ಬೀದರ್: ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಿಸಲು ಕಾರ್ಯಕರ್ತರು ಒಗ್ಗೂಡಿ ಶ್ರಮಿಸಬೇಕು ಎಂದು ಕ್ಷೇತ್ರದ ಬಿಜೆಪಿ ಘೋಷಿತ ಅಭ್ಯರ್ಥಿ ಡಾ. ಶೈಲೇಂದ್ರ ಬೆಲ್ದಾಳೆ ಹೇಳಿದರು.
ಕಾರ್ಯಕರ್ತರ ಶ್ರಮದಿಂದಲೇ ಗೆಲುವು ಸಾಧ್ಯವಿದೆ. ಹೀಗಾಗಿ ಕಾರ್ಯಕರ್ತರು ಸ್ವತಃ ತಾವೇ ಅಭ್ಯರ್ಥಿ ಎಂದು ಭಾವಿಸಿ ಕೆಲಸ ಮಾಡಬೇಕು ಎಂದು ನುಡಿದರು.
15 ವರ್ಷಗಳಿಂದ ಕ್ಷೇತ್ರದ ಜನರ ಸೇವೆಯಲ್ಲಿ ತೊಡಗಿಸಿಕೊಂಡಿದ್ದೇನೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆ ಅರ್ಹರ ಮನೆ ಬಾಗಿಲಿಗೆ ತಲುಪಿಸಿದ್ದೇನೆ. ನಿಗಮ, ಮಂಡಳಿಯಿಂದಲೂ ಅನೇಕರಿಗೆ ವಿವಿಧ ಸೌಲಭ್ಯಗಳನ್ನು ಕಲ್ಪಿಸಿದ್ದೇನೆ ಎಂದು ತಿಳಿಸಿದರು.
ವರಿಷ್ಠರು ಇನ್ನೊಂದು ಅವಕಾಶ ಕೊಟ್ಟಿದ್ದಾರೆ. ಕಾರ್ಯಕರ್ತರು ಮನೆ ಮನೆಗೆ ಭೇಟಿ ಕೊಟ್ಟು ಮತದಾರರ ಮನ ಗೆಲ್ಲಲು ಪ್ರಯತ್ನಿಸಬೇಕು ಎಂದು ಹೇಳಿದರು.
ಕಾಂಗ್ರೆಸ್ ಹಾಗೂ ಜೆಡಿಎಸ್ನಿಂದ ಬಿಜೆಪಿಗೆ ಸೇರ್ಪಡೆಗೊಂಡ ಅನೇಕ ಪ್ರಮುಖರು ಮಾತನಾಡಿದರು. ಬಿ.ಜೆ.ಪಿ. ಎಸ್.ಸಿ. ಮೋರ್ಚಾ ರಾಷ್ಟ್ರೀಯ ಕಾರ್ಯಕದರ್ಶಿ ಜಯಕುಮಾರ ಕಾಂಗೆ, ಬೀದರ್ ನಗರಾಭಿವರದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುವಾಲಿ, ಮುಖಂಡ ಜಗನ್ನಾಥ ಜಮಾದಾರ್, ಬಿಜೆಪಿ ಬೀದರ್ ದಕ್ಷಿಣ ಮಂಡಲ ಅಧ್ಯಕ್ಷ ರಾಜರೆಡ್ಡಿ ಶಹಾಬಾದ್, ಪ್ರಧಾನ ಕಾರ್ಯದರ್ಶಿ ಚನ್ನಪ್ಪ ಗೌರಶೆಟ್ಟಿ, ಚಂದ್ರಯ್ಯ ಸ್ವಾಮಿ ಇದ್ದರು.