News Karnataka Kannada
Thursday, May 02 2024
ಬೀದರ್

ಬೀದರ್: ಶಾಸಕ ಬಂಡೆಪ್ಪ ಖಾಶೆಂಪುರ್ ಸಮ್ಮುಖದಲ್ಲಿ ಜೆಡಿಎಸ್ ಸೇರಿದ ಆಣದೂರಿನ ಮಹಿಳೆಯರು

Women from Anadur join JD(S) in the presence of MLA Bandeppa Khashempur
Photo Credit : News Kannada

ಬೀದರ್ : ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಆಣದೂರು ಗ್ರಾಮದ ಅನೇಕ ಜನ ಮಹಿಳೆಯರು, ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರ ಸಮ್ಮುಖದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು.

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಖಾಶೆಂಪುರ್ ಪಿ ಗ್ರಾಮದ ಹೊರವಲಯದಲ್ಲಿರುವ ತಮ್ಮ ನಿವಾಸದ ಆವರಣದಲ್ಲಿ ಮಂಗಳವಾರ ಜೆಡಿಎಸ್ ಶಾಲು ಮತ್ತು ಪಕ್ಷದ ಧ್ವಜ ನೀಡುವ ಮೂಲಕ ಆಣದೂರಿನ ಮಹಿಳೆಯರನ್ನು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಜೆಡಿಎಸ್ ಪಕ್ಷಕ್ಕೆ ಬರಮಾಡಿಕೊಂಡರು.

ಈ ವೇಳೆ ಮಾತನಾಡಿದ ಶಾಸಕ ಬಂಡೆಪ್ಪ ಖಾಶೆಂಪುರ್ ರವರು, ಆಣದೂರಿನ ನೂರಾರು ಜನ ಮಹಿಳೆಯರು ನಮ್ಮ ಪಕ್ಷಕ್ಕೆ ಸೇರ್ಪಡೆಯಾಗುವ ಮೂಲಕ ಪಕ್ಷಕ್ಕೆ ಶಕ್ತಿ ತುಂಬುವ ಕೆಲಸ ಮಾಡ್ತಿದ್ದಾರೆ. ಮಹಿಳೆಯರು ರಾಜಕೀಯದ ಬಗ್ಗೆ ತಿಳಿದುಕೊಳ್ಳುವುದು ಅವಶ್ಯಕವಾಗಿರುವ ಈ ದಿನಗಳಲ್ಲಿ ಮಹಿಳೆಯರು ನಮ್ಮ ಪಕ್ಷಕ್ಕೆ ಆಗಮಿಸಿರುವುದು ಸಂತಸದ ವಿಷಯವಾಗಿದೆ ಎಂದರು.

ಜೆಡಿಎಸ್ ಪಕ್ಷದ ರಾಷ್ಟ್ರಾಧ್ಯಕ್ಷರಾದ ಹೆಚ್.ಡಿ ದೇವೇಗೌಡರ ಮಾರ್ಗದರ್ಶನದಲ್ಲಿ ಮಾಜಿ ಮುಖ್ಯಮಂತ್ರಿಗಳು, ಪಕ್ಷದ ಹಿರಿಯ ನಾಯಕರಾದ ಹೆಚ್.ಡಿ ಕುಮಾರಸ್ವಾಮಿರವರು, ಪಕ್ಷದ ರಾಜ್ಯಾಧ್ಯಕ್ಷರಾದ ಸಿಎಂ ಇಬ್ರಾಹಿಂರವರು ರಾಜ್ಯಾದ್ಯಂತ ಸಂಚರಿಸಿ ಪಕ್ಷ ಸಂಘಟನೆಯಲ್ಲಿ ತೊಡಗಿಕೊಂಡಿದ್ದಾರೆ.

ನಮ್ಮ ಪಕ್ಷ ಅಧಿಕಾರದಲ್ಲಿ ಇದ್ದಾಗಲೆಲ್ಲಾ ರಾಜ್ಯದ ರೈತರ, ಬಡವರ, ಮಹಿಳೆಯರ ಪರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಮುಂದಿನ ದಿನಗಳಲ್ಲಿ ಕೂಡ ಅತ್ಯುತ್ತಮ ಯೋಜನೆಗಳನ್ನು ಜಾರಿಗೆ ತರಲಿದ್ದೇವೆ. ಆಗಾಗಿ ಎಲ್ಲರೂ ಸೇರಿ ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತರುವ ಕೆಲಸ ಮಾಡೋಣ ಎಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ನೂತನವಾಗಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದ ಮಹಿಳೆಯರಿಗೆ ತಿಳಿಸಿದರು.

ಈ ಸಂದರ್ಭದಲ್ಲಿ ಆಣದೂರು ಭಾಗದ ಪಕ್ಷದ ಪ್ರಮುಖರಾದ ರಜನಿಕಾಂತ್ ಕಾಂಬ್ಳೆ, ನೂತನವಾಗಿ ಸೇರ್ಪಡೆಯಾದ ಇಂದುಮತಿ ಗುಪ್ತಾ, ಸಖುಬಾಯಿ ಅರಳಿಕರ್, ಶೋಭಾ ಕೋಟೆ, ಗೌರಮ್ಮ ರೇಖಿ, ಆಶಾ ಅಣದೂರೆ, ನಿಲ್ಲಮ್ಮ ಕಾಂಬ್ಳೆ, ಮಾದೇವಿ ಕೋಟೆ, ರತ್ನಮ್ಮ ಕೋಟೆ, ಲಕ್ಷ್ಮೀ ಗಾದಿಗಿಕರ್, ತುಕ್ಕಮ್ಮ ಸೇರಿದಂತೆ ಅನೇಕರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು