News Karnataka Kannada
Sunday, April 28 2024
ಬೀದರ್

ವಿಶ್ವ ಶಾಂತಿಗಾಗಿ ಯೋಗ ಅಗತ್ಯವಾಗಿದೆ: ಕೇಂದ್ರ ಸಚಿವ ಭಗವಂತ ಖೂಬಾ

Yoga is necessary for world peace: Union Minister Bhagwant Khuba
Photo Credit : News Kannada

ಬೀದರ್: ಕಳೆದ 9 ವರ್ಷಗಳಲ್ಲಿ ಸುಮಾರು 180 ದೇಶಗಳು ಭಾರತದ ಯೋಗ ಪದ್ದತಿಯನ್ನು ಅಳವಡಿಸಿಕೊಂಡಿದ್ದು ವಿಶ್ವ ಶಾಂತಿಗಾಗಿ ಯೋಗ ಅಗತ್ಯವಾಗಿದೆ ಎಂದು ನವೀಕರಿಸಬಹುದಾರ ಇಂಧನ ಮೂಲ ಹಾಗೂ ರಾಸಾಯನಿಕ ರಸಗೊಬ್ಬರ ಖಾತೆ ಕೇಂದ್ರ ಸಚಿವ ಭಗವಂತ ಖೂಬಾ ಹೇಳಿದರು.

ಅವರು ಬುಧವಾರ ಜಿಲ್ಲಾಡಳಿತ ಬೀದರ, ಜಿಲ್ಲಾ ಪಂಚಾಯತ, ಜಿಲ್ಲಾ ಆಯುಷ ಇಲಾಖೆ ಹಾಗೂ ವಿವಿಧ ಯೋಗ ಸಂಘ -ಸಂಸ್ಥೆಗಳ ಸಂಯುಕ್ತಾಶ್ರದಲ್ಲಿ ಬೀದರ ಜಿಲ್ಲಾ ನೆಹರು ಕ್ರೀಡಾಂಗಣದಲ್ಲಿ ಆಯೋಜಿಸಿದ 9ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

“ಯೋಗ ಫಾರ್ ವಸುದೈವ ಕುಟುಂಬಕA” ಧ್ಯೇಯದೊಂದಿಗೆ ಈ ಬಾರಿಯ ಅಂತರಾಷ್ಟ್ರೀಯ ಯೋಗ ದಿನವನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ವಿಶ್ವ ಸಂಸ್ಥೆಯ ಅಂಗಳದಲ್ಲಿ ಆಚರಿಸುತ್ತಿರುವುದು ಭಾರತದ ಪಾಲಿಗೆ ಸಂತಸದ ಸಂಗತಿಯಾಗಿದೆ. ಉತ್ತಮ ಆಹಾರ ಸೇವನೆಯ ಜೊತೆಗೆ ಯೋಗ ಮಾಡುವುದರಿಂದ ಜೀವನದುದ್ದಕ್ಕು ಆರೋಗ್ಯವಂತಾಗಿರಲು ಸಾಧ್ಯವಿದೆ. ಆದರಿಂದ ಜಾತಿ, ಧರ್ಮ, ಪಂಥ ಎನ್ನದೆ ಎಲ್ಲರೂ ದಿನನಿತ್ಯ ಯೋಗ ಮಾಡಬೇಕೆಂದರು.

ಪೌರಾಡಳಿತ ಹಾಗೂ ಹಜ್ ಖಾತೆ ಸಚಿವ ರಹೀಮ ಖಾನ ಮಾತನಾಡಿ, ಯೋಗ ಮಾಡುವದರಿಂದ ಮಾನಸಿಕ ಒತ್ತಡ ಶಮನವಾಗಿ ದಿನದ 24 ಗಂಟೆಯು ನಾವು ಉತ್ಸಾಹದಿಂದಿರಲು ಸಾಧ್ಯ, ಜೊತೆಗೆ ಯೋಗವು ಉತ್ತಮ ಆರೋಗ್ಯಕು ಸಹಕಾರಿಯಾಗಲಿದೆ ಎಂದು ಹೇಳಿದರು.

ಇಂದು ಅಂತರಾಷ್ಟ್ರೀಯ ಮಟ್ಟದಲ್ಲಿ ಯೋಗಕ್ಕೆ ಹೆಚ್ಚಿನ ಮಾನ್ಯತೆ ಸಿಕ್ಕಿದೆ, ಜೊತೆಗೆ ವಿಶ್ವದ ಎಲ್ಲಾ ದೇಶಗಳು ಭಾರತದತ್ತ ತಿರುಗಿ ನೋಡುವಂತಾಗಿದೆ.

ಮುಂದಿನ ದಿನಗಳಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಯೋಗಕ್ಕೆ ಇನ್ನು ಹೆಚ್ಚಿನ ಮಾನ್ಯತೆ ಸಿಗಲಿದೆ ಎಂದರು.
ಈ ಕಾರ್ಯಕ್ರಮದಲ್ಲಿ ಆಯುಷ ಇಲಾಖೆಯ ಯೋಗ ಪಟು ಆನಂದ ಅವರ ನೇತೃತ್ವದಲ್ಲಿ ಯೋಗ ಪ್ರದರ್ಶನ ನಡೆಯಿತು. ಅವರು ಯೋಗದ ವಿವಿಧ ಪ್ರಕಾರಗಳನ್ನು ಹೇಳಿಕೊಟ್ಟರು ವಿವಿಧ ಶಾಲಾ ಕಾಲೇಜಿನ ಮಕ್ಕಳು ಸೇರಿದಂತೆ ಹಲವಾರು ಜನರು ಈ ಯೋಗ ಪ್ರದರ್ಶನದಲ್ಲಿ ಭಾಗವಹಿಸುವ ಮೂಲಕ ಗಮನ ಸೆಳೆದರು.

ಈ ಯೋಗ ಪ್ರದರ್ಶನದಲ್ಲಿ ಕೇಂದ್ರ ಸಚಿವ ಭಗವಂತ ಖೂಬಾ, ಪೌರಾಡಳಿತ ಹಾಗೂ ಹಜ್ ಸಚಿವ ರಹೀಮ ಖಾನ, ಬೀದರ ದಕ್ಷಿಣ ಶಾಸಕ ಡಾ. ಶೈಲೇಂದ್ರ ಕೆ. ಬೆಲ್ದಾಳೆ, ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೀಲ್ಪಾ.ಎಂ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್, ಜಿಲ್ಲಾ ಆಯುಷ ಅಧಿಕಾರಿ ಡಾ. ರಾಜಕುಮಾರ ಬಿ. ಪಾಟೀಲ್, ಗುರುನಾಥ್ ಕೊಳ್ಳುರ್ ಸೇರಿದಂತೆ ಹಲವಾರು ಜನರು ಭಾಗವಹಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು