Categories: ಬೀದರ್

ಬಿಜೆಪಿ ಗೆಲ್ಲಿಸಲು ಒಗ್ಗೂಡಿ ಕೆಲಸ ಮಾಡಿ : ಶೈಲೇಂದ್ರ ಬೆಲ್ದಾಳೆ

ಬೀದರ್: ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಿಸಲು ಕಾರ್ಯಕರ್ತರು ಒಗ್ಗೂಡಿ ಶ್ರಮಿಸಬೇಕು ಎಂದು ಕ್ಷೇತ್ರದ ಬಿಜೆಪಿ ಘೋಷಿತ ಅಭ್ಯರ್ಥಿ ಡಾ. ಶೈಲೇಂದ್ರ ಬೆಲ್ದಾಳೆ ಹೇಳಿದರು.

ಕಾರ್ಯಕರ್ತರ ಶ್ರಮದಿಂದಲೇ ಗೆಲುವು ಸಾಧ್ಯವಿದೆ. ಹೀಗಾಗಿ ಕಾರ್ಯಕರ್ತರು ಸ್ವತಃ ತಾವೇ ಅಭ್ಯರ್ಥಿ ಎಂದು ಭಾವಿಸಿ ಕೆಲಸ ಮಾಡಬೇಕು ಎಂದು ನುಡಿದರು.

15 ವರ್ಷಗಳಿಂದ ಕ್ಷೇತ್ರದ ಜನರ ಸೇವೆಯಲ್ಲಿ ತೊಡಗಿಸಿಕೊಂಡಿದ್ದೇನೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆ ಅರ್ಹರ ಮನೆ ಬಾಗಿಲಿಗೆ ತಲುಪಿಸಿದ್ದೇನೆ. ನಿಗಮ, ಮಂಡಳಿಯಿಂದಲೂ ಅನೇಕರಿಗೆ ವಿವಿಧ ಸೌಲಭ್ಯಗಳನ್ನು ಕಲ್ಪಿಸಿದ್ದೇನೆ ಎಂದು ತಿಳಿಸಿದರು.

ವರಿಷ್ಠರು ಇನ್ನೊಂದು ಅವಕಾಶ ಕೊಟ್ಟಿದ್ದಾರೆ. ಕಾರ್ಯಕರ್ತರು ಮನೆ ಮನೆಗೆ ಭೇಟಿ ಕೊಟ್ಟು ಮತದಾರರ ಮನ ಗೆಲ್ಲಲು ಪ್ರಯತ್ನಿಸಬೇಕು ಎಂದು ಹೇಳಿದರು.

ಕಾಂಗ್ರೆಸ್ ಹಾಗೂ ಜೆಡಿಎಸ್‍ನಿಂದ ಬಿಜೆಪಿಗೆ ಸೇರ್ಪಡೆಗೊಂಡ ಅನೇಕ ಪ್ರಮುಖರು ಮಾತನಾಡಿದರು. ಬಿ.ಜೆ.ಪಿ. ಎಸ್.ಸಿ. ಮೋರ್ಚಾ ರಾಷ್ಟ್ರೀಯ ಕಾರ್ಯಕದರ್ಶಿ ಜಯಕುಮಾರ ಕಾಂಗೆ, ಬೀದರ್ ನಗರಾಭಿವರದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುವಾಲಿ, ಮುಖಂಡ ಜಗನ್ನಾಥ ಜಮಾದಾರ್, ಬಿಜೆಪಿ ಬೀದರ್ ದಕ್ಷಿಣ ಮಂಡಲ ಅಧ್ಯಕ್ಷ ರಾಜರೆಡ್ಡಿ ಶಹಾಬಾದ್, ಪ್ರಧಾನ ಕಾರ್ಯದರ್ಶಿ ಚನ್ನಪ್ಪ ಗೌರಶೆಟ್ಟಿ, ಚಂದ್ರಯ್ಯ ಸ್ವಾಮಿ ಇದ್ದರು.

Sneha Gowda

Recent Posts

ಆರ್​ಸಿಬಿಗೆ ಟ್ವೀಟ್​ ಮೂಲಕ ವಿಜಯ್​ ಮಲ್ಯ ಅಭಿನಂದನೆ

ಶನಿವಾರ ತಡರಾತ್ರಿ ನಡೆದ ಐಪಿಎಲ್​ನ ರೋಚಕ ಪಂದ್ಯದಲ್ಲಿ ಕನ್ನಡಿಗರ ನೆಚ್ಚಿನ ತಂಡವಾದ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡ ಹಾಲಿ ಚಾಂಪಿಯನ್​…

5 mins ago

ತಾಯಿಯ ಶವದ ಜೊತೆಗೆ ನಾಲ್ಕು ದಿನ ಕಳೆದಿದ್ದ ಬುದ್ಧಿಮಾಂದ್ಯ ಪುತ್ರಿಯೂ ಮೃತ್ಯು

ನಾಲ್ಕು ದಿನಗಳ ಹಿಂದೆ ಸಾವನ್ನಪ್ಪಿದ ತನ್ನ ತಾಯಿಯ ಮೃತದೇಹದ ಮುಂದೆ ಅನ್ನ ನೀರು ಇಲ್ಲದೆ ಇದ್ದ ವಿಶೇಷಚೇತನ ಮಗಳು ಕೂಡ…

11 mins ago

ಗರ್ಭಿಣಿಯರಲ್ಲಿ ಅಧಿಕ ರಕ್ತದೊತ್ತಡ ಜೀವಕ್ಕೆ ಗಂಡಾಂತರ

ಇಂದಿನ ದಿನಗಳಲ್ಲಿ ರಕ್ತದೊತ್ತಡದ ಸಮಸ್ಯೆ ಸರ್ವೇಸಾಮಾನ್ಯವಾಗಿದೆ. ಹೀಗೆ ರಕ್ತದೊತ್ತಡ ಸಮಸ್ಯೆ ಕಾಡುವುದಕ್ಕೆ ಕಾರಣಗಳು ಹಲವು. ಅದರಲ್ಲಿಯೂ ಮುಖ್ಯವಾಗಿ ನಮ್ಮ ಜೀವನ…

16 mins ago

ಬೆಂಗಳೂರಿನಲ್ಲಿ ತಿಂಗಳಿಗೆ ಸರಾಸರಿ 4.3 ಕೋಟಿ ಯೂನಿಟ್‌ ಹೆಚ್ಚಳ ವಿದ್ಯುತ್ ಬಳಕೆ

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ವ್ಯಾಪ್ತಿಯಲ್ಲಿ ಗೃಹ ಬಳಕೆಗೆ ತಿಂಗಳಿಗೆ ಸರಾಸರಿ 4.3 ಕೋಟಿ ಯೂನಿಟ್‌ ಹೆಚ್ಚುವರಿಯಾಗಿ ಬಳಕೆಯಾಗಿದೆ.

18 mins ago

ಮೊಬೈಲ್‌ಗಾಗಿ ತಮ್ಮನನ್ನೆ ಕೊಂದ ಪಾಪಿ ಅಣ್ಣ

ಆನೇಕಲ್ ತಾಲ್ಲೂಕಿನ ನೆರಿಗಾ ಗ್ರಾಮದಲ್ಲಿ ನಡೆದಿದ್ದ 15 ವರ್ಷದ ಬಾಲಕನ ಕೊಲೆ ಕೇಸ್‌ಗೆ ಹೊಸ ಟ್ವಿಸ್ಟ್ ಸಿಕ್ಕಿದೆ. ಮೃತ ಬಾಲಕ…

29 mins ago

ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ ಬಾಲಿವುಡ್​ನಿಂದ ಹೊರಬರುತ್ತೇನೆ: ಕಂಗನಾ ರಣಾವತ್

2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ರಾಜಕೀಯದ ಮೊದಲ ಇನ್ನಿಂಗ್ಸ್​ ಆರಂಭಿಸಿದ ಕಂಗನಾ ರಣಾವತ್ ಈ ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ…

31 mins ago