನ್ನಾ ಹಾಕಿ ಮದ್ಯದ ಬಾಟಲ್'ಗಳನ್ನು ಕದಿಯುತಿದ್ದ ಖತರ್ನಾಕ್ ಕಳ್ಳರನ್ನು ಬಂಧಿಸುವಲ್ಲಿ ಪೊಲೀಸರ ತಂಡ ಯಶಸ್ವಿಯಾಗಿದೆ. ಬೀದರ ಜಿಲ್ಲೆಯ ಬಸವಕಲ್ಯಾಣ ಗ್ರಾಮೀಣ ಪೊಲೀಸ್ ಠಾಣೆಯ ಪೊಲೀಸರು ಮಧ್ಯದ ಅಂಗಡಿಗೆ ಕನ್ನ ಹಾಕಿದ ಕದೀಮರನ್ನು ಬಂಧಿಸಿದ್ದಾರೆ.
Photo Credit : News Kannada

ಬೀದರ್:  ರಾತ್ರಿ ವೇಳೆ ವೈನ್ ಶಾಪ್’ಗಳಿಗೆ ಕನ್ನಾ ಹಾಕಿ ಮದ್ಯದ ಬಾಟಲ್’ಗಳನ್ನು ಕದಿಯುತಿದ್ದ ಖತರ್ನಾಕ್ ಕಳ್ಳರನ್ನು ಬಂಧಿಸುವಲ್ಲಿ ಪೊಲೀಸರ ತಂಡ ಯಶಸ್ವಿಯಾಗಿದೆ.
ಬೀದರ ಜಿಲ್ಲೆಯ ಬಸವಕಲ್ಯಾಣ ಗ್ರಾಮೀಣ ಪೊಲೀಸ್ ಠಾಣೆಯ ಪೊಲೀಸರು ಮಧ್ಯದ ಅಂಗಡಿಗೆ ಕನ್ನ ಹಾಕಿದ ಕದೀಮರನ್ನು ಬಂಧಿಸಿದ್ದಾರೆ.
ಹುಮನಾಬಾದ ತಾಲೂಕಿನ ಘಾಟಬೋರಾಳ ಗ್ರಾಮದ ನಿವಾಸಿ ಕೃಷ್ಣ, ಸಚೀನ್ ಡಾಂಗೆ, ರಾಮೇಶ್ವರ, ಸಸ್ತಾಪೂರ ಗ್ರಾಮದ ನಿವಾಸಿ ರಾಜಕುಮಾರ ಬಂಧಿತ ಆರೋಪಿಗಳಾಗಿದ್ದಾರೆ.

ಈ ಆರೋಪಿಗಳು ಕಳೆದ 2 ವರ್ಷಗಳಿಂದ ತಾಲೂಕಿನ ರಾಜೇಶ್ವರ, ಮುಚಳಂಬ ಸೇರಿದಂತೆ ಜಿಲ್ಲೆಯ ಚಂದನಹಳ್ಳಿ, ಹುಡುಗಿ, ಸಾಯಗಾಂವ ಹಾಗೂ ಬ್ಯಾಲಹಳ್ಳಿ ಗ್ರಾಮದಲ್ಲಿಯ ವೈನ್ ಶಾಪ್’ಗಳಲ್ಲಿ ರಾತ್ರಿ ವೇಳೆ ಶಟರ್ ಮುರಿದು ಲಕ್ಷಾಂತರ ರೂ. ಮೌಲ್ಯದ ಮದ್ಯದ ಬಾಟಲ್’ಗಳನ್ನು ಕದ್ದು ನಾಪತ್ತೆಯಾಗಿದ್ದರು. ಈ ಕುರಿತು ಬಸವಕಲ್ಯಾಣ ಗ್ರಾಮೀಣ ಠಾಣೆ ಸೇರಿದಂತೆ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಇವರ ವಿರುದ್ಧ ಪ್ರಕರಣಗಳು ಕೂಡ ದಾಖಲಾಗಿದ್ದವು..

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಲಂಗೋಟಿ, ಡಿವೈಎಸ್ಪಿ ಜೆ.ಎಸ್. ನ್ಯಾಮಗೌಡರ್ ಅವರ ಮಾರ್ಗದರ್ಶನದಲ್ಲಿ ಮಂಠಾಳ ಸಿಪಿಐ ಕೃಷ್ಣಕುಮಾರ್ ಪಾಟೀಲ, ಪಿಎಸ್ಐ ಚಂದ್ರಶೇಖರ್ ನಾರಾಯಣಪೂರೆ, ವಂದನಾ ನೇತೃತ್ವದಲ್ಲಿ ಕಾರ್ಯಚರಣೆ ನಡೆಸಿದ ಪೊಲೀಸರ ತಂಡ 5 ಜನ ಆರೋಪಿಗಳನ್ನು ಬಂಧಿಸಿ ಅವರನ್ನು ಜೈಲಿಗೆ ಕಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಗಳಿಂದ 19,200 ರೂ. ಮೌಲ್ಯದ ಮದ್ಯದ ಬಾಟಲ್’ಗಳು, 4 ಲಕ್ಷ 25 ಸಾವಿರ ರೂ. ನಗದು ಹಣ ಹಾಗೂ ಒಂದು ಟಾಟಾ ಏಸ್ ವಾಹನ, ಒಂದು ಬೈಕ್ ಸೇರಿದಂತೆ ಕೃತ್ಯಕ್ಕೆ ಬಳಸಿದ ಆಯುಧಗಳನ್ನು ಜಪ್ತಿ ಮಾಡಿಕೊಳ್ಳುವಲ್ಲಿ ಪೊಲೀಸರ ತಂಡ ಯಶಸ್ವಿಯಾಗಿದೆ.

ಕಳ್ಳತನ ಮಾಡಿದ ಮದ್ಯ ಖರೀದಿಸಿದ ಆರೋಪ ಹಿನ್ನೆಲೆಯಲ್ಲಿ ಬಸವಕಲ್ಯಾಣ ತಾಲೂಕಿನ ಹಳ್ಳಿ ಗ್ರಾಮದ ನಿವಾಸಿ ನಾಗರಾಜ ಪಾಟೀಲ ಎನ್ನುವಾತನನ್ನು ಸಹ ಬಂಧಿಸಿ ಜೈಲಿಗೆ ಕಳಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು